ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನಮಠದ ಪರಮ ಪೂಜ್ಯ ಗುರುಗಳಾದ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮಿಗಳವರ ಮಾರ್ಗದರ್ಶನದಲ್ಲಿ ಬೆಳೆದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ಕನಸಿನಂತೆ 1998 ರಂದು ನಿರ್ಮಿಸಿದ ಸಮುದಾಯ ಭವನ ಉದ್ಘಾಟನೆ ದಿನದಿಂದ ಆರಂಭಗೊಂಡ ವಿವಾಹ ಮಹೋತ್ಸವಕ್ಕೆ ಇಂದು 25ರ ಸಂಭ್ರಮ. ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನಡೆಯುವ ಈ ಶುಭ ವಿವಾಹ ಅಂದಿನಿಂದ ಇಂದಿನವರೆಗೆ ಸರಿಸುಮಾರು 500 ಕ್ಕಿಂತ ಹೆಚ್ಚು ದಾಂಪತ್ಯಜೀವನಗಳನ್ನು ಕಟ್ಟಿಕೊಟ್ಟಿದೆ.
ಇಂದಿನ ಪ್ರತಿ ವಿವಾಹ ಮಹೋತ್ಸವದ ವಿಶೇಷತೆ ಎಂದರೆ ಮದುವೆಯಾಗುವ ವಧು ವರರಿಗೆ ವಿವಾಹಕ್ಕೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಮಠವೇ ನೀಡುತ್ತದೆ.ಹೆಣ್ಣಿಗೆ ತಾಳಿ, ಕಾಲುಂಗುರ, ಬಟ್ಟೆ ನೀಡಿದರೆ. ಗಂಡಿಗೆ ಅಂಗಿ,ಪಂಚೆ, ಕಲ್ಪವೃಕ್ಷ ನೀಡುತ್ತಾರೆ.
ಕಳೆದ 2013 ರಿಂದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿಗಳವರ ಸಾನ್ನಿಧ್ಯದಲ್ಲಿ ನಡೆಯುತ್ತಿರುವ. ಇಡೀ ವಿವಾಹ ಮಹೋತ್ಸವದ ಸಂಪೂರ್ಣ ಹೊಣೆಗಾರಿಕೆ ಹಾಗೂ ಜವಾಬ್ದಾರಿಯನ್ನು ಹೊತ್ತುಕೊಂಡು ಮಹಾಸಂಸ್ಥಾನಮಠದ ಪ್ರಧಾನ ಕಾರ್ಯದರ್ಶಿಗಳೂ ಆದ ಶಿವಮೊಗ್ಗ ಶಾಖಾಮಠದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಸಲ್ಲಿಸುತ್ತಿರುವ ಸೇವೆ ಗೌರವಾನ್ವಿತವಾದದ್ದು.
ಆಸಕ್ತ ವಧು ವರರು ತಮ್ಮ ಇತ್ತೀಚಿನ ಭಾವಚಿತ್ರ,ಆಧಾರ್ ಕಾರ್ಡ್, ಜಾತಿ ಹಾಗೂ ಜನನ ಪ್ರಮಾಣ ಪತ್ರ,ಗ್ರಾಮ ಪಂಚಾಯಿತಿ ಅಥವಾ ನಗರಸಭೆಯಿಂದ ಪಡೆದ ದೃಢೀಕರಣ ಪತ್ರದೊಂದಿಗೆ ತಾವು ಹಾಗೂ ತಮ್ಮ ಪೋಷಕರೊಂದಿಗೆ ಬಂದು, ದಿನಾಂಕ : 10 /04 /2024 ರೊಳಗೆ ತಮ್ಮ ಹೆಸರನ್ನು ಮೇಲ್ಕಂಡ ವಿಳಾಸದಲ್ಲಿ ನೋಂದಾಯಿಸಿಕೊಳ್ಳಬೇಕೆಂದು ಕೋರುತ್ತೇವೆ.
ಆದರ್ಶ ದಂಪತಿಗಳಿಗೆ ಸನ್ಮಾನ :
ಪ್ರತಿ ವರ್ಷದಂತೆ ವಿವಾಹವಾಗಿ 50 ವರ್ಷ ತುಂಬಿದ ಹಿರಿಯ ಆದರ್ಶ ದಂಪತಿಗಳಿಗೆ ಸನ್ಮಾನವೂ ಸಹ ಇರುತ್ತದೆ. ಶ್ರೀ ಪ್ರಸನ್ನನಾಥ ಸ್ವಾಮೀಜಿ ನೇತೃತ್ವದಲ್ಲಿ ಇಂತಹ ಉಚಿತ ಸಾಮೂಹಿಕ ವಿವಾಹ ಸಮಾರಂಭಗಳನ್ನು ಎಂತಹುದೇ ಸಂದರ್ಭದಲ್ಲಿ ನಿಲ್ಲಿಸದೇ ಕಳೆದ 24 ವರ್ಷಗಳಿಂದ ನಿರಂತರವಾಗಿ, ವೈಭವಯುತವಾಗಿ ನಡೆಸಿಕೊಂಡು ಬರುತ್ತಿರುವ ಶಿವಮೊಗ್ಗದ ಶ್ರೀ ಆದಿಚುಂಚನಗಿರಿ ಶಾಖಾಮಠದ ಪ್ರಯತ್ನ ಶ್ಲಾಘನೀಯ ಹಾಗೂ ಗೌರವಾನ್ವಿತವಾದುದೇ ಹೌದು.
ಈ ಬಾರಿಯ 25ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ಏಪ್ರಿಲ್ 24ರ ಬುಧವಾರ ಬೆಳಿಗ್ಗೆ 9:30ಕ್ಕೆ ನಡೆಯಲಿದೆ. ಇದೇ ಸಂದರ್ಭದಲ್ಲಿ ಶ್ರೀ ಕಾಲಭೈರವೇಶ್ವರ ದೇವಾಲಯದ ವಾರ್ಷಿಕೋತ್ಸವ ಸಮಾರಂಭ ನಡೆಯಲಿದೆ ಎಂದು ಮಠದ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ಕೊರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ,08182-257958, 254141, 9742885627, 9844201506 ನಂಬರಿಗೆ ಸಂಪರ್ಕಿಸಿ.
ವಂದನೆಗಳೊಂದಿಗೆ