Site icon TUNGATARANGA

ಬರುವ ಚುನಾವಣೆಯಲ್ಲಿ ಬಿಜೆಪಿಯಿಂದ ಕನಿಷ್ಟ 140 ಶಾಸಕರ ಗೆಲುವಿನ ಗುರಿ: ಯಡಿಯೂರಪ್ಪ

ಶಿವಮೊಗ್ಗ, ಡಿ.04:
ಮುಂದಿನ ಚುನಾವಣೆಯಲ್ಲಿ 140 ಶಾಸಕರ ಗೆಲುವಿನ ಗುರಿ, ಶೀಘ್ರ ರಾಜ್ಯದಲ್ಲಿ ಪ್ರವಾಸ ಮಾಡುತ್ತೇನೆ. ರೈತರ, ಅಭಿವೃದ್ಧಿಗೆ ಮತ್ತು ಅವರ ಎಲ್ಲ ಕಷ್ಟಗಳಿಗೆ ನಾವು ಬದ್ಧರಾಗಿದ್ದೇವೆ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದಿಂದ 140 ರಿಂದ 150 ಶಾಸಕರನ್ನು ಗೆಲ್ಲಿಸುವ ಗುರಿಯಿದ್ದು, ಇದಕ್ಕಾಗಿ ಪಕ್ಷ ಸಂಘಟಿಸಲು ಶೀಘ್ರವೇ ರಾಜ್ಯದಾದ್ಯಂತ ಪ್ರವಾಸ ಮಾಡಲಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿಯ ವಿಶೇಷ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವಿಗೆ ಗರಿಷ್ಠ ಶ್ರಮ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಕೃಷಿಕರಿಗೆ ತೊಂದರೆಯಾಗುವ ಕಸ್ತೂರಿರಂಗನ್ ವರದಿ ಜಾರಿ ಬರಲು ಬಿಡುವುದಿಲ್ಲ. ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದ ಅವರು, ಕಾನೂನು ಪ್ರಕಾರವೇ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಆಯ್ಕೆ ನಡೆಯಲಿದೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಶ್ವದ ಅಗ್ರಗಣ್ಯ ನಾಯಕ ಎಂದು ಜಗತ್ತು ಒಪ್ಪಿಕೊಂಡಿದೆ. ದೇಶವನ್ನು ಮಾದರಿ ರಾಷ್ಟ್ರವನ್ನಾಗಿ ಮಾಡಲು ಶ್ರಮ ವಹಿಸಿರುವ ಅಗ್ರಗಣ್ಯ ನಾಯಕ ಮೋದಿ ಅವರು ಮತ್ತೊಂದು ಬಾರಿ ಪ್ರಧಾನಿಯಾಗಿ ದೇಶವನ್ನು ಅಗ್ರಗಣ್ಯ ರಾಷ್ಟವನ್ನಾಗಿ ಮಾಡಲಿ ಎಂದು ಆಶಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪನವರು ನಾನು ಹೋಗುವ ಎಲ್ಲಾ ದೇವಸ್ಥಾನಗಳಲ್ಲೂ ನರೇಂದ್ರ ಮೋದಿಯವರಿಗೆ ದೇವರು ಆರೋಗ್ಯ ಆಯುಷ್ಯ ನೀಡಲಿ ಎಂದು ಕೇಳಿಕೊಳ್ಳುತ್ತೇನೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್,ರಾಜ್ಯ ಉಸ್ತುವಾರಿಯಾದ ಅರುಣ್ ಸಿಂಗ್,ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಕೇಂದ್ರ ಸಚಿವ ಸದಾನಂದ ಗೌಡ, ಉಪ ಮುಖ್ಯಮಂತ್ರಿಗಳಾದ ಗೋವಿಂದ್ ಕಾರಜೋಳ, ಲಕ್ಷ್ಮಣ ಸವದಿ, ಸಚಿವರಾದ ಜಗದೀಶ್ ಶೆಟ್ಟರ್, ಕೆ ಎಸ್ ಈಶ್ವರಪ್ಪ,ಮತ್ತು ಅರವಿಂದ ಲಿಂಬಾವಳಿ,ಅರುಣ್ ಕುಮಾರ್, ರವಿಕುಮಾರ್, ಮಹೇಶ್ ತೆಂಗಿನಕಾಯಿ, ಮುನಿರಾಜು ಗೌಡ, ಸಂಸದ ಬಿ ವೈ ರಾಘವೇಂದ್ರ,ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ ಡಿ ಮೇಘರಾಜ್ ಸೇರಿದಂತೆ ಇನ್ನಿತರ ಪ್ರಮುಖರು ಈ ಸಂದರ್ಭದಲ್ಲಿದ್ದರು

Exit mobile version