ಶಿವಮೊಗ್ಗ, ಜ.08:
ಶಿವಮೊಗ್ಗ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಡಿಡಿಪಿಐ) ಆದ ರಮೇಶ್ ರವರ ಏಕೈಕ ಪುತ್ರನಾದ ಆರ್. ಜಯಂತ್ ಅವರು ನಿನ್ನೆ ಮದ್ಯರಾತ್ರಿ ಚಿತ್ರದುರ್ಗದ ನಿವಾಸದಲ್ಲಿ ಅಕಾಲಿಕವಾಗಿ ಸಾವಿಗೆ ಶರಣಾಗಿದ್ದಾರೆ. ಅವರಿಗೆ 24 ವರ್ಷ ವಯಸ್ಸಾಗಿತ್ತು.
ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಮುಗಿಸಿದ್ದ ಜಯಂತ್ ಅವರ ಸಾವಿನ ಕಾರಣ ನಿಖರವಾಗಿ ತಿಳಿದುಬಂದಿಲ್ಲ.
ಮೃತರ ಅಂತ್ಯಕ್ರಿಯೆಯನ್ನು ಹೊಸದುರ್ಗ ತಾಲ್ಲೂಕಿನ ಗುಡ್ಡದ ನೇರಲಕೇರಿಯಲ್ಲಿ ನೆರವೇರಿಸಲಾಗುವುದೆಂದು ಕುಟುಂಬದ ಮೂಲಗಳು ತಿಳಿಸಿವೆ.
ಚಿರಂಜೀವಿ ಜಯಂತ್ ಆತ್ಮಕ್ಕೆ ಗಣ್ಯರು ಕಂಬನಿ ಮಿಡಿದಿದ್ದು, ಶಿವಮೊಗ್ಗ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ನೌಕರರು ಹಾಗೂ ಗಣ್ಯರು ಸ್ಥಳಕ್ಕೆ ಬೇಟಿನೀಡಿ ಸಂತಾಪ ಸೂಚಿಸಿದ್ದಾರೆ.
ಮೃತರ ಕುಟುಂಬಕ್ಕೆ ದುಂಖ ಭರಿಸುವ ಶಕ್ತಿಯನ್ನು ಭಗವಂತ ನೀಡಲೆಂದು ಪ್ರಾರ್ಥಿಸಿದ್ದಾರೆ.