Site icon TUNGATARANGA

ಬಿಜೆಪಿಯಿಂದ ನನ್ನ ಉಚ್ಚಾಟನೆ,ವಿಜಯೇಂದ್ರ ಅವರಿಗೆ ಧನ್ಯವಾದ /ಬಾರೀ ಬೆಂಬಲ, ಹೊಸನಗರ ಟೀಮ್ ಇಲ್ಲಿದೆ


ಶಿವಮೊಗ್ಗ,ಏ.೨೩:
ಬಿಜೆಪಿಯಿಂದ ನನ್ನ ಉಚ್ಚಾಟನೆ ಬಳಿಕ ನನ್ನ ಸ್ಪರ್ಧೆ ಬಗ್ಗೆ ಎಲ್ಲರಿಗೂ ಸ್ಪಷ್ಟನೆ ಸಿಕ್ಕಿದೆ. ಇದಕ್ಕಾಗಿ ವಿಜಯೇಂದ್ರ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಸ್ವತಂತ್ರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ಅವರ ನಿವಾಸದಲ್ಲಿ ಇಂದು ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ೪೦ ವರ್ಷಗಳ ಕಾಲದಲ್ಲಿ ಪಕ್ಷ ಕಟ್ಟಿ ಬೆಳೆಸಿದ್ದು ನೀವು, ನಿಮಗೆ ಉದ್ಘಾಟನೆ ಯೇ ಎಂದು ಅನೇಕ ಹಿರಿಯರು ಪ್ರಶ್ನಿಸುತ್ತಿದ್ದಾರೆ. ಇನ್ನೂ ಅನೇಕರು ನಿಮಗೆ ಅನ್ಯಾಯವಾಗಿದೆ, ನಿಮ್ಮ ಜೊತೆ ನಾವಿದ್ದೇವೆ ಎಂದು ಕರೆ ಮಾಡಿ ತಿಳಿಸುತ್ತಿದ್ದಾರೆ. ದಿನೇ ದಿನೇ ನನ್ನ

ನಿರೀಕ್ಷೆಗೂ ಮೀರಿ ಬೆಂಬಲ ಸಿಗುತ್ತಿದೆ. ಈ ಉಚ್ಚಾಟನೆ ಕೇವಲ ತಾತ್ಕಾಲಿಕ ಮಾತ್ರ. ಚುನಾವಣೆಯಲ್ಲಿ ಗೆದ್ದ ಬಳಿಕ ಮತ್ತೆ ಬಿಜೆಪಿ ಸೇರುತ್ತೇನೆ ಎಂದು ಹೇಳಿ ದರು.ಇದೇ ವಿಜಯೇಂದ್ರ, ರಾಘವೇಂದ್ರ ಅವರು ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯುತ್ತಾರೆ ಎಂದು ಪದೇ ಪದೇ ಹೇಳುತ್ತಾ, ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುತ್ತಿದ್ದರು. ಈಗ ಪಕ್ಷದಿಂದ ಉಚ್ಚಾಟನೆ ಆಗಿದೆ. ನಾನು ಸ್ಪರ್ಧೆ ಮಾಡೇ ಮಾಡುತ್ತೇನೆ ಎಂಬುದಕ್ಕೆ ಈಗ ಸ್ಪಷ್ಟನೆ ಸಿಕ್ಕಿದೆ. ಈ ಹಿನ್ನೆಲೆ ಇತರೆ ಪಕ್ಷದ ಅನೇಕರು ನನ್ನ ಬೆಂಬಲಕ್ಕೆ ಬರುತ್ತಿ ದ್ದಾರೆ.

ಹೊಸನಗರ ತಾಲೂಕಿನ ಹಲವು ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಸದಸ್ಯರು, ಇತರೆ ಪಕ್ಷದ ಪ್ರಮುಖರು ರಾಷ್ಟ್ರ ಭಕ್ತರ ಬಳಗ ಸೇರ್ಪ ಡೆಯಾಗಿದ್ದಾರೆ. ಸೊರಬ ತಾಲೂಕಿನ ಆನವಟ್ಟಿ ಭಾಗದಲ್ಲೂ ಕೂಡ ಅನೇಕ ಕಾರ್ಯಕರ್ತರು ರಾಷ್ಟ್ರಭಕ್ತರ ಬಳಗ ಸೇರ್ಪಡೆಯಾಗುತ್ತಿದ್ದಾರೆ ಎಂದರು. ಅಪ್ಪನ ಬೆಂಬಲದಿಂದ ರಾಜ್ಯಾಧ್ಯಕ್ಷನಾಗಿರುವ ಎಳೆಸು ವಿಜಯೇಂದ್ರ ನಿಮ್ಮನ್ನು ಪಕ್ಷದಿಂದ ಹೊರಹಾಕಿದ್ದಾನೆ. ನಿಮಗೆ ಅನ್ಯಾಯವಾಗಿ ಎಂದು ಕಾರ್ಯಕರ್ತರು ನೋವಿನಿಂದ ಕರೆ ಮಾಡುತ್ತಿದ್ದಾರೆ. ಈ ಅಪ್ಪ-ಮಕ್ಕಳಿಂದ ಈಶ್ವರಪ್ಪ ಹಾಗೂ ಹಿಂದುತ್ವಕ್ಕೆ ಅನ್ಯಾಯ ವಾಗಿದೆ.ಹೀಗಾಗಿ ಪ್ರತಿ ಬೂತ್‌ನಲ್ಲೂ ಈಶ್ವರಪ್ಪ ಅವರಿಗೆ ಮತ ಕೊಡಬೇಕು ಎಂದು ಜನರೇ ತೀರ್ಮಾನ ಮಾಡಿ ದ್ದಾರೆ. ನಾನು ಚುನಾವಣೆಯಲ್ಲಿ ಗೆದ್ದ ಬಳಿಕ ಇಲ್ಲಿ ರಾಘವೇಂದ್ರ ಮನೆಗೆ ಹೋಗುತ್ತಾರೆ, ವಿಜಯೇಂದ್ರ ರಾಜ್ಯಾ ಧ್ಯಕ್ಷ ಸ್ಥಾನದಿಂದ ಕೆಳಗಿಳಿಯುತ್ತಾರೆ. ಪಕ್ಷದ ಅಪ್ಪ-ಮಕ್ಕಳ ಕೈಯಿಂದ ಮುಕ್ತವಾಗುತ್ತದೆ ಎಂದು ಖಾರವಾಗಿ ಹೇಳಿದರು.

ಜನ್ಮ ಇರೋವರೆಗೂ ಕಾಂಗ್ರೆಸ್‌ಗೆ ಹೋಗಲ್ಲ:
ಬಿಜೆಪಿ ಪಕ್ಷ ನನಗೆ ತಾಯಿ ಇದ್ದಂತೆ. ಯಡಿಯೂರಪ್ಪ ಅವರು ಪಕ್ಷ ಬಿಟ್ಟು ಕೆಜೆಪಿ ಕಟ್ಟಿದರು. ನಾನು ಯಾವತ್ತು ಪಕ್ಷ ಬಿಟ್ಟು ಹೋಗುವ ಬಗ್ಗೆ ಕಿಂಚಿತ್ತು ಯೋಚಿಸಿಲ್ಲ. ಈಗ ಅಪ್ಪ-ಮಕ್ಕಳ ಷಡ್ಯಂತ್ರದಿಂದ ತಾತ್ಕಲಿಕವಾಗಿ ಪಕ್ಷದಿಂದ ಹೊರಗಿದ್ದೇನೆ. ಚುನಾವಣೆ ಬಳಿಕ ಅವರಪ್ಪನೇ ಬಂದು ಕರಿತಾರೆ. ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಹೋಗಿ ಸೋತಿದ್ದ ಜಗದೀಶ್ ಶೆಟ್ಟರ್ ಅನ್ನೇ ಕರೆದುಕೊಂಡು ಬಂದು ಲೋಕಸಭೆಗೆ ಟಿಕೆಟ್ ಕೊಡಿಸಿದ್ದಾರೆ. ಪಕ್ಷದ ಕಟ್ಟಿ ಬೆಳೆಸಿದ ನನ್ನನ್ನು ಬಿಜೆಪಿಯಿಂದ ದೂರ ಮಾಡಲು ಆಗಲ್ಲ. ನನ್ನನ್ನು ಪಕ್ಷದಿಂದ ಹೊರಹಾಕಬೇಕು ಎಂದು ಅಪ್ಪ-ಮಕ್ಕಳು ಬಹಳ ಪ್ರಯತ್ನ ಮಾಡಿದ್ದರು. ಈಗ ಅವರಿಗೆ ಸಮಾಧಾನವಾಗಿದೆ. ಆದರೆ, ನನ್ನ ಜನ್ಮ ಇರೋವರೆಗೂ ಕಾಂಗ್ರೆಸ್‌ಗೆ ಹೋಗಲ್ಲ ಎಂದು ಹರಿಹಾಯ್ದರು.
ಚುನಾವಣೆ ಬಳಿಕ ಅಪ್ಪ-ಮಕ್ಕಳಿಂದ ಬಿಜೆಪಿ ಮುಕ್ತವಾಗುತ್ತದೆ

Exit mobile version