Site icon TUNGATARANGA

ಮೇ.18 ಎ.ಟಿ.ಎನ್.ಸಿ.ಸಿ ಕಾಲೇಜಿನಲ್ಲಿ  ‘ಆಚಾರ್ಯ ಅದ್ವಿತೀಯ’ ರಾಜ್ಯಮಟ್ಟದ ಸಾಂಸ್ಕೃತಿಕ ಮತ್ತು ನಿರ್ವಹಣಾ ಉತ್ಸವ

ಶಿವಮೊಗ್ಗ : ರಾಷ್ಟ್ರೀಯ ಶಿಕ್ಷಣ ಸಮಿತಿಯ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಮೇ.18 ರ ಶನಿವಾರ ಕಾಲೇಜಿನ ಆವರಣದಲ್ಲಿ  ‘ಆಚಾರ್ಯ ಅದ್ವಿತೀಯ’ ರಾಜ್ಯಮಟ್ಟದ ಸಾಂಸ್ಕೃತಿಕ ಮತ್ತು ನಿರ್ವಹಣಾ ಉತ್ಸವ ಏರ್ಪಡಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಪಿ.ಆರ್.ಮಮತಾ ಸುದ್ದಿಗೋಷ್ಟಿಯಲ್ಲಿ ವಿವರಿಸಿದರು.

ಅಂದು ಬೆಳಗ್ಗೆ 10:00 ಕ್ಕೆ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯ ಕುಲಪತಿಗಳಾದ ಪ್ರೊ.ಶರತ್ ಅನಂತಮೂರ್ತಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕುಲಸಚಿವರಾದ ಎ.ಎಲ್.ಮಂಜುನಾಥ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್, ಕಾರ್ಯದರ್ಶಿ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 

ಸಮಾರೋಪ ಸಮಾರಂಭದಲ್ಲಿ ಉನ್ನತ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರಾದ ಪ್ರೊ.ವಿಷ್ಣುಮೂರ್ತಿ, ಕುವೆಂಪು ವಿವಿ ಪರೀಕ್ಷಾಂಗ ಕುಲಸಚಿವರಾದ ಪ್ರೊ.ಎಸ್.ಎಂ.ಗೋಪಿನಾಥ, ಖ್ಯಾತ ಉದ್ಯಮಿ ನಿವೇದನ ನೆಂಪೆ, ಖ್ಯಾತ ವೈದ್ಯ ಡಾ.ರಾಹುಲ್ ದೇವರಾಜ, ರಾಷ್ಟ್ರೀಯ ಶಿಕ್ಷಣ ಸಮಿತಿ ಖಜಾಂಚಿಗಳಾದ ಡಿ.ಜಿ.ರಮೇಶ್, ನಿರ್ದೇಶಕರಾದ ಅಶ್ವಥನಾರಾಯಣ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ರಾಜ್ಯದ ವಿವಿಧ ಕಾಲೇಜುಗಳ ಸುಮಾರು 500 ಕ್ಕು ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಬೆಸ್ಟ್ ಮ್ಯಾನೇಜರ್, ಮಾರ್ಕೆಟಿಂಗ್, ಹೆಚ್ಆರ್, ಫೈನಾನ್ಸ್, ಹಾಡು, ನೃತ್ಯ, ರೀಲ್ಸ್, ಚಿತ್ರಕಲೆ, ಸ್ಟಾಂಡ್ ಅಪ್ ಕಾಮಿಡಿ ಸೇರಿದಂತೆ 10 ವಿವಿಧ ಸಾಂಸ್ಕೃತಿಕ ಮತ್ತು ನಿರ್ವಹಣಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ವಿವರಿಸಿದರು.

*******

ವಿದ್ಯಾರ್ಥಿಗಳಿಂದ ಫ್ಲಾಷ್ ಮಾಬ್

ಪತ್ರಿಕಾಗೋಷ್ಟಿಯ ನಂತರ ವಿದ್ಯಾರ್ಥಿಗಳು ಕಾರ್ಯಕ್ರಮದ ಕಾಲೇಜಿನ ತಾರಸಿ ಮೇಲಿಂದ ಲೋಗೊ‌ ಅನಾವರಣಗೊಳಿಸಿ ಬಣ್ಣದ ಹೊಗೆಯ ಮಂಜು ಬೀರಿ ಸಂಭ್ರಮಿಸಿದರು. ವಿವಿಧ ಹಾಡುಗಳಿಗೆ ಹೆಜ್ಜೆ ಹಾಕಿದರು.

*******

ಸುದ್ದಿಗೋಷ್ಟಿಯಲ್ಲಿ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ.ಎಸ್.ಜಗದೀಶ್, ಪ್ರೊ.ಕೆ.ಎಂ.ನಾಗರಾಜ, ಪ್ರೊ.ಎನ್.ಮಂಜುನಾಥ, ಪ್ರೊ.ಜಿ.ರವಿಕುಮಾರ್ ಉಪಸ್ಥಿತರಿದ್ದರು.

Exit mobile version