Site icon TUNGATARANGA

ಜೂನ್ 3 ರಂದು ನಡೆಯಲಿರುವ ಚುನಾವಣೆಯಲ್ಲಿ ಆಯನೂರು ಮಂಜುನಾಥ್ ಹಾಗೂ ಡಾ.ಕೆ.ಕೆ ಮಂಜುನಾಥ್ ರವರನ್ನು ಗೆಲ್ಲಿಸುವಂತೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಮನವಿ

ಶಿವಮೊಗ್ಗ: ಜೂನ್ 3 ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ನೈಋತ್ಯ ಪದವೀಧರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರದಿಂದ

ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಅವರು ಸ್ಪರ್ಧಿಸಿದ್ದು,  ತಾವೆಲ್ಲರೂ ತಮ್ಮ ಅಮೂಲ್ಯ ಮತವನ್ನು ನೀಡುವ ಮೂಲಕ ವಿಧಾನಪರಿಷತ್ ಗೆ ಆಯ್ಕೆ ಮಾಡುವುದರ ಜೊತೆಗೆ ತಮ್ಮ ಸಂಬಂಧಿಕರು,  ಸ್ನೇಹಿತರಿಂದಲೂ ಮತ ಕೊಡಿಸಿ ಗೆಲ್ಲಿಸುವಂತೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಮನವಿ ಮಾಡಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ನೈಋತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದಿಂದ ನಡೆಯುವ ವಿಧಾನ ಪರಿಷತ್ ಚುನಾವಣೆಯ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಮಾಜಿ ಸಚಿವ ಅಭಯಚಂದ್ರ ಜೈನ್, ಜಿಲ್ಲಾಧ್ಯಕ್ಷ ಆರ್. ಪ್ರಸನ್ನ ಕುಮಾರ್, ನೈರುತ್ಯ

ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್, ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ. ಕೆ.ಕೆ ಮಂಜುನಾಥ್ ಕುಮಾರ್,  ಶಾಸಕ ಗೋಪಾಲಕೃಷ್ಣ ಬೇಳೂರು, ಎಂಎಡಿಬಿ ಅಧ್ಯಕ್ಷ ಆರ್.ಎಂ ಮಂಜುನಾಥಗೌಡ್ರು,

ಸೂಡಾ ಅಧ್ಯಕ್ಷ ಹೆಚ್.ಎಸ್ ಸುಂದರೇಶ್, ಭೋವಿ ನಿಗಮದ ಅಧ್ಯಕ್ಷ ಎನ್.ರವಿ ಕುಮಾರ್, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಲ್ಲವಿ, ಮರಿಯಪ್ಪ, ಶ್ರೀನಿವಾಸ್ ಕರಿಯಣ್ಣ, ಹೆಚ್. ಸಿ ಯೋಗೇಶ್, ಬಲ್ಕಿಷ್ ಬಾನು ಸೇರಿದಂತೆ ಹಲವರಿದ್ದರು.

Exit mobile version