Site icon TUNGATARANGA

ಪ್ರತಿಯೊಬ್ಬ ಶಿಕ್ಷಕರು ಮಕ್ಕಳ ಜೊತೆ ಉತ್ತಮ ಒಡನಾಟದಿಂದಿರಬೇಕು, ಆಗ ಮಕ್ಕಳ ಪ್ರೌಢಿಮೆ ಬೆಳೆಯಲು ಸಾಧ್ಯ : ಶ್ರೀ ಪ್ರಸನ್ನನಾಥ ಸ್ವಾಮೀಜಿ

ಶಿವಮೊಗ್ಗ, ಮೇ.23:
ವೃತ್ತಿಗೆ ಗೌರವ ಕೊಡಿ, ಯಾವ ವ್ಯಕ್ತಿ ವೃತ್ತಿಗೆ ಗೌರವ ಕೊಡುತ್ತಾನೋ ಆ ವ್ಯಕ್ತಿಯ ಬದುಕು ಹಸನಾಗುವುದು, ಪ್ರತಿಯೊಬ್ಬ ಶಿಕ್ಷಕರು ಮಕ್ಕಳ ಜೊತೆ ಉತ್ತಮ ಒಡನಾಟದಿಂದ ಇರಬೇಕು, ಅವರಿಗೆ ಬೇಕು-ಬೇಡಗಳ ಬಗ್ಗೆ ತಿಳಿದು ತರಬೇತಿ ಕೊಟ್ಟಾಗ ಮಾತ್ರ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ. ಮಕ್ಕಳ ಪ್ರೌಡಿಮೆ ಬೆಳೆಯಲು ಸಾಧ್ಯ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ತಿಳಿಸಿದರು.


ಅವರು ಶಿಕ್ಷಕರ ಕಾರ್ಯಗಾರಕ್ಕೆ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.
ಅವರು ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್, ಶಿವಮೊಗ್ಗ ಶಾಖೆಯ ಎಸ್.ಎ. ವಿ. ಭದ್ರಾವತಿ, ಬಿ ಜಿ ಎಸ್ ಸಭಾ ಭವನದಲ್ಲಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ವ್ಯಾಪ್ತಿಯ ವಿವಿಧ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರ ಮೂರು ದಿನಗಳವರಗೆ ನಡೆಯುತ್ತಿರುವ ಜಿಲ್ಲಾ ಮಟ್ಟ ಕಾರ್ಯಗಾರದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಾ, ಒಂದು ಶಾಲೆಯಲ್ಲಿ ಮಕ್ಕಳಲ್ಲಿ ಶಿಸ್ತು, ಸಂಯಮ, ಇದೆ ಅಂದರೆ ಅದಕ್ಕೆ ಶಿಕ್ಷಕರ ಪಾತ್ರ ದೊಡ್ಡದು, ಪೋಷಕರ ಜೊತೆಗೆ ಆತ್ಮೀಯತೆಯಿಂದ ಇರಬೇಕು ಎಂದರು.

ಈಗಾಗಲೇ ರಾಜ್ಯದ ನುರಿತ ವಿವಿಧ ಶಿಕ್ಷಣ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಂಪನ್ಮೂಲ ವ್ಯಕ್ತಿಗಳಿಂದ ತಮಗೆ ಕಾರ್ಯಾಗಾರ ನಡೆಸುತ್ತಿದ್ದು,ಇದರ ಸದುಪಯೋಗ ಪಡೆದುಕೊಂಡು, ತಮ್ಮ ವಿದ್ಯಾರ್ಥಿಗಳಿಗೆ ತರಬೇತಿಯನ್ನು ಕೊಟ್ಟು ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಂದ ತಾವು ಉತ್ತಮ ಸಾಧನೆ ಮಾಡಿಸಬೇಕಾಗಿದೆ ಎಂದು ಶಿಕ್ಷಕರಿಗೆ ಕಿವಿ ಮಾತು ತಿಳಿಸಿದರು.


ಮಕ್ಕಳಿಗೆ ತರಬೇತಿ, ನಿರಂತರ ಅಭ್ಯಾಸ ಮಾಡುವುದರ ಮೂಲಕ ಅವರ ಸಾಧನೆಗೆ ಶಕ್ತಿ ತುಂಬುವುದು, ಮಕ್ಕಳಲ್ಲಿ ಅನೇಕ ನೂನ್ಯತೆ ಗಳಿರುತ್ತವೆ, ಅವುಗಳನ್ನು ತಿದ್ದಿ-ತೀಡಿ ಉತ್ತಮ ರೀತಿಯಲ್ಲಿ ಒಬ್ಬ ಪ್ರಜ್ಞಾವಂತರನ್ನಾಗಿ ಸಜ್ಜುಗೊಳಿಸುವುದರಲ್ಲಿ ತಮ್ಮಗಳ ಪಾತ್ರ ದೊಡ್ಡದು ಎಂದರು.


ಈ ಕಾರ್ಯಗಾರದಲ್ಲಿ ವಿವಿಧ ಜಿಲ್ಲೆಯ ಸುಮಾರು 350 ಕ್ಕೂ ಹೆಚ್ಚು ವಿವಿಧ ವಿಷಯಗಳ ಶಿಕ್ಷಕರು, ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಪಡೆಯುತ್ತಿರುವುದು ಮತ್ತೊಂದು ವಿಶೇಷ.
ಕಾರ್ಯಕ್ರಮದಲ್ಲಿ ಸಾಯಿನಾಥ ಸ್ವಾಮೀಜಿ ಯವರು, ನಿರ್ದೇಶಕರುಗಳಾದ, ವಾಸಪ್ಪ ಕೊಳಿಗೆ, ಸತೀಶ್ ಡಿ. ವಿ., ಕಾಲೇಜಿನ ಪ್ರಾಂಶುಪಾಲರಾದ ಗುರುರಾಜ್ ಎಸ್. ವಿ.,ಸಂಪನ್ಮೂಲ ವ್ಯಕ್ತಿಗಳಾದ ಲೋಹಿತಾಶ್ವ, ವಿಜಯ ವಾಮನ್, ಗೌರಿಶಂಕರ್, ಗಿರಿಧರ್ ಮೂರ್ತಿ, ಸತೀಶ್, ಸುನೀಲ್ ಕುಮರ್, ಮನೋ ತಜ್ಞರಾದ ಡಾ. ಐಶ್ವರ್ಯ, ಡಾ.ಅಮುದ ಸಿ. ಮುನಿರಾಜು ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಭದ್ರಾವತಿಯ ಆಡಳಿತಾಧಿಕಾರಿಗಳಾದ ಜಗದೀಶ್ ಬಿ. ಎಸ್. ಎ. ವಿ. ಕಾಲೇಜಿನ ಪ್ರಾಂಶುಪಾಲರಾದ ಡಾ. ಅರುಣಾಕ್ಷಿ, ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ಎಲ್ಲಾ ಶಿಕ್ಷಕರು ಮತ್ತು ಶಿಕ್ಷಕಿಯರು ಉಪಸ್ಥಿತರಿದ್ದರು.

 

Exit mobile version