Site icon TUNGATARANGA

6000 /-ಗಳ ಲಂಚಕ್ಕೆ ಬೇಡಿಕೆ ಇಟ್ಟ /ಗ್ರಾಮ ಆಡಳಿತ ಅಧಿಕಾರಿ ಸುರೇಶ್ ಲೋಕಾಯುಕ್ತ ಬಲೆಗೆ

ಶಿವಮೊಗ್ಗ, ಮೇ.೩೧:
ಮೇ ೩೦ರಂದು ಶಿವಮೊಗ್ಗ ತಾಲೂಕು ಕಸಬಾ -೧ ಹೋಬಳಿ, ಗಾಡಿಕೊಪ್ಪ ವೃತ್ತ, ಗ್ರಾಮ ಅಡಳಿತ ಅಧಿಕಾರಿ ಸುರೇಶ್ ಜಿ. ಬಿನ್ ನಾಗಪ್ಪಜಿ ಎಂಬುವವರು ಜಮೀನು ಖಾತೆ ಮಾಡಿಕೊಡಲು ಆರು ಸಾವಿರ ರೂ.ಗಳ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.


ನಗರದ ಕೃಷಿನಗರ ವಾಸಿ ಸಂಕೇತ್ ಎಂಬುವವರು ಖರೀದಿಸಿದ ಜಮೀನನ್ನು ತನ್ನ ತಾಯಿ ವೀಣಾ ಬಿ.ಎಂ. ಎಂಬುವವರ ಹೆಸರಿಗೆ ನೋಂದಣಿ ಮಾಡಿಸಿಕೊಂಡಿರುತ್ತಾರೆ. ಶಿವ ಮೊಗ್ಗ ವಿನೋಬನಗರ ಪ್ರೀಡಂ ಪಾರ್ಕ್‌ನಲ್ಲಿ ರುವ ಗ್ರಾಮ ಆಡಳಿತ ಅಧಿಕಾರಿಗಳ ಕಚೇರಿ ಹೋಗಿ ವಿ ಎ ಆಗಿರುವ ಸುರೇಶ್

ಜಿ. ಬಳಿ ತಾವು ಖರೀದಿಸಿದ ಜಮೀನನ್ನು ಖಾತೆ ಮಾಡಿಕೊಡುವಂತೆ ಕೇಳಿಕೊಂಡಾಗ ಕೆಲಸ ಮಾಡಿಕೊಡಲು ರೂ. ೬೦೦೦/-ಗಳ ಲಂಚಕ್ಕೆ ಬೇಡಿಕೆ ಇಟ್ಟಿರುವ ವಿಚಾರವಾಗಿ ಇವರ ವಿರುದ್ಧ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು.


ಅಪಾದಿತರನ್ನು ಬಂಧಿಸಿ ಮುಂದಿನ ತನಿಖೆಯನ್ನು ಪೊಲೀಸ್ ನಿರೀಕ್ಷಕರು ವೀರಬಸಪ್ಪ ಎಲ್ ಕುಸಲಾಪು ರರವರು ಕೈಗೊಂಡಿರುತ್ತಾರೆ. ಕಾರ್ಯಾ ಚರಣೆಯಲ್ಲಿ

ಕ.ಲೋ.ಪೋ. ಅಧೀಕ್ಷಕ ಮಂಜು ನಾಥ್ ಚೌಧರಿ ಎಂ.ಹೆಚ್. ಮತ್ತು ಪೊಲೀಸ್ ಉಪಾಧೀಕ್ಷಕ ಉಮೇಶ ಈಶ್ವರ ನಾಯ್ಕ ಇವರುಗಳ ಮಾರ್ಗ ದರ್ಶನದಲ್ಲಿ ಲೋಕಾಯುಕ್ತ ಕಚೇರಿ ಸಿಬ್ಬಂದಿಗಳಾದ ವಿ.ಎ.ಮಹಂ ತೇಶ ಸಿ.ಹೆಚ್.ಸಿ., ಯೋಗೇಶ್ .ಸಿ.ಹೆಚ್.ಸಿ.

ಸುರೇಂದ್ರ ಹೆಚ್.ಜಿ., ಸಿ.ಹೆಚ್.ಸಿ., ಬಿ.ಟಿ ಚನ್ನೇರ್ಶ. ಸಿ.ಪಿ.ಸಿ., ಪ್ರಶಾಂತ್ ಕುಮಾರ ಸಿ.ಪಿ.ಸಿ., ರಘುನಾಯ್ಕ ಸಿ.ಪಿ.ಸಿ., ದೇವರಾಜ್ ಸಿ.ಪಿ.ಸಿ., ಗಂಗಾಧರ ಎ.ಪಿ.ಸಿ., ಪ್ರದೀಪ್ ಎ.ಪಿ.ಸಿ., ಗೋಪಿ ವಿ.,ಎ.ಪಿ.ಸಿ., ಹಾಗು ಜಯಂತ್ ಇದ್ದರು.

Exit mobile version