Site icon TUNGATARANGA

ಪರಿಸರ ಶುದ್ಧವಾಗಿದ್ದಾಗ ಮಾತ್ರ ನಮ್ಮ ಬದುಕು ಹಸನಾಗಿರುತ್ತದೆ /ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸಾಯಿನಾಥ ಸ್ವಾಮೀಜಿ

ಶಿವಮೊಗ್ಗ, ಜೂ.೦೫:
ನಮ್ಮ ಮನ ಶುದ್ಧವಾಗಿರುವಂತೆ ಪರಿಸರವನ್ನು ಶುದ್ಧವಾಗಿ ಕಾಪಾಡಿಕೊಂಡಾಗ ಸ್ವಸ್ಥ ಸಮಾಜವನ್ನು ರೂಪಿಸಲು ಸಾಧ್ಯ. ಪರಿಸರ ಶುದ್ಧವಾಗಿದ್ದಾಗ ಮಾತ್ರ ನಮ್ಮ ಬದುಕು ಹಸನಾಗಿರುತ್ತದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸಾಯಿನಾಥ ಸ್ವಾಮೀಜಿ ಹೇಳಿದರು.


ಅವರು ಇಂದು ಬೆಳಗ್ಗೆ ಗುರುಪುರದ ಬಿಜಿಎಸ್ ಶಾಲಾ ಕಾಲೇಜಿನ ಆವರಣದಲ್ಲಿ ಪರಿಸರ ದಿನಾಚರಣೆಯಲ್ಲಿ ಮಾತನಾಡುತ್ತಾ, ಇತ್ತೀಚಿನ ದಿನಗಳಲ್ಲಿ ಮಾನವ ಕುಲವು ತನ್ನ ದುರಾಸೆಯಿಂದ ಸುತ್ತಮುತ್ತಲಿನ ಸಂಪನ್ಮೂಲಗಳನ್ನು ಬೇಕಾಬಿಟ್ಟಿಯಾಗಿ ಬಳಸಿಕೊಂಡು, ನಮ್ಮ ಪರಿಸರವನ್ನು ಹಾಳು ಮಾಡುತ್ತಿದ್ದಾರೆ ಎಂದರು.


ಎಲ್ಲಿಯವರೆಗೆ ಪ್ರಕೃತಿ ಮತ್ತು ಮನುಷ್ಯನ ನಡುವೆ ಸಮತೋಲನ ಇರುವುದಿಲ್ಲವೋ ಅಲ್ಲಿಯವರೆಗೆ ಈ ವಿಶ್ವದಲ್ಲಿ ಮಾನವನ ಜೀವನ ಅತ್ಯಂತ ಕಷ್ಟಕರವಾಗುತ್ತದೆ. ಅಂತೆಯೇ ಪ್ರಕೃತಿ ಪ್ರಾಣಿ, ಪಕ್ಷಿ ಸಂಕುಲವನ್ನು ಹಾಗೂ ಅರಣ್ಯವನ್ನು ರಕ್ಷಿಸುವ ಹೊಣೆಗಾರಿಗೆ ನಮ್ಮದಾಗಿರುತ್ತದೆ ಎಂದು ಹೇಳಿದರು.


ಈ ಸಂದರ್ಭದಲ್ಲಿ ಬಿಜಿಎಸ್ ಶಾಲಾ-ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ಹೆಚ್.ಎಸ್., ಅಧ್ಯಾಪಕರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Exit mobile version