Site icon TUNGATARANGA

ನೀಟ್ ಪರೀಕ್ಷೆ ಅಕ್ರಮ ತನಿಖೆಯನ್ನು ಸಿಬಿಐಗೆ ವಹಿಸಬೇಕು – ಡಾ. ಕಡಿದಾಳ್ ಗೋಪಾಲ್

ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಅನುಮಾನ ಇದ್ದುದರಿಂದ ಉನ್ನತ ಮಟ್ಟದ ತನಿಖೆ ನಡೆಸಬೇಕು ಹಾಗೂ ಈಗ ನಡೆದಿರುವ ಪರೀಕ್ಷೆಯನ್ನು ರದ್ದುಗೊಳಿಸಿ ಮರುಪರೀಕ್ಷೆ ನಡೆಸಬೇಕೆಂದು ರಾಷ್ಟ್ರಪತಿಗಳಿಗೆ ಮನವಿ ಮಾಡುತ್ತೇವೆ. ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು

ಹಾಗೂ ಅವರಿಗೆ ಶಿಕ್ಷೆ ವಿಧಿಸಬೇಕು. ಪರೀಕ್ಷೆ ಫಲಿತಾಂಶದ ನಂತರ ದೇಶದಲ್ಲಿ ಅನೇಕ ಕಡೆ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಅತ್ಯಂತ ದುಃಖದ ಸಂಗತಿ. ವಿದ್ಯಾರ್ಥಿಗಳು ಪ್ರಾಣ ಕಳೆದುಕೊಳ್ಳದಂತೆ ತಕ್ಷಣ ಸರಿಯಾದ ನಿರ್ಧಾರ ತೆಗೆದುಕೊಳ್ಳಬೇಕು.


ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ವಿವಾದಾತ್ಮಕ ಫಲಿತಾಂಶದ ಕಾರಣ ಲಕ್ಷಾಂತರ ವೈದ್ಯಕೀಯ ಸೀಟು ಆಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದೆ. ವಿದ್ಯಾರ್ಥಿಗಳಿಗೆ ಅನ್ಯಾಯ ಆಗದ ಹಾಗೆ ಕೇಂದ್ರ ಸರ್ಕಾರ ನೀಟ್ ಅಕ್ರಮದ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸುತ್ತಿದ್ದೇನೆ.


ಈಗ ನಡೆದಿರುವ ಪರೀಕ್ಷೆ ರದ್ದುಪಡಿಸಿ ಕೂಡಲೇ ಮರುಪರೀಕ್ಷೆ ನಡೆಸಬೇಕು. ಈ ಸಾರಿ ಯುಜಿ ಪರೀಕ್ಷೆಯ ಟಾಪರ್ ಒಂದೇ ಕೇಂದ್ರದಿಂದ ಜಾಸ್ತಿ ಬಂದಿದ್ದು, ಪರೀಕ್ಷೆ ಫಲಿತಾಂಶದ ಮೇಲೆ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

ಆದ್ದರಿಂದ ಇದನ್ನು ಸರಿಪಡಿಸಲು ಸಿಬಿಐ ನಿಂದ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ.

Exit mobile version