Site icon TUNGATARANGA

ಡೇಂಗ್ಯೂ ಜ್ವರಕ್ಕೆ ಜಿಲ್ಲೆಯಲ್ಲಿ ಮೊದಲ ಬಲಿ

ಸಾಗರ : ಇಲ್ಲಿನ ಉಪವಿಭಾಗೀಯ ಆಸ್ಪತ್ರೆಯ ಡಯಾಲಿಸಿಸ್ ವಿಭಾಗದಲ್ಲಿ ಡಿ ಗ್ರೂಪ್ ನೌಕರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜ್ (೩೩) ಗುರುವಾರ ಡೇಂಗ್ಯೂ ರೋಗದಿಂದ ಮೃತಪಟ್ಟಿದ್ದಾರೆ.


ತಾಲ್ಲೂಕಿನ ತಾಳಗುಪ್ಪ ನಿವಾಸಿಯಾಗಿದ್ದ ನಾಗರಾಜ್ ಒಂದು ವಾರದಿಂದ ಡೇಂಗ್ಯೂ ಜ್ವರದಿಂದ ಬಳಲುತ್ತಿದ್ದರು. ಅನಾರೋಗ್ಯ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಾಗಿದ್ದರು.

ಹೆಚ್ಚಿನ ಚಿಕಿತ್ಸೆಗಾಗಿ ನಾಗರಾಜ್ ಅವರನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.


ಚಿಕಿತ್ಸೆ ಫಲಕಾರಿಯಾಗದೆ ನಾಗರಾಜ್ ಅವರು ಬೆಳಿಗ್ಗೆ ಮೃತಪಟ್ಟಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಡೇಂಗ್ಯೂ ಜ್ವರಕ್ಕೆ ಆರೋಗ್ಯ ಇಲಾಖೆ ನೌಕರ ಮೊದಲ ಬಲಿಯಾಗಿದ್ದಾರೆ.

Exit mobile version