Site icon TUNGATARANGA

ಭ್ರಷ್ಟ ಅಧಿಕಾರಿಗಳ ಭೇಟೆಯಾಡಲು ಸಿದ್ದವಾದ ಲೋಕಯುಕ್ತ, ಲಂಚಕ್ಕೆ ಬೇಡಿಕೆಯಿಟ್ಟ ಅಧಿಕಾರಿ,ಸಿಬ್ಬಂಧಿ ವಿರುದ್ದ ಸಮರ,ಲೋಕಯುಕ್ತ ಕುಂದು ಕೊರತೆ ಸಭೆ

ಶಿವಮೊಗ್ಗ, ಜೂನ್ ೧೫: ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಜೂನ್-೨೦೨೪ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು.


ಜೂ- ೧೯ ರಂದು ಬೆಳಿಗ್ಗೆ ೧೧.೦೦ ಗಂಟೆಯಿಂದ ಮಧ್ಯಾಹ್ನ ೧೨.೩೦ರವರೆಗೆ ಸೊರಬ ತಾಲೂಕು ಕಚೇರಿ ಸಭಾಂಗಣ, ಜೂ. ೨೦ ರಂದು ಬೆಳಿಗ್ಗೆ ೧೧.೦೦ ಗಂಟೆಯಿಂದ ಮಧ್ಯಾಹ್ನ ೧೨.೩೦ರವರೆಗೆ ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ, ಜೂ-೨೧ ರಂದು ಬೆಳಿಗ್ಗೆ ೧೧.೦೦ ಗಂಟೆಯಿಂದ ಮಧ್ಯಾಹ್ನ ೧೨.೩೦ರವರೆಗೆ ಸಾಗರ ತಾಲೂಕು ಪಂಚಾಯಿತಿ ಸಭಾಂಗಣ, ಜೂ. ೨೪ ರಂದು ಬೆಳಿಗ್ಗೆ ೧೧.೦೦ ಗಂಟೆಯಿಂದ

ಮಧ್ಯಾಹ್ನ ೧೨.೩೦ರವರೆಗೆ ಹೊಸನಗರ ತಾಲೂಕು ಕಚೇರಿ ಸಭಾಂಗಣದಲ್ಲಿ, ಜೂ-೨೫ ರಂದು ಬೆಳಿಗ್ಗೆ ೧೧.೦೦ ಗಂಟೆಯಿಂದ ಮಧ್ಯಾಹ್ನ ೧೨.೩೦ರವರೆಗೆ ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ, ಜೂ. ೨೬ ರಂದು ಬೆಳಿಗ್ಗೆ ೧೧.೦೦ ಗಂಟೆಯಿಂದ

ಮಧ್ಯಾಹ್ನ ೧೨.೩೦ರವರೆಗೆ ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣ. ಜೂ-೨೮ ರಂದು ಬೆಳಿಗ್ಗೆ ೧೧.೦೦ ಗಂಟೆಯಿಂದ ಮಧ್ಯಾಹ್ನ ೧೨.೩೦ರವರೆಗೆ ಶಿವಮೊಗ್ಗ ತಾಲೂಕು ಪಂಚಾಯಿತಿ ಸಭಾಂಗಣಗಳಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಯಲಿದೆ.


ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Exit mobile version