Site icon TUNGATARANGA

ಶಿವಮೊಗ್ಗ ಮಲ್ಟಿಪರ್ಪಸ್ ಸೋಷಿಯಲ್ ಸೊಸೈಟಿಯ ಸೇವೆ ಶ್ಲಾಘನೀಯ ,ಮಕ್ಕಳ ತಜ್ಞರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ.ಧನಂಜಯ ಸರ್ಜಿ ಅಭಿಪ್ರಾಯ

ಶಿವಮೊಗ್ಗ ಮಲ್ಟಿಪರ್ಪಸ್ ಸೋಷಿಯಲ್ ಸೊಸೈಟಿ ವತಿಯಿಂದ ಸರ್ಜಿ ಆಸ್ಪತ್ರೆಗಳ ಸಹಯೋಗದಲ್ಲಿ ಬುಧವಾರ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.


ಕಾರ್ಯಕ್ರಮದಲ್ಲಿ ಮಕ್ಕಳ ತಜ್ಞರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ.ಧನಂಜಯ ಸರ್ಜಿ ಅವರು ಮಾತನಾಡಿ, ಕಳೆದ 35 ವರ್ಷಗಳಿಂದ ಮಹಿಳಾ ಸಬಲೀಕರಣ, ಆರೋಗ್ಯ, ಶಿಕ್ಷಣ ಹಾಗೂ ವಿವಿಧ ಕ್ಷೇತ್ರದಲ್ಲಿ ತರಬೇತಿ ನೀಡಿ ಮಹಿಳೆಯರಲ್ಲಿ ಆತ್ಮ ವಿಶ್ವಾಸ

ಮೂಡಿಸುತ್ತಿರುವ ಶಿವಮೊಗ್ಗ ಮಲ್ಟಿಪರ್ಪಸ್ ಸೋಷಿಯಲ್ ಸೊಸೈಟಿಯ ಸೇವೆ ಶ್ಲಾಘನೀಯ. ಹಾಗೆಯೇ ತಮ್ಮೆಲ್ಲರ ಸಹಕಾರದಿಂದಾಗಿ ಪರಿಷತ್ ಗೆಲುವಾಗಿದ್ದು, ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವುದಾಗಿ ಭರವಸೆ ನೀಡಿದರು.


ಶಿವಮೊಗ್ಗ ಮಲ್ಟಿಪರ್ಪಸ್ ಸೋಷಿಯಲ್ ಸೊಸೈಟಿ ನಿರ್ದೇಶಕರಾದ ಕ್ಲಿಫರ್ಡ್ ರೋಷನ್ ಪಿಂಟೋ ಅವರು ಮಾತನಾಡಿ, ಪ್ರತಿಯೊಬ್ಬರೂ ಆರೋಗ್ಯದ ಕಡೆ ಹೆಚ್ಚು ಗಮನ ಕೊಡಬೇಕು, ಆರೋಗ್ಯವೇ ಭಾಗ್ಯ, ನಿಟ್ಟಿನಲ್ಲಿ ಸರ್ಜಿ ಆಸ್ಪತ್ರೆಗಳ ಸಮೂಹ ರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಲು ಸಹಕರಿಸುತ್ತಿರುವ ಮಾನವೀಯ ಕಾಳಜಿಗೆ ಸಾಕ್ಷಿಯಾಗಿದೆ ಎಂದರು.


ಇದೇ ಸಂದರ್ಭದಲ್ಲಿ ಅವರು ಡಾ.ಧನಂಜಯ ಸರ್ಜಿ ಅವರಿಗೆ ಅಭಿನಂದನೆ ಸಲ್ಲಿಸಿ,ಡಾ. ಸರ್ಜಿ ಅವರಿಂದ ಸಮಾಜಕ್ಕೆ ಉತ್ತಮ ಸೇವೆ ದೊಕುವಂತಾಗಲಿ ಎಂದು ಆಶಿಸಿದರು.


ಇದೇ ವೇಳೆ ಬೇರೆಡೆಗೆ ವರ್ಗಾವಣೆಗೊಂಡ ಶಿವಮೊಗ್ಗ ಮಲ್ಟಿಪರ್ಪಸ್ ಸೋಷಿಯಲ್ ಸೊಸೈಟಿ ನಿರ್ದೇಶಕರಾದ ಕ್ಲಿಫರ್ಡ್ ರೋಷನ್ ಪಿಂಟೋ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸರ್ಜಿ ಆಸ್ಪತ್ರೆಯ ಸವಿನಯ್, ಡಾ.ಸುಮನ್ ಹಾಗೂ ಡಾ.ಚಂದು ಶ್ರೀ ಮತ್ತಿತರರು ಹಾಜರಿದ್ದರು.

Exit mobile version