Site icon TUNGATARANGA

ಶ್ರದ್ಧಾ ಭಕ್ತಿಯಿಂದ ಜರುಗಿದ ಸಾಮೂಹಿಕ ಅಕ್ಷರಾಭ್ಯಾಸ,ಶ್ರೀ ದುರ್ಗಾ ಫೌಂಡೇಷನ್ ವತಿಯಿಂದ ನಡೆದ ಸಾಮೂಹಿಕ ಅಕ್ಷರಾಭ್ಯಾಸ.

ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ಪೋಷಕರ ಕರ್ತವ್ಯ:ಶಿಕ್ಷಣ ಎನ್ನುವುದು ಪ್ರತಿಯೊಂದು ಮಗುವಿಗೆ ಸಿಗಬೇಕಾದ ಮೂಲಭೂತ ಹಕ್ಕು. ಸರಳವಾಗಿ ಸಾಮೂಹಿಕ ವಿವಾಹ ಮಾಡಲು ಸರ್ಕಾರದ ವತಿಯಿಂದ ತಂದಿರುವ ಸಪ್ತಪದಿ ಯೋಜನೆಯಂತೆ, ಅಕ್ಷರಾಭ್ಯಾಸ ಕಾರ್ಯಕ್ರಮವನ್ನ ತರುವಂತೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಶ್ರೀ ದುರ್ಗಾ ಫೌಂಡೇಷನ್ ಅಧ್ಯಕ್ಷ ರಾದ ರೇಖಾ ಶ್ರೀ ನಿವಾಸ ತಿಳಿಸಿದರು.

ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ಪೋಷಕರ ಕರ್ತವ್ಯ, ಮಕ್ಕಳಿಗೆ ಶಿಕ್ಷಣದ ಜೊತೆಯಲ್ಲೆ ಕಲೆ, ಕ್ರೀಡೆ, ಸಾಂಸ್ಕೃತಿಕ, ಸಂಗೀತ ಸೇರಿದಂತೆ ಮಕ್ಕಳು ಯಾವ ಕ್ಷೇತ್ರದಲ್ಲಿ ಪ್ರತಿವಭಾವಂತರು ಎಂದು ತಿಳಿದು, ಮೊದಲ ಹಂತದಲ್ಲೇ ಪೋಷಕರು ಮನೆಯಿಂದ ಪ್ರೋತ್ಸಾಹ ನೀಡಬೇಕು. ಆಗ ಮಕ್ಕಳು ಮುಖ್ಯವಾಹಿನಿಗೆ ಬಂದು ದೇಶದ ಅತ್ಯುತ್ತಮ ವ್ಯಕ್ತಿಯಾಗಿ ನಿರ್ಮಾಣವಾಗುತ್ತಾರೆ ಎಂದ ಡಾ.ಶ್ರೀ ನಿವಾಸ್ ಹೇಳಿದರು.

 ಶಿಕ್ಷಣದ ಮಹತ್ವದ ಬಗ್ಗೆ ತಿಳಿಯುತ್ತಲೇಯಿರಬೇಕು,

ಶಿಕ್ಷಣಕ್ಕೆ ಎಂದಿಗೂ ಅಂತ್ಯವಿಲ್ಲ, ತಂತ್ರಜ್ಞಾನ ಮುಂದಿನ ಪೀಳಿಗೆ ಕಾಲಮಾನಕ್ಕೆ ತಕ್ಕಂತೆ ಪ್ರತಿದಿನ ಸಮಾಜದಲ್ಲಿ ಶಿಕ್ಷಣದ ಮಹತ್ವದ ಬಗ್ಗೆ ತಿಳಿಯುತ್ತಲೇಯಿರಬೇಕು. ಪ್ರತಿಯೊಬ್ಬರು ಶಿಕ್ಷಣ ಪಡೆದ ನಂತರದಲ್ಲಿ ಅದನ್ನ ಮತ್ತೋರ್ವರಿಗೆ ವಿದ್ಯಾದಾನ ಮಾಡಲು ಮುಂದಾಗಬೇಕು ಎಂದು ಗ್ರಾಮಜ್ಯೋತಿ ಫ್ರೌಡಶಾಲೆ ನಿವೃತ್ತಿ ಶಿಕ್ಷರಾದ ಬಾಲಕೃಷ್ಣ ರವರು ತಿಳಿಸಿದರು ಈ

ವೇಳೆ 150ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡಿದ್ದರು. ಪೋಷಕರು ತಮ್ಮ ಮಕ್ಕಳಿಂದ ಸರಸ್ವತಿ ಪೂಜೆ ಮಾಡಿಸಿ, ಮಕ್ಕಳ ಕೈಹಿಡಿದು ಅಕ್ಕಿ ಧಾನ್ಯದಲ್ಲಿ ಓಂಕಾರ ಮತ್ತು ಗಣೇಶನಾಮ ಹಾಗೂ ಮಾತೃಭಾಷೆ ಅ ಆ ಇ ಮುಂತಾದವುಗಳನ್ನು ಬರೆಸುವುದರ ಮೂಲಕ ಅಕ್ಷರಾಭ್ಯಾಸ ಮಾಡಿಸಿದರು.

ಕಾರ್ಯ ಕ್ರಮದಲ್ಲಿ ಶ್ರೀ ದುರ್ಗಾ ಫೌಂಡೇಷನ್ ಅಧ್ಯಕ್ಷ ರಾದ ರೇಖಾ ಶ್ರೀ ನಿವಾಸ, ಆರೋಗ್ಯಧಿಕಾರಿ ಡಾ.ಶ್ರೀ ನಿವಾಸ್ ಆಚಾರ್ಯ, ನಿವೃತ್ತಿ ಶಿಕ್ಷಕರಾದ ಬಾಲಕೃಷ್ಣ, ಅಶ್ವಿನಿ, ಸೌಮ್ಯ, ನಿರ್ಮಲ,ಅಂಗನವಾಡಿ ಶಿಕ್ಷಕಿಯರಾದ ಸುಮ, ಸುದಾ, ಸಮಾಜಸೇವಕರಾದ ಸ್ವರೂಪ ಜೈನ್ ಹಾಗೂ ಇನ್ನೂ ಮುಂತಾದವರು ಭಾಗವಹಿಸಿದ್ದರು..

Exit mobile version