ಶಿವಮೊಗ್ಗ: ವೈದ್ಯಕೀಯ ಪ್ರವೇಶಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪದ ಬಗ್ಗೆ ಕೇಂದ್ರ ಬಿಜೆಪಿ ಮೋದಿ ನೇತೃತ್ವದ ಸರ್ಕಾರ ಮೌನವಹಿಸಿರುವುದನ್ನು ಖಂಡಿಸಿ ಇಂದು ದೆಹಲಿಯ ಜಂತರ್ ಮಂತರ್ ನಲ್ಲಿ ಭಾರತೀಯ
ಯುವ ಕಾಂಗ್ರೆಸ್ ನಿಂದ ಸಂಸತ್ ಚಲೋ ಪ್ರತಿಭಟನೆ ನಡೆಸಲಾಯಿತು. ನಂತರ ಸಂಸತ್ತಿಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ದೆಹಲಿ ಪೊಲೀಸರು ಬಂಧಿಸಿದರು.
ಈ ವೇಳೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಬಿ.ವಿ. ಶ್ರೀನಿವಾಸ್ ನೇತೃತ್ವ ವಹಿಸಿದ್ದರು. ಕರ್ನಾಟಕದಿಂದಲೂ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ನೇತೃತ್ವದಲ್ಲಿ ರಾಜ್ಯದ ಎಲ್ಲ ಜಿಲ್ಲೆಯ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರು,
ರಾಜ್ಯ ಪದಾಧಿಕಾರಿಗಳು ಹಾಗೂ ಬ್ಲಾಕ್ ಅಧ್ಯಕ್ಷರುಗಳು ಪದಾಧಿಕಾರಿಗಳು ಭಾಗಿಯಾಗಿದ್ದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್ ಪಿ ಗಿರೀಶ್ , ಶಿವಮೊಗ್ಗ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್
, ಗ್ರಾಮಾಂತರ ಯುವ ಕಾಂಗ್ರೆಸ್ ನ ಅಧ್ಯಕ್ಷ ಈಟಿ ನಿತಿನ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ನ ಎಸ್ ಕುಮಾರೇಶ್ ಇತರರು ಭಾಗವಹಿಸಿದ್ದರು.