Site icon TUNGATARANGA

ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳಿಗೆ ಒಳ ಹರಿವು ಹೆಚ್ಚಳ,ಯಾವ್ಯಾವ ಡ್ಯಾಂಗೆ ಎಷ್ಟಿದೆ ಒಳ ಹರಿವು?

ಶಿವಮೊಗ್ಗ, ಜೂ.೨೮: ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳಿಗೆ ಒಳ ಹರಿವು ಹೆಚ್ಚಳವಾಗಿದೆ. ತುಂಗಾ ಜಲಾಶಯದಲ್ಲಿ ಈಗಾಗಲೇ

ಕ್ರಸ್ಟ್ ಗೇಟ್ ಮೂಲಕ ನೀರು ಹೊರ ಬಿಡಲಾಗುತ್ತಿದೆ. ಇನ್ನು, ಭದ್ರಾ ಮತ್ತು ಲಿಂಗನಮಕ್ಕಿ ಡ್ಯಾಂಗಳಿಗೆ ಒಳ ಹರಿವು ಏರಿಕೆಯಾಗಿದೆ.


ಯಾವ್ಯಾವ ಡ್ಯಾಂಗೆ ಎಷ್ಟಿದೆ ಒಳ ಹರಿವು? : ಗಾಜನೂರಿನ ತುಂಗಾ ಜಲಾಶಯ ಈಗಾಗಲೇ ಭರ್ತಿಯಾಗಿದ್ದು ಗುರುವಾರದಿಂದ ಗೇಟ್ ಮೂಲಕ ನೀರು ಹೊರ ಬಡಿಲಾಗುತ್ತಿದೆ. ನಿನ್ನೆ ಎರಡು ಗೇಟ್ ಮೂಲಕ ನೀರು ಹೊರ ಹರಿಸಲಾಗುತಿತ್ತು. ಇವತ್ತು ಆರು ಗೇಟ್‌ಗಳ ಮೂಲಕ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ.

ತುಂಗಾ ಡ್ಯಾಂಗೆ ೧೧,೩೪೨ ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಅಷ್ಟೇ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ.
ಭದ್ರಾ ಜಲಾಶಯಕ್ಕು ಒಳ ಹರಿವು ಏರಿಕೆಯಾಗಿದೆ. ಇವತ್ತು ೮೬೫೫ ಕ್ಯೂಸೆಕ್

ಒಳ ಹರಿವು ದಾಖಲಾಗಿದೆ. ಸದ್ಯ ಜಲಾಶಯದ ನೀರಿನ ಮಟ್ಟ ೧೨೨.೩ ಅಡಿ ಇದೆ. ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಒಳ ಹರಿವು ಮತ್ತಷ್ಟು ಏರಿಕೆಯಾಗುವ ನಿರೀಕ್ಷೆ ಇದೆ.


ಲಿಂಗನಮಕ್ಕಿ ಜಲಾಶಯಕ್ಕು ಒಳ ಹರಿವು ಏರಿಕೆಯಾಗುತ್ತಿದೆ. ಪ್ರಸ್ತುತ ೧೨,೨೪೯ ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಇವತ್ತು ಡ್ಯಾಂನ ನೀರಿನ ಮಟ್ಟ ೧೭೪೮.೭ ಅಡಿಗೆ ಇದೆ. ಇನ್ನು, ಲಿಂಗನಮಕ್ಕಿಯಿಂದ ೨೪೪೫.೧೪ ಕ್ಯೂಸೆಕ್ ಹೊರ ಹರಿವು ಇದೆ.

Exit mobile version