Site icon TUNGATARANGA

ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು ಎಬಿವಿಪಿ ಪ್ರತಿಭಟನೆ

ಶಿವಮೊಗ್ಗ: ವಿದ್ಯಾರ್ಥಿ ವೇತನವೂ ಸೇರಿದಂತೆ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಇಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ.
ಕೊರೋನಾದ ಹಿನ್ನಲೆಯಲ್ಲಿ ಶಾಲಾ, ಕಾಲೇಜುಗಳು ತೆರೆದಿರಲಿಲ್ಲ. ಹಾಗಾಗಿ, ವಿದ್ಯಾರ್ಥಿಗಳ ವೇತನವೂ ಸಹ ಬಿಡುಗಡೆಯಾಗಿಲ್ಲ. ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದಾರೆ. ಸರ್ಕಾರ ತಕ್ಷಣವೇ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು ಮತ್ತು ಹಾಸ್ಟೆಲ್ ಗಳನ್ನು ಆರಂಭಿಸಬೇಕು ಎಂದು ಆಗ್ರಹಿಸಿದರು.
ಅನೇಕ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರು ಇಲ್ಲ. ಈಗ ಕಾಲೇಜುಗಳು ಆರಂಭವಾಗಿವೆ. ವಿದ್ಯಾರ್ಥಿಗಳಿದ್ದಾರೆ. ಉಪನ್ಯಾಸಕರೇ ಇಲ್ಲದಂತಾಗಿದೆ. ಕೂಡಲೇ ಸರ್ಕಾರ ಅತಿಥಿ ಉಪನ್ಯಾಸಕರನ್ನು ನೇಮಿಸಬೇಕು. ಎಲ್ಲಾ ತರಗತಿ ನಡೆಯುವಂತೆ ನೋಡಿಕೊಳ್ಳಬೇಕು. ಕೋವಿಡ್ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಕಾಲೇಜುಗಳು ಆರಂಭವಾಗಿವೆ. ಆದರೆ, ಅನೇಕ ಹಳ್ಳಿಗಳಲ್ಲಿ ಸಮರ್ಪಕ ಬಸ್ ವ್ಯವಸ್ಥೆ ಇಲ್ಲ. ಇದರಿಂದ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರಿ ಬಸ್ ಗಳ ಸಂಖ್ಯೆ ಹೆಚ್ಚಳ ಮಾಡಬೇಕು. ಕಾಲೇಜ್ ಗಳಿಗೆ, ಹಾಸ್ಟೆಲ್ ಗಳಿಗೆ ತುಂಬಾ ದೂರ ಇರುವುದರಿಂದ ಹಾಸ್ಟೆಲ್ ಗಳಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಭರತ್, ಶ್ರೀಪಾದ್, ಧನುಷ್, ಮಂಜುನಾಥ್, ಹಾಲಸ್ವಾಮಿ, ಅರವಿಂದ್, ನಿರಂಜನ್, ಗಿರೀಶ್, ಲಿಂಗರಾಜ್ ಮೊದಲಾದವರಿದ್ದರು.

Exit mobile version