Site icon TUNGATARANGA

ಶಾಲೆಗಳ ಪ್ರಾರಂಭ: ಬಾಲ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡ್ರೆ ಮಾಲೀಕರ ಭಾರೀದಂಡದ ಜೊತೆ ಶಿಕ್ಷೆ

ಶಿವಮೊಗ್ಗ, ಜುಲೈ ೦೫, ) : ೨೦೨೪-೨೫ನೇ ಸಾಲಿನಲ್ಲಿ ಶಾಲೆಗಳು ಪ್ರಾರಂಭವಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಉದ್ದಿಮೆಗಳಲ್ಲಿ ೧೪ ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ

ನೇಮಕ ಮಾಡಿಕೊಳ್ಳುವುದು ಮತ್ತು ೧೮ ವರ್ಷದೊಳಗಿನ ಕಿಶೋರಾವಸ್ಠೆ ಮಕ್ಕಳನ್ನು ಅಪಾಯಕಾರಿ ಉದ್ದಿಮೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾದವಾಗಿದ್ದು, ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಯಂತ್ರಣ ಹಾಗೂ ನಿಷೇಧ) ಕಾಯ್ದೆ

೧೯೮೬ ಹಾಗೂ ತಿದ್ದುಪಡಿ ಕಾಯ್ದೆ ೨೦೧೬ರಡಿ ಮಾಲೀಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಮತ್ತು ನೇಮಿಸಿಕೊಂಡ

ಮಾಲೀಕರುಗಳಿಗೆ ರೂ. ೫೦,೦೦೦/-ಗಳ ದಂಡ ಅಥವಾ ಎರಡು ವರ್ಷವರೆಗಿನ ಸೆರೆಮನೆ ವಾಸದ ಶಿಕ್ಷೆ ಮತ್ತು ಪೊಲೀಸ್ ಇಲಾಖೆಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಬಾಲಕಾರ್ಮಿಕ ಹಾಗೂ ಕಿಶೋರಾಕಾರ್ಮಿಕರು ಜಿಲ್ಲೆಯಲ್ಲಿ ಕಂಡು ಬಂದಲ್ಲಿ ಕಾರ್ಮಿಕ ಇಲಾಖೆ-ದೂ.ಸಂ.: ೦೮೧೮೨-೨೪೮೮೧೦, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿ ೧೦೯೮ ನ್ನು ಸಂಪರ್ಕಿಸುವುದು.

Exit mobile version