Site icon TUNGATARANGA

ಜು.21ರಂದು ಧಾರವಾಡ ಜಿಲ್ಲೆಯ ನವಲಗುಂದದಲ್ಲಿ 44ನೇ ರೈತ ಹುತಾತ್ಮ ದಿನಾಚರಣೆ:ಹಸಿರು ಸೇನೆಯ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ

ಶಿವಮೊಗ್ಗ,ಜು.12: 44ನೇ ರೈತ ಹುತಾತ್ಮ ದಿನಾಚರಣೆ ಧಾರವಾಡ ಜಿಲ್ಲೆಯ ನವಲಗುಂದದಲ್ಲಿಧಾರವಾಡ ಜಿಲ್ಲೆಯ ನವಲಗುಂದದಲ್ಲಿ ಜು.21ರಂದು ಬೆಳಿಗ್ಗೆ 11ಕ್ಕೆ ಆಯೋಜಿಸಲಾಗಿದೆ. ಮತ್ತು ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಮುಂದಿನ ಹೋರಾಟವನ್ನು ರೂಪಿಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರೈತರ ಸಮಸ್ಯೆಗಳು ಸಾಕಷ್ಟಿವೆ. ಪ್ರಮುಖವಾಗಿವೆ. ಉತ್ತರ ಕರ್ನಾಟಕ ಭಾಗದ ರೈತರ ನೀರಾವರಿ ಮಹಾದಾಯಿ ಯೋಜನೆ ಎರಡು ದಶಕಗಳು ಕಳೆದರು ಜಾರಿಯಾಗಿಲ್ಲ. ಕುಡಿಯುವ ನೀರಿನ ಯೋಜನೆಯಾದ ಕಳಸ ಬಂಡೂರಿ ಯೋಜನೆಯು ಜಾರಿಯಾದ ಸರ್ಕಾರ ಮಹಾದಾಯಿ ಯೋಜನೆಯನ್ನು ವಿಶೇಷವಾಗಿ ಪರಿಗಣಿಸಿ ಕೂಡಲೇ ಕಾಮಗಾರಿ ಆರಂಭಿಸಬೇಕು ಎಂದು ಒತ್ತಾಯಿಸಿದರು.

ಕೃಷಿ ಕಾಯ್ದೆಗಳನ್ನು ರಾಜ್ಯ ಸರ್ಕಾರ ಅದೇಕೋ ಸರ್ಕಾರ ತೆಗೆದುಕೊಂಡಿಲ್ಲವೋ ಗೊತ್ತಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಈ ಮೊದಲು ಮಾತುಕೊಟ್ಟಂತೆ ಮೂರು ಕೃಷಿಯನ್ನು ಕೂಡಲೇ ವಾಪಾಸ್ಸು ತೆಗೆದುಕೊಳ್ಳಬೇಕು ರೈತರಲ್ಲದ ಖಾಸಗಿ ವ್ಯಕ್ತಿಗಳು ರೈತರ ಜಮೀನುಗಳನ್ನು ಕೊಂಡರೇ ಮುಂದೆ ಕೃಷಿಯೇ ನಿಂತುಹೋಗಬಹುದಾದ ಅಪಾಯವಿರುತ್ತದೆ ಎಂದರು.

ಬಿತ್ತನೆ ಬೀಜಗಳ ಬೆಲೆ ಏರಿಕೆಯಾಗಿದೆ. ಬರಗಾಲವನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡುತ್ತಿಲ್ಲ. ರೈತರ ಆತ್ಮಹತ್ಯೆಗಳನ್ನು ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ. ಕನಿಷ್ಟ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ಇನ್ನೂ ಶಾಸನಬದ್ಧಗೊಳಿಸಿಲ್ಲ. ಕಬ್ಬು ಬೆಳೆಗಾರರು ಸಂಕಷ್ಟ ಎದುರಿಸುತ್ತಿದ್ದಾರೆ. ವಿಮಾ ಕಂಪನಿಗಳು ರೈತರಿಗೆ ಮೋಸ ಮಾಡುತ್ತಿವೆ. ಕೆಲವು ಬ್ಯಾಂಕ್‍ಗಳು ಹಾಲಿನ ಸಹಾಯ ಧನ, ಬರಪರಿಹಾರ, ವಿಧವಾ ವೇತನ, ಪಿ.ಎಂ.ಕಿಸಾನ್ ಹಣ ಇವೆಲ್ಲವನ್ನು ರೈತರ ಸಾಲದ ಖಾತೆಗೆ ಜಮಾ ಮಾಡಿಕೊಳ್ಳುತ್ತಿರುವುದು ವಿಪರ್ಯಾಸವಾಗಿದೆ ಎಂದು ದೂರಿದರು.

ಇದರ ಜೊತೆಗೆ ಗ್ಯಾರಂಟಿ ಯೋಜನೆಗಳಿಗಾಗಿ ಹಣ ಹೊಂದಿಸಲು ರೈತರ ಪಹಣಿ, ಮುಟೇಷನ್, ಸರ್ವೇ ಹದ್ದು ಬಸ್ತು, ಪೋಡಿ, ಸ್ಟ್ಯಾಂಟ್ ಡ್ಯೂಟಿ ಮುಂತಾದವುಗಳ ಮೇಲೆ ತೆರಿಗೆಯನ್ನು ಹೆಚ್ಚಿಸಿ ರೈತರಿಗೆ ಹಾಗೂ ಜನಸಾಮಾನ್ಯರಿಗೆ ಆರ್ಥಿಕ ಹೊರೆಯಾಗುವಂತೆ ಮಾಡಿದ್ದಾರೆ ಎಂದರು.

ರೈತರ ಈ ಎಲ್ಲಾ ಸಮಸ್ಯೆಗಳನ್ನು ರೈತ ಹುತಾತ್ಮ ದಿನಾಚರಣೆಯಂದು ಚರ್ಚಿಸಲಾಗುವುದು ಮತ್ತು ಮುಂದಿನ ಹೋರಾಟವನ್ನು ಅಲ್ಲಿ ನಿರ್ಧರಿಸಲಾಗುವುದು ಎಂದರು. 

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಕೆ. ರಾಘವೇಂದ್ರ, ಟಿ.ಎಂ. ಚಂದ್ರಪ್ಪ, ಜ್ಞಾನೇಶ್, ಜಗದೀಶ್, ಇಟ್ಟೂರು ರಾಜು, ಸಿ.ಚಂದ್ರಪ್ಪ, ಹಾರ್ನಹಳ್ಳಿ ರುದ್ರೇಶ್ ಮುಂತಾದವರು ಇದ್ದರು.

Exit mobile version