Site icon TUNGATARANGA

ಶಿವಮೊಗ್ಗ ಪಾಲಿಕೆ ಆಯುಕ್ತರಿಗೆ ಕದಂಬ ವೇದಿಕೆ ನೀಡಿದ ಮನವಿ ಏನು ಗೊತ್ತಾ? ಬೊಮ್ಮನಕಟ್ಟೆ ಸಮಸ್ಸೆ ಬಗೆಹರಿಯುತ್ತಾ?

ಶಿವಮೊಗ್ಗ,ಜು.15:

ಇಲ್ಲಿನ ಮಹಾ ಪಾಲಿಕೆ ವ್ಯಾಪ್ತಿಯ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಬಿ ಬ್ಲಾಕ್‌ನಲ್ಲಿ ಮೂಲ ಸೌಕರ್ಯ ಕಲ್ಪಿಸುವುದು ಸೇರಿದಂತೆ ಹಲವೆಡೆಯ ಮುಖ್ಯ ಸಮಸ್ಸೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಕದಂಬ ಕನ್ನಡ ವೇದಿಕೆ ಪ್ರತಿಭಟಿಸಿ ಪಾಲಿಕೆ ಕಮಿಷನರ್‌ಗೆ ಮನವಿ ಸಲ್ಲಿಸಿತು.


ಈ ಸಂದರ್ಭದಲ್ಲಿ ಮಾತನಾಡಿದ ಕದಂಬ ವೇದಿಕೆ ಮುಖಂಡರು, ಶಿವಮೊಗ್ಗ ನಗರ ಅಭಿವೃದ್ಧಿ ಹೊಂದಿದ ನಗರವೆಂದು ಘೋಷಿಸಿರುವುದು ಹಾಸ್ಯಾಸ್ಪದವಾಗಿದೆ. ಸ್ಮಾರ್ಟ್ ಸಿಟಿ, ಅಮೃತ್ ಯೋಜನೆ, ನಗರೋತ್ಪನ್ನ-,9 ಹಣಕಾಸು ಯೋಜನೆ ಸೇರಿದಂತೆ ನಾನಾ ಕಡೆಯಿಂದ ಹಣ ಬಂದರೂ ಜನಪ್ರತಿನಿಧಿಗಳು ಬೇಜಾವಾಬ್ದಾರಿತನ ಮಾಡುತ್ತಿದ್ದಾರೆ ಎಂದರು.


ಅಧಿಕಾರಿಗಳ ತತ್ಸಾರರತೆಯಿಂದ ಶಿವಮೊಗ್ಗ ವಾರ್ಡ್ ನಂಬರ್-1ರ ಬೊಮ್ಮನಕಟ್ಟೆ “ಬಿ” ಬ್ಲಾಕ್ ಮೈಲಮ್ಮ ದೇವಸ್ಥಾನದ ಎದುರು ರಸ್ತೆಗಳು, ತಿರುವುಗಳು ಇಂದಿಗೂ ಡ್ರೈನೇಜ್, ರಸ್ತೆಗಳಿಲ್ಲ. ಈ ಪ್ರದೇಶದಲ್ಲಿ ಮಾತ್ರವಲ್ಲ ನಗರದ ಅನೇಕ ಕಡೆ ಇದೇ ಪರಿಸ್ಥಿತಿ ಆಗಿರುವುದು ಪಾಲಿಕೆಯ ಆಡಳಿತ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ
ಎಂದರು.


ಮೂಲ ಸೌಲಭ್ಯದವಿಲ್ಲದೆ ಇಲ್ಲಿನ ನಾಗರೀಕರು, ವೃದ್ಧಾಪ್ಯದವರು, ಶಾಲಾ ಮಕ್ಕಳಿಗೆ ಅನಾನುಕೂಲವಾಗಿದೆ. ಈಗಾಗಲೇ 2020ರ ಕೊರೋನಾ ಸಾಂಕ್ರಮಿಕ ವೈರಸ್ ದಾಳಿಯಿಂದ ತತ್ತರಿಸಿರುವ ಸ್ಥಳೀಯ ವಾಸಿಗಳು ಇದೀಗ ವಿಪರೀತ ಸೊಳ್ಳೆ ಕಾಟಗಳಿಂದ ನಶಿಸಿ ಹೋಗಿದ್ದಾರೆ. ಆದ್ದರಿಂದ ಡೆಂಗಿ ಜ್ವರಕ್ಕೆ ತುತ್ತಾಗುವ ಮುನ್ನ ನೂತನ ಪಾಲಿಕೆ ಆಯುಕ್ತರು ಪರಿಶೀಲಿಸಿ ಸೂಕ್ತ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಕನ್ನಡ ಕದಂಬ ವೇದಿಕೆ ರಾಜ್ಯ ಅಧ್ಯಕ್ಷ ವಿಶ್ವನಾಥ್ ಪಾಲಿಕೆಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ವೇದಿಕೆಯ ಪ್ರಮುಖರು, ಬೊಮ್ಮನಕಟ್ಟೆ ಗ್ರಾಮಸ್ಥರು ಉಪಸ್ಥಿತರಿದ್ದರು.

Exit mobile version