Site icon TUNGATARANGA

ವಿದ್ಯಾರ್ಥಿಗಳು ಉತ್ತಮ ಮೌಲ್ಯಗಳನ್ನು ಬೆಳೆಸಿಕೊಳ್ಳಿ:ಹಿರಿಯ ಸಿವಿಲ್ ನ್ಯಾಯಾಧೀಶ ಸಂತೋಷ್.ಎಮ್.ಎಸ್.

ಶಿವಮೊಗ್ಗ,ಜು.೩೦: ಉತ್ತಮ ಮೌಲ್ಯಗಳನ್ನು ಬೆಳೆಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಶಿವಮೊಗ್ಗ ಜಿಲ್ಲೆಯ ಹಿರಿಯ ಸಿವಿಲ್ ನ್ಯಾಯಧೀಶರಾದ ಸಂತೋಷ್.ಎಮ್.ಎಸ್. ಹೇಳಿದರು.


ಅವರು ಇಂದು ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಇಲಾಖೆ, (ಪದವಿ ಪೂರ್ವ) ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಹೆಚ್.ಎಸ್.ರುದ್ರಪ್ಪ ರಾಷ್ಟ್ರೀಯ ಪದವಿ ಪೂರ್ವ ಕಾಲೇಜು,

ಶಿವಮೊಗ್ಗ. ಇವರ ಸಂಯುಕ್ತಾಶ್ರಯದಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಜಾಗೃತಿ ಮತ್ತು ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಒಳ್ಳೆಯ ಮತ್ತು ಕೆಟ್ಟ ವಿಚಾರಗಳೆರಡು ಇದ್ದು, ನಮ್ಮ ಜೀವನದ ಶ್ರೇಯಸ್ಸಿಗೆ ಬೇಕಾದ ಉತ್ತಮ ಮೌಲ್ಯಗಳು, ಆದರ್ಶಗಳನ್ನು ಮೈಗೂಡಿಸಿಕೊಂಡು ಸಮಾಜಮುಖಿಯಾಗಿ ಬೆಳೆಯಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.


ಭಾರತದಲ್ಲಿ ಜೀತ ಪದ್ಧತಿ ಮತ್ತು ಗುಲಾಮಗಿರಿ ಪದ್ಧತಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಆದರೆ ಜನರ ಬಡತನ ಮತ್ತು ಸಮಾಜದ ದುರ್ಬಲ ವರ್ಗಗಳನ್ನು ಬಹಳ ವ್ಯವಸ್ಥಿತವಾಗಿ ಜೀತ ಪದ್ಧತಿಯಂತಹ ಅಮಾನುಷ ವ್ಯವಸ್ಥೆಗೆ ಬಲವಂತವಾಗಿ ಕೆಲವರು ಒಳಪಡಿಸುತ್ತಿರುವುದು

ಅತ್ಯಂತ ಅಪಾಯಕಾರಿ ಬೆಳವಣಿಗೆ. ಕೆಲವರು ಮೊಬೈಲ್‌ಗಳನ್ನೇ ಬಳಸಿಕೊಂಡು ಅಶ್ಲೀಲ ಚಿತ್ರಗಳನ್ನು ಕಳಿಸಿ, ಬ್ಲಾಕ್ ಮೇಲ್ ಮಾಡುವ ಮೂಲಕ ಸಮಾಜದಲ್ಲಿ ಅವರ ಘನತೆಯನ್ನು ಹಾಳು ಮಾಡಿ ಹಣವನ್ನು ಪಡೆಯುವ ಅನೇಕ ಘಟನೆಗಳು ಭಾರತದಲ್ಲಿ ನಡೆಯುತ್ತಿರುವುದು ಕಂಡುಬರುತ್ತಿದೆ ಎಂದರು.


ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಚನ್ನಪ್ಪ.ಎಸ್.ವಹಿಸಿದ್ದರು. ಕಾರ್ಯಕ್ರಮದಲ್ಲಿ, ಕಾಲೇಜಿನ ಉಪನ್ಯಾಸಕ

ಡಾ.ಸಂತೋಷ್.ಹೆಚ್., ಕೃಷ್ಣಪ್ಪ.ಬಿ. ಕೆ.ಸಿ. ಬಸವರಾಜಪ್ಪ, ಕ್ರಿಸ್ಟೊಫರ್ ಸ್ಟ್ಯಾನಿ, ಸಂಪನ್ಮೂಲ ವ್ಯಕ್ತಿ ನಾಗರಾಜ್ ಕೊಣನೂರ್,ತಾಜ್ ಉದ್ದೀನ್ ಖಾನ್, ಹೆಚ್.ಎಸ್.ರುದ್ರಪ್ಪ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಸಿದ್ದರು.

Exit mobile version