Site icon TUNGATARANGA

ವೈದ್ಯಕೀಯ/ಅರೆವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ ಆಗಸ್ಟ್ ೦೯ ೨೦೨೪-೨೫ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ೩ ಕ್ಲಿನಿಕ್‌ಗಳಲ್ಲಿ ಖಾಲಿಯಿರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಎಂಬಿಬಿಎಸ್ ವೈದ್ಯರ -೨ ಹುದ್ದೆಗೆ ಎಂಬಿಬಿಎಸ್ ಉತ್ತೀರ್ಣರಾಗಿರಬೇಕು ಮತ್ತು ಕಡ್ಡಾಯವಾಗಿ ಇಂಟರ‍್ನ್‌ಶಿಪ್ ಪೂರೈಸಿರಬೇಕು.


ಕಿರಿಯ ಆರೋಗ್ಯ ಸಹಾಯಕ(ಆರೋಗ್ಯ ನಿರೀಕ್ಷಣಾಧಿಕಾರಿಗಳು)ರ-೩ ಹುದ್ದೆಗೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ಕರ್ನಾಟಕ ರಾಜ್ಯದ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿವಿದ್ದೋದ್ದೇಶ ಮೂಲ

ಆರೋಗ್ಯ ಕಾರ್ಯಕರ್ತರ ತರಬೇತಿಯನ್ನು ಪಡೆದಿರಬೇಕು. ಅಥವಾ ಕರ್ನಾಟಕ ಅರೆ ವೈದ್ಯಕೀಯ ಮಂಡಳಿ ನಡೆಸುವ ೩ ವರ್ಷಗಳ ಆರೋಗ್ಯ ನೀರಿಕ್ಷಕರ ಡಿಪ್ಲೋಮಾ ಹೊಂದಿರಬೇಕು. ಅಥವಾ ಪಿಯುಸಿ (ವಿಜ್ಞಾನ) ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ಅರೆ ವೈದ್ಯಕೀಯ ಮಂಡಳಿ ನಡೆಸುವ ೨ ವರ್ಷಗಳ ಆರೋಗ್ಯ ನೀರಿಕ್ಷಕರ ಡಿಪ್ಲೋಮಾ ಹೊಂದಿರಬೇಕು.


ನೇಮಕಾತಿಯು ಮೇರಿಟ್ ಕಂ ರೋಸ್ಟರ್ ಆಧಾರದ ಮೇಲೆ ಭರ್ತಿ ಮಾಡಲಾಗುವುದು. ಆಸಕ್ತರು ಅರ್ಜಿ ನಮೂನೆಯನ್ನು ಎನ್.ಹೆಚ್.ಎಂ. ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣ, ಬಿ.ಹೆಚ್.ರಸ್ತೆ, ಶಿವಮೊಗ್ಗ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸ್ವಯಂ ದೃಢೀಕರಿಸಿದ ದಾಖಲೆಗಳ ನಕಲು ಪ್ರತಿ, ಇತ್ತೀಚಿನ ಭಾವಚಿತ್ರ, ೨-೫ ವರ್ಷಗಳ ಅನುಭವ ಪ್ರಮಾಣ ಪತ್ರ,

ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ, ಖಾಯಂ ವಿಳಾಸ ಹಾಗೂ ವಾಸ ಸ್ಥಳದ ಬಗ್ಗೆ ಮಹಾನಗರ ಪಾಲಿಕೆ/ಸಂಬಂಧಿಸಿದ ಪಂಚಾಯತ್‌ನಿಂದ ದೃಢೀಕರಣ ಪತ್ರ ಮತ್ತು ಸ್ವವಿವರಗಳೊಂದಿಗೆ ಆ.೧೩

ರಂದು ಮಧ್ಯಾಹ್ನ ೧.೩೦ರೊಳಗಾಗಿ ಸಲ್ಲಿಸುವುದು. ಅದೇ ದಿನ ಸಂಜೆ ೫.೩೦ರವೆಗೆ ಎಲ್ಲಾ ಮೂಲ ದಾಖಲಾತಿಗಳ ಪರಿಶೀಲನೆ ನಡೆಸಲಾಗುವುದು ಎಂದು ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: ೦೮೧೮೨-೨೦೦೩೩೭ ನ್ನು ಸಂಪರ್ಕಿಸುವುದು.

Exit mobile version