———————
ಶಿವಮೊಗ್ಗ, ಆಗಸ್ಟ್ 14 (ಕರ್ನಾಟಕ ವಾರ್ತೆ) : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ
ಅಲೆಮಾರಿ/ಅರೆ ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ
ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ, ಹಾಗೂ ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು www.ssp.postmartic.karnataka.gov.in ವೆಬ್ಸೈಟ್ ಮೂಲಕ ದಿ:15/09/2024 ರೊಳಗಾಗಿ ಸಲ್ಲಿಸುವುದು. ಕಾರ್ಯಕ್ರಮಗಳ ವಿವರ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ
ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ www.bcwd.karnataka.gov.in ವೆಬ್ಸೈಟ್, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್ postmartichelp@karnataka.gov.in ,ದೂ.ಸಂ.: 1902 ನ್ನು ಸಂಪರ್ಕಿಸುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.: 08182-222129 ಅಥವಾ ಸಹಾಯವಾಣಿ 8050770005 ಗಳನ್ನು ಸಂಪರ್ಕಿಸುವುದು.