ಶಿವಮೊಗ್ಗ, ಆ.23
ಚಂದ್ರಯಾನ-3 ರ ಯಶಸ್ಸು ನಮ್ಮ ದೇಶದ ಹೆಮ್ಮೆಯಾಗಿದ್ದು ಈ ಮೂಲಕ ನಮ್ಮ ಹಿರಿಯ ವಿಜ್ಞಾನಿಗಳ ಕನಸು ನನಸಾಗಿದೆ ಎಂದು ಇಸ್ರೋ/ಯುಆರ್‌ಎಸ್‌ಸಿ ಜಿಸ್ಯಾಟ್-7 ಮಿಷನ್‌ನ ಮಾಜಿ ವಿಜ್ಞಾನಿ ಮತ್ತು ಯೋಜನಾ ನಿರ್ದೇಶಕ ಜಿ.ಶಿವಣ್ಣ ನುಡಿದರು.
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಬೆಂಗಳೂರು ಹಾಘೂ ಜಿಲ್ಲಾ ಪಂಚಾಯಿತಿ ಶಿವಮೊಗ್ಗ, ದೇಶೀಯ ವಿದ್ಯಾಶಾಲಾ ಸಮಿತಿ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಗರದ ಡಿವಿಎಸ್ ಪಿಯು ಸ್ವತಂತ್ರ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ರಾಷ್ಟಿçÃಯ ಬಾಹ್ಯಾಕಾಶ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿ ಬಾಹ್ಯಾಕಾಶ ವಿಜ್ಞಾನಿ ವಿಕ್ರಂ ಸಾರಾಬಾಯಿ ಸೇರಿದಂತೆ ಅನೇಕ ವಿಜ್ಞಾನಿಗಳು ಚಂದ್ರನ ಮೇಲೆ ಉಪಗ್ರಹ ಕಳುಹಿಸುವ ಬಗ್ಗೆ ಸಾಕಷ್ಟು ಸಂಶೋಧನೆಗಳನ್ನು ಮಾಡುತ್ತಾ ಬಂದಿದ್ದು, ಚಂದ್ರಯಾನ-3 ರ ಯಶಸ್ಸು ಅವರ ಕನಸಿನ ಫಲವಾಗಿದೆ ಎಂದರು.
ದೇಶದ ರಕ್ಷಣಾ ವ್ಯವಸ್ಥೆಗಾಗಿ ಇಸ್ರೋದಿಂದ ಮೊದಲ ಉಪಗ್ರಹ ಉಡಾವಣೆ ಮಾಡಲಾಯಿತು. ನಂತರ ನೌಕಾ ಪಡೆಗಳಲ್ಲಿ ಸಂವಹಿಸಲು ಸರಿಯಾದ ಮಾಧ್ಯಮ ಇರಲಿಲ್ಲ ಅದಕ್ಕಾಗಿ, ಇನ್ಸಾಟ್-07 ನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಇಂದು ಇದನ್ನು ಭಾರತೀಯ ಮೂರು ಸೇನೆಗಳೂ ಬಳಸುತ್ತಿದ್ದಾರೆ. ಚಂದ್ರಯಾನ-01 ಮತ್ತು ಚಂದ್ರಯಾನ-02 ರಲ್ಲಿನ ಸೂಕ್ಷö್ಮ ವಿಚಾರಗಳನ್ನು ಅಧ್ಯಯನ ನಡೆಸಿ ಚಂದ್ರಯಾನ -3 ರಲ್ಲಿ ಯಶಸ್ವಿಯಾಗಿ ಲ್ಯಾಂಡಿAಗ್ ಮಾಡಿ ಅದ್ಭುತ ಸಾಧನೆ ತೋರಲಾಗಿದ್ದು, ದಕ್ಷಿಣ ಧೃವದಲ್ಲಿ ಲ್ಯಾಂಡಿAಗ್ ಮಾಡಿದ ಮೊದಲ ದೇಶವಾಗಿ ಹೊರಹೊಮ್ಮಿದ್ದೇವೆ. ಈ ಮೂಲಕ ಚಂದ್ರನ ಮೇಲೆ ಇತರೆ ಎರಡು ದೇಶಗಳೊಂದಿಗೆ ನಮಗೂ ಹಕ್ಕಿದೆ ಎಂದು ತಿಳಿಸಿದ ಅವರು ಪಿಪಿಟಿ ಪ್ರದರ್ಶನದ ಮೂಲಕ ಚಂದ್ರಯಾನ-3 ರ ಸಂಪೂರ್ಣ ಪ್ರಕ್ರಿಯೆ, ವಿಜ್ಞಾನಿ ವಿಕ್ರಮ್ ಸಾರಾಬಾಯಿ ಅವರ ಸಾಧನೆಗಳು, ಇತರೆ ಬಾಹ್ಯಾಕಾಶದ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ ಮಾತನಾಡಿ, ಚಂದ್ರಯಾನ-3 ಮಿಷನ್ ಯಶಸ್ಸನ್ನು ಆಚರಿಸಲು ಭಾರತ ಸರ್ಕಾರ ಪ್ರತಿ ವರ್ಷ ಆಗಸ್ಟ್ 23 ನ್ನು ‘ರಾಷ್ಟಿçÃಯ ಬಾಹ್ಯಾಕಾಶ ದಿನ’ ಎಂದು ಘೋಷಿಸಿದ್ದು, ಇದರ ಅಂಗವಾಗಿ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯು ಬಾಹ್ಯಾಕಾಶ ವಿಜ್ಞಾನದ ಕುರಿತು ಆಸಕ್ತಿ ಮೂಡಿಸಲು ಗಗನಯಾತ್ರಿ ಹಾಗೂ ಬಾಹ್ಯಾಕಾಶ ವಿಜ್ಞಾನಿಗಳ ಕೊಡುಗೆಗಳ ಬಗ್ಗೆ ವಿಜ್ಞಾನ ಚಟುವಟಿಕೆಗಳನ್ನು ಆಯೋಜಿಸಿದೆ.
ಇಸ್ರೋ ನಮ್ಮ ದೇಶದ ಸಂರಕ್ಷಣಾ ವಿಷಯದಲ್ಲಿ, ಬಾಹ್ಯಾಕಾಶ ಕ್ಷೇತ್ರದಲ್ಲಿ ಸಾಕಷ್ಟು ಕೆಲಸಗಳನ್ನು, ಸಂಶೋಧನೆಗಳನ್ನು ಮಾಡುತ್ತಾ ಬಂದಿದೆ. ವಿಶೇಷ ಸಾಧನೆ ಮಾಡಿದಾಗ ಮಾತ್ರ ನಮಗೆ ಗೊತ್ತಾಗುತ್ತಿದೆ. ವಿಕ್ರಂ ಸಾರಾಬಾಯಿ, ಡಾ.ಎಪಿಜೆ ಅಬ್ದುಲ್ ಕಲಾಂ ಸೇರಿದಂತೆ ಹಲವಾರು ಬಾಹ್ಯಾಕಾಶ ವಿಜ್ಞಾನಿಗಳು ಅನೇಕ ಕೊಡುಗಡೆಗಳನ್ನು ನೀಡಿದ್ದು ‘ನಮ್ಮ ಇಸ್ರೋ ನಮ್ಮ ಹೆಮ್ಮೆ’ ಎನ್ನುವಂತೆ ಮಾಡಿದ್ದಾರೆ. ವಿದ್ಯಾರ್ಥಿಗಳು ಕೇವಲ ಡಾಕ್ಟರ್, ಇಂಜಿನಿಯರಿAಗ್ ಕೋರ್ಸ್ ಮಾಡದೇ ಬಾಹ್ಯಾಕಾಶ ವಿಜ್ಞಾನದ ಬಗ್ಗೆ ಸಹ ಆಸಕ್ತಿ ಹೊಂದಬೇಕು ಎಂದ ಅವರು ಇಸ್ರೋ ಇನ್ನೂ ಹೆಚ್ಚಿನ ಸಾಧನೆಗಳನ್ನು ಮಾಡಬೇಕೆಂದು ಆಶಿಸಿದರು.
ಡಿಡಿಪಿಯು ಚಂದ್ರಪ್ಪ ಎಸ್ ಗುಂಡಪಲ್ಲಿ ಮಾತನಾಡಿ, ಚಂದ್ರಯಾನ-3 ಮಿಷನ್‌ನಲ್ಲಿ ದಕ್ಷಿಣ ದೃವದಲ್ಲಿ ಸಾಫ್ಟ್ಲ್ಯಾಂಡಿAಗ್ ಮಾಡಿರುವುದು ಒಂದು ದೊಡ್ಡ ಸಾಧನೆಯೇ ಸರಿ. ಜಗತ್ತೇ ನಮ್ಮ ದೇಶದತ್ತ ನೋಡುವಂತೆ ಮಾಡಿರುವ ಇಸ್ರೋದ ವಿಜ್ಞಾನಿಗಳು ಮತ್ತು ತಂಡಕ್ಕೆ ಅಭಿನಂದನೆಗಳು.
ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ವೈಜ್ಞಾನಿಕ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನೆಗಳನ್ನು ಕೈಗೊಂಡು ಕೊಡುಗೆಗಳನ್ನು ನೀಡಬೇಕು. ನಮ್ಮ ದೇಶ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ವೈಜ್ಞಾನಿಕವಾಗಿ ಅಭಿವೃದ್ದಿ ಹೊಂದಿದ್ದು, ವಿದ್ಯಾರ್ಥಿಗಳು ವಿಜ್ಞಾನದಲ್ಲಿ ವಿಶೇಷ ಆಸಕ್ತಿ ಮತ್ತು ಇಚ್ಚಾಶಕ್ತಿಯನ್ನು ಬೆಳೆಸಿಕೊಂಡು ಸಾಧಿಸುವೆಡೆ ಗಮನ ಹರಿಸಬೇಕೆಂದರು.
ದೇಶೀಯ ವಿದ್ಯಾ ಶಾಲಾ ಸಮಿತಿ ಕಾರ್ಯದರ್ಶಿಗಳಾದ ರಾಜಶೇಖರ ಎಸ್ ಅಧ್ಯಕ್ಷತೆ ವಹಿಸಿ ಮಾತನಾಡಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಆಸಕ್ತಿ ಹೊಂದಿ, ಬಾಹ್ಯಾಕಾಶ ಮತ್ತು ವೈಜ್ಞಾನಿಕ ಕ್ಷೇತ್ರದಲ್ಲಿ ಇರುವ ವಿಫುಲ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಡಿವಿಎಸ್ ಸ್ವತಂತ್ರ ಪಿಯು ಕಾಲೇಜಿನ ಪ್ರಾಂಶುಪಾಲರಾದ ಎ.ಈ.ರಾಜಶೇಖರ್ ಪ್ರಾಸ್ತಾವಿಕ ನುಡಿಗಳನ್ನಾಡಿ, ಚಂದ್ರಯಾನ-3 ರ ಯಶಸ್ಸು ನಮ್ಮೆಲ್ಲರ ಹೆಮ್ಮೆ. ಈ ದಿನವನ್ನು ಬಾಹ್ಯಾಕಾಶ ದಿನವಾಗಿ ಸಂಭ್ರಮಿಸುತ್ತಿರುವುದಕ್ಕೆ ಸರ್ಕಾರಕ್ಕೆ ಅಭಿನಂದನೆಗಳು. ಚಂದ್ರಯಾನ-3 ರ ತಂಡದಲ್ಲಿ ಡಿವಿಎಸ್ ಕಾಲೇಜಿನ 5 ಜನ ವಿದ್ಯಾರ್ಥಿಗಳಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.
ವಾರ್ತಾ ಇಲಾಖೆಯ ವಾರ್ತಾ ಸಹಾಯಕಿ ಭಾಗ್ಯ ಎಂ.ಟಿ, ಡಿವಿಎಸ್ ಸ್ವತಂತ್ರ ಪಿಯು ಕಾಲೇಜಿನ ಶಿಕ್ಷಕ ಪ್ರತಿನಿಧಿ ಉಮೇಶ್ ಹೆಚ್.ಸಿ, ಜಿ.ಪಂ ಜಿಲ್ಲಾ ಯೋಜನಾ ಸಂಯೋಜಕ ಶಂಕರ ಪಿ, ಉಪನ್ಯಾಸಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಜರಿದ್ದರು.