Site icon TUNGATARANGA

ಈಜು ಒಂದು ದಿನಕ್ಕೆ ಸೀಮಿತವಾಗಬಾರದು ಅದು ದೈನಂದಿನ ಬದುಕಿನ ಅವಿಭಾಜ್ಯ ಕಾರ್ಯವಾಗಬೇಕು :ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರಾದ ಮಂಜುನಾಥ ಎಸ್. ಆರ್.

ಶಿವಮೊಗ್ಗ :ಈಜು ಒಂದು ದಿನಕ್ಕೆ ಸೀಮಿತವಾಗಬಾರದು ಅದು ದೈನಂದಿನ ಬದುಕಿನ ಅವಿಭಾಜ್ಯ ಕಾರ್ಯವಾಗಬೇಕು ಎಂದು ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರಾದ ಮಂಜುನಾಥ ಎಸ್. ಆರ್.ಹೇಳಿದರು


    ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ  ಕಚೇರಿ, ಶಿವಮೊಗ್ಗ. ಹಾಗೂ  ಗೋಪಾಳದ ಶ್ರೀ ರಾಮಕೃಷ್ಣ ವಿದ್ಯಾ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ  ಜಿಲ್ಲಾ ಕ್ರೀಡಾ ಸಂಕೀರ್ಣ ದಲ್ಲಿ ಜಿಲ್ಲಾ ಮಟ್ಟದ 14 ಮತ್ತು 17 ವರ್ಷ ವಯೋಮಿತಿ ಯೊಳಗಿನ ಬಾಲಕ ಮತ್ತು ಬಾಲಕಿಯರ  ಜಿಲ್ಲಾ ಮಟ್ಟದ ಈಜು  ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡುತ್ತಾ, ದೈಹಿಕವಾಗಿ ಮತ್ತು

ಮಾನಸಿಕವಾಗಿ, ಆರೋಗ್ಯವಂತರಾಗಲು ಇಂತಹ ಸ್ಪರ್ಧೆಗಳು ಸಹಕಾರಿಯಾಗುತ್ತವೆ ಎಂದರು. ಮಕ್ಕಳಿಗೆ ಕೇವಲ ಅಂಕ ಗಳಿಸುವುದು ಮುಖ್ಯವಲ್ಲ, ಓದಿನ ಜೊತೆಗೆ ಮಾನಸಿಕ, ಆರೋಗ್ಯ ಸದೃಢತೆಯನ್ನು ಕಾಪಾಡಿಕೊಳ್ಳುವಂತಹ ಕ್ರೀಡಾ ಮನೋಭಾವನೆಯನ್ನು ಬೆಳೆಸಿಕೊಳ್ಳುವುದು ಜವಾಬ್ದಾರಿಯಾಗಿದೆ ಎಂದರು. ಆರೋಗ್ಯವಂತ ದೇಹದಲ್ಲಿ ಆರೋಗ್ಯವಂತ ಮನಸ್ಸು ರೂಪಿಸಲು ಕ್ರೀಡೆ

ಸಹಕಾರಿಯಾಗುತ್ತದೆ. ಸರ್ಕಾರ ಕ್ರೀಡಾಪಟುಗಳಿಗೆ  ಸಾಕಷ್ಟು ಯೋಜನೆಗಳು ತಂದಿದೆ ಅದನ್ನು ಸದುಪಯೋಗಪಡಿಸಿಕೊಳ್ಳಲು ತಿಳಿಸಿದರು.
      ಕ್ಷೇತ್ರ ಶಿಕ್ಷಣಾಧಿಕಾರಿಗಳಾದ  ರಮೇಶ್ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು ವಿದ್ಯೆಗಷ್ಟೇ ಸೀಮಿತವಾಗದೆ,ಕ್ರೀಡೆ ಮುಖಾಂತರ ಯುವ ಶಕ್ತಿಯನ್ನು ಬೆಳೆಸುವಂತಹ ಒಂದು ಪವಿತ್ರವಾದ ಅಂಗ ಅಂದರೆ ಅದು ಕ್ರೀಡೆ,ಸರ್ಕಾರ ಹೆಚ್ಚು ಹೊತ್ತು ನೀಡಿ, ಶಿವಮೊಗ್ಗದಲ್ಲಿ ಅತ್ಯುತ್ತಮ ಮಟ್ಟದ ಈಜುಕೊಳ ಇದಾಗಿದ್ದು, ಸಾರ್ವಜನಿಕರು, ಪೋಷಕರು  ಮತ್ತು ಇಲಾಖೆ ಜೊತೆ ಸಹಕರಿಸಿ ಮಕ್ಕಳು ಸದುಪಯೋಗ ಪಡೆಯುವಂತಹ ಅವಕಾಶ ಕ್ರೀಡಾ ಪಟುಗಳಿಗೆ ದೊರಕುತ್ತಿದೆ ಎಂದು ಹೇಳಿದರು.


 ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ  ರೇಖ್ಯಾನಾಯ್ಕ ಮಾತನಾಡಿ,ಕ್ರೀಡಾಪಟುಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಸಂಕಲ್ಪ ಇರಬೇಕು. ಸತತ ಪ್ರಯತ್ನದಿಂದ ಜೀವನವನ್ನು ಹಾಗೂ ಕ್ರೀಡೆಯನ್ನು ಎಂತಹ ಸಾಧನೆಯನ್ನಾದರೂ  ಮಾಡಬಹುದು ಎಂದರು.
    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ರಾಮಕೃಷ್ಣ ವಿದ್ಯಾನಿಕೇತನ ಸಂಸ್ಥೆಯ ಕಾರ್ಯದರ್ಶಿಯಾದ ಶ್ರೀಮತಿ ಶೋಭಾ ವೆಂಕಟರಮಣ  
ಮಾತನಾಡಿದ ಅವರು, ಕ್ರೀಡೆಯಲ್ಲಿ ಸೋಲುವುದು ಸಾಮಾನ್ಯ ಆದರೆ ಕ್ರೀಡಾಪಟು ಎಂದೂ ಕೂಡ ತಮ್ಮ ಆತ್ಮ ವಿಶ್ವಾಸವನ್ನು ಕಳೆದುಕೊಳ್ಳಬಾರದು ಎಂದು ಸಲಹೆ ನೀಡಿದರು.


     ಆಟದಲ್ಲಿ ಸೋಲು ಗೆಲುವು ಸರ್ವೇ ಸಾಮಾನ್ಯ ಆದರೆ ಭಾಗವಹಿಸುವಿಕೆ ಅತ್ಯಂತ ಮುಖ್ಯವಾಗಿರುತ್ತದೆ ಎಂದ ಅವರು, ಕ್ರೀಡೆಯಲ್ಲಿ ತಮ್ಮ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯವನ್ನು ಪರೀಕ್ಷಿಸಿಕೊಳ್ಳಬಹುದಾಗಿದೆ ಅಲ್ಲದೇ ಕ್ರೀಡೆ ಶಿಸ್ತನ್ನು ಕಲಿಸುತ್ತದೆ ಎಂದು ಹೇಳಿದರು.
    ಕ್ರೀಡಾಪಟುಗಳಲ್ಲಿ ಅತ್ಯಂತ ಸಾಮರಸ್ಯವಿರುತ್ತದೆ.ಇದು ಕ್ರೀಡಾ ಕ್ಷೇತ್ರದ ಗುಟ್ಟಾಗಿದೆ ಎಂದ ಅವರು, ಕ್ರೀಡೆ ತಮ್ಮ ಮಾನಸಿಕ ಬುದ್ದಿ ಮಟ್ಟವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ.ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಕೂಡ ಶೈಕ್ಷಣಿಕ ಚಟುವಟಿಕೆಯ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಕೂಡ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದರು. ಮಕ್ಕಳೊಂದಿಗೆ ಈಜುಕೊಳಕ್ಕೆ ಬಂದು ಮಕ್ಕಳಿಗೆ ಬೆನ್ನು ತಟ್ಟಿ ಪ್ರೋತ್ಸಾಹಿಸಿ ಎಂದು ಹೇಳಿದರು.


      ಕಾರ್ಯಕ್ರಮದಲ್ಲಿ ಪೋಷಕರು, ಶಿಕ್ಷಕರು, ಮತ್ತು ವಿದ್ಯಾರ್ಥಿಗಳು ಇನ್ನು ಮುಂತಾದವರು ಉಪಸ್ಥಿತರಿದ್ದರು.

Exit mobile version