Site icon TUNGATARANGA

ಅ. 1 ರ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಹಿರಿಯ ನಾಗರಿಕರಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ

ಶಿವಮೊಗ್ಗ ಸೆಪ್ಟಂಬರ್ 02 ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅ. 1 ರ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಸೆ. 05 ರ ಗುರುವಾರದಂದು ನಗರದ ನೆಹರು ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರಿಗೆ ಜಿಲ್ಲಾ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.


ಪುರುಷರಿಗೆ ಕ್ರೀಡಾ ಸ್ಪರ್ಧೆಗಳು:- 60-70 ವರ್ಷದವರಿಗೆ ಮ್ಯೂಸಿಕಲ್ ಚೇರ್, 60-69 ವರ್ಷದವರಿಗೆ – ಬಿರುಸಿನ ನಡಿಗೆ, ಬಕೆಟ್‌ನಲ್ಲಿ ಬಾಲ್ ಎಸೆಯುವುದು. 70 ವರ್ಷದವರಿಗೆ ಹಾಗೂ ಮೇಲ್ಪಟ್ಟವರಿಗೆ – ಬಿರುಸಿನ ನಡಿಗೆ, ಬಕೆಟ್‌ನಲ್ಲಿ ಬಾಲ್ ಎಸೆಯುವುದು.


ಮಹಿಳೆಯರಿಗೆ ಕ್ರೀಡಾ ಸ್ಪರ್ಧೆಗಳು:- 60-70 ವರ್ಷದವರಿಗೆ ಮ್ಯೂಸಿಕಲ್ ಚೇರ್. 60-69 ವರ್ಷದವರಿಗೆ ಬಿರುಸಿನ ನಡಿಗೆ, ಬಕೆಟ್‌ನಲ್ಲಿ ಬಾಲ್ ಎಸೆಯುವುದು.70 ವರ್ಷ ಹಾಗೂ ಮೇಲ್ಪಟ್ಟವರಿಗೆ- ಬಿರುಸಿನ ನಡಿಗೆ, ಬಕೆಟ್‌ನಲ್ಲಿ ಬಾಲ್ ಎಸೆಯುವುದು.


ಪುರುಷರಿಗೆ ಸಾಂಸ್ಕೃತಿಕ ಸ್ಪರ್ಧೆಗಳು :-60-69 ವರ್ಷದವರಿಗೆ – ಗಾಯನ ಸ್ಪರ್ಧೆ, ಏಕ ಪಾತ್ರಾಭಿನಯ, 70 ವರ್ಷ ಹಾಗೂ ಮೇಲ್ಪಟ್ಟವರಿಗೆ ಗಾಯನ ಸ್ಪರ್ಧೆ, ಏಕ ಪಾತ್ರಾಭಿನಯ.
ಮಹಿಳೆಯರಿಗೆ ಸಾಂಸ್ಕೃತಿಕ ಸ್ಪರ್ಧೆಗಳು :-60-69 ವರ್ಷದವರಿಗೆ – ಗಾಯನ ಸ್ಪರ್ಧೆ, ಏಕ ಪಾತ್ರಾಭಿನಯ, 70 ವರ್ಷ ಹಾಗೂ ಮೇಲ್ಪಟ್ಟವರಿಗೆ ಗಾಯನ ಸ್ಪರ್ಧೆ, ಏಕ ಪಾತ್ರಾಭಿನಯ.


ಆಸಕ್ತ ಹಿರಿಯ ನಾಗರಿಕರು 60 ವರ್ಷ ಮೇಲ್ಪಟ್ಟವರಾಗಿರಬೇಕು, ಆಧಾರ್ ಕಾರ್ಡ್ ಮತ್ತು ಹಿರಿಯ ನಾಗರಿಕರ ಗುರುತಿನ ಚೀಟಿಯೊಂದಿಗೆ ದಿನಾಂಕ:04-09-2024ರ ಒಳಗಾಗಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ,

ಡಿ.ವೈ.ಎಸ್.ಪಿ ಕಛೇರಿ ಆವರಣ ಶಿವಮೊಗ್ಗ ಇಲ್ಲಿ ನೊಂದಣಿ  ಮಾಡಿಸಿಕೊಳ್ಳತಕ್ಕದ್ದು. ನೊಂದಣಿಗಾಗಿ ದೂ,ಸಂ :  ರವೀಂದ್ರ-9164444370, ಯುವರಾಜ- 9632570371 ಮತ್ತು ಕಚೇರಿ ದೂ,ಸಂ  -08182-221188/260424 ಸಂಪರ್ಕಿಸುವAತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version