Site icon TUNGATARANGA

ಗಣೇಶೋತ್ಸವ, ಈದ್ ಮಿಲಾದ್/ ಡಿಜೆ, ಬೈಕ್ Rally ನಿಷೇದ, ತೆಪ್ಪಕ್ಕೂ ಲಿಮಿಟ್, ಕಾನೂನು ಪಾಲಿಸಿದಿದ್ರೆ ಜೋಕೆ!, ಶಿವಮೊಗ್ಗ ಜಲ್ಲಾಡಳಿತದ ಸೂಚನೆ ನೋಡ್ರಿ

ಗಣೇಶೋತ್ಸವ ಹಾಗೂ ಈದ್ ಮಿಲಾದ್ ಪೂರ್ಣಗೊಳ್ಳುವವರೆಗೆ ಡಿಜೆ ಸಿಸ್ಟಂ ನಿಷೇಧ


ಶಿವಮೊಗ್ಗ ಸೆ. 03;

ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಆಚರಣೆ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಸೆ. 07 ರಿಂದ ಗಣೇಶೋತ್ಸವ ಪೂರ್ಣಗೊಳ್ಳುವವರೆಗೆ ಹಾಗೂ ಸೆ. 16 ರಿಂದ ಈದ್ ಮಿಲಾದ್ ಹಬ್ಬ ಪೂರ್ಣಗೊಳ್ಳುವವರೆಗೂ ಶಿವಮೊಗ್ಗ ಜಿಲ್ಲೆಯಾದ್ಯಂತ ಡಿ.ಜೆ.ಸಿಸ್ಟಂ ಬಳಕೆಯನ್ನು ನಿಷೇದಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡಿಯವರು ಆದೇಶಿಸಿದ್ದಾರೆ.

ಸೆ.06 ರಿಂದ ಸೆ. 20ರವರೆಗೆ ಬೈಕ್ ರ‍್ಯಾಲಿ ನಿಷೇಧ


ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಆಚರಣೆ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಸೆ. 06 ರಿಂದ ಸೆ. 20 ರವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಬೈಕ್ ರ‍್ಯಾಲಿ ನಡೆಸುವುದನ್ನು ನಿಷೇದಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡಿಯವರು ಆದೇಶಿಸಿದ್ದಾರೆ.

ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಂಡೀಷನ್ ತೆಪ್ಪ ಬಳಕೆ ಕಡ್ಡಾಯ

ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಸೆ. 07 ರಂದು ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ನಂತರ ವಿವಿಧ ದಿನಾಂಕಗಳಂದು ವಿಷರ್ಜನೆಯನ್ನು ಮೆರವಣಿಗೆ ಮೂಲಕ ಹೊಳೆ, ನದಿ, ಕೆರೆಗಳು, ಹಿನ್ನೀರು ಪ್ರದೇಶಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ತೆಪ್ಪ ಬಳಕೆ ಮಾಡಿದ್ದಲ್ಲಿ ಕೇವಲ ಮೂರರಿಂದ ನಾಲ್ಕು ಜನರಿಗೆ ಮಾತ್ರ ತೆಪ್ಪದಲ್ಲಿ ಹೋಗಲು ಅವಕಾಶವನ್ನು ನೀಡಿ, ಕಡ್ಡಾಯವಾಗಿ ಲೈಫ್ ಜಾಕೇಟ್ ಬಳಸಿಕೊಂಡು ನುರಿತ ಈಜುಗಾರರ ಸಮ್ಮುಖದಲ್ಲಿ ಗಣಪತಿ ವಿಸರ್ಜನೆ ಮಾಡಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡಿಯವರು ಆದೇಶಿಸಿದ್ದಾರೆ.

Exit mobile version