Site icon TUNGATARANGA

ಮಕ್ಕಳಿಗೆ ಶಿಕ್ಷಣ, ಪೋಷಣೆ ನೀಡುವ ಅಂಗನವಾಡಿ ಕಾರ್ಯಕರ್ತೆಯರು ಒಂದು ರೀತಿಯಲ್ಲಿ ದೇಶ ಕಟ್ಟುವ ಕೆಲಸ ಮಾಡುತ್ತಿ ದ್ದಾರೆ : ನ್ಯಾಯಾಧೀಶ ಸಂತೋಷ್ ಎಂ.ಎಸ್

ಶಿವಮೊಗ್ಗ, ಸೆ.೧೯:
ಮಕ್ಕಳಿಗೆ ಶಿಕ್ಷಣ, ಪೋಷಣೆ ನೀಡುವ ಅಂಗನವಾಡಿ ಕಾರ್ಯಕರ್ತೆಯರು ಒಂದು ರೀತಿಯಲ್ಲಿ ದೇಶ ಕಟ್ಟುವ ಕೆಲಸ ಮಾಡುತ್ತಿ ದ್ದಾರೆ ಎಂದು ಹಿರಿಯ ಸಿವಿಲ್ ನ್ಯಾಯಾ ಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್ ಅಭಿಪ್ರಾಯಪಟ್ಟರು.


ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ. ಶಿವಮಗ್ಗ ಹಾಗೂ ದಿ ಶಿವಮೊಗ್ಗ ಮಲ್ಟಿಪ ರ್ಪಸ್ ಸೋಷಿಯಲ್ ಸರ್ವಿಸ್ ಸೊಸೈಟಿ ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಆಲ್ಕೊಳದ ಚೈತನ್ಯ ಸಭಾಂಗಣದಲ್ಲಿ ಪೋಷಣ್ ಮಾಸಾಚರಣೆ ಆಯೋಜಿಸ ಲಾಗಿದ್ದ ಅನೀಮಿಯ ಮುಕ್ತ ಭಾರತ ಕಾರ್ಯಕ್ರಮ ಹಾಗೂ ಪೌಷ್ಟಿಕ ಆಹಾರ ಮತ್ತು ಗ್ರೋಥ್ ಮಾನಿಟರಿಂಗ್ ಕುರಿತು ತರಬೇತುದಾರರ ತರಬೇತಿ ಕಾರ್ಯಕ್ರಮ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.


೩ ರಿಂದ ೬ ವರ್ಷದೊಳಗಿನ ಮಕ್ಕಳಿಗೆ ಅಂಗನವಾಡಿಗಳಲ್ಲಿ ಕಲಿಸುವ, ಪೋಷಣೆ ಮಾಡುವ ಅಂಗನವಾಡಿ ಕಾರ್ಯಕರ್ತೆ ಯರು, ಅಂಗನವಾಡಿ ಸೂಪರ್‌ವೈಸರ್‌ಗಳು ಒಂದು ರೀತಿಯಲ್ಲಿ ತಳಮಟ್ಟದಲ್ಲಿ ದೇಶ ಕಟ್ಟುವ ಕೆಲಸದಲ್ಲಿ ನಿರತರಾಗಿದ್ದು ತಮಗೆ ನೀಡಿದ ಯಾವುದೇ ಕೆಲಸವನ್ನು ಸಮರ್ಪ ಕವಾಗಿ ಯೋಜನೆ ರೂಪಿಸಿಕೊಂಡು ಮಾಡಬೇಕು. ಆಗಬೇಕಾದ ಕೆಲಸಗಳ ಕುರಿತು ಒಂದೆಡೆ ಬರೆದಿಟ್ಟುಕೊಳ್ಳಬೇಕು. ಕೆಲಸ ಮುಗಿದು ವರದಿ ನೀಡುವವರೆಗೆ, ಅಪ್ ಡೇಟ್ ಆಗುವವರೆಗೆ ಕಾರ್ಯವೆಸಗಬೇಕು ಎಂದು ಕಿವಿ ಮಾತು ಹೇಳಿದರು.


ಜಿಲ್ಲೆಯಲ್ಲಿ ೨೫೬೩ ಅಂಗನವಾಡಿಗಳು ಇದ್ದು ಹಲವಾರು ಚಟುವಟಿಕೆಗಳು ಯಶಸ್ವಿಯಾಗಿ ನಡೆಯುತ್ತಿವೆ. ಅವುಗಳ ಅಪ್‌ಡೇಟ್ ಸಹ ಸಮರ್ಪಕವಾಗಿ ಆಗಬೇಕು. ‘ಸುಪೋಷಿತ್ ಕಿಶೋರಿ ಮತ್ತು ಸಶಕ್ತ ನಾರಿ’ ನಿರ್ಮಾಣ ಈ ಎಲ್ಲ ಕಾರ್ಯ ಕ್ರಮಗಳ ಉದ್ದೇಶವಾಗಿದ್ದು ಜಿಲ್ಲೆಯಲ್ಲಿ ಯಶಸ್ವಿಯಾಗಿ ಇಂತಹ ತರಬೇತಿಗಳು ನಡೆಯಲಿ. ಹಾಗೂ ಭವಿಷ್ಯದಲ್ಲಿ ಅಪೌಷ್ಟಿಕತೆಯಿಂದ ಯಾವುದೇ ಜನತೆ ಬಳಲದಂತೆ ಆಗಲಿ ಎಂದು ಆಶಿಸಿದರು.


ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ ಮಾತನಾಡಿ, ಮಕ್ಕಳ ಸರ್ವಾಂಗೀಣ ಅಭಿವೃದ್ದಿಗೆ ನಾವೆಲ್ಲ ಶ್ರಮಿಸಬೇಕು. ಆದ್ದರಿಂದ ಅವರು ಚಿಕ್ಕವರಾಗಿದ್ದಾಗಿನಿಂದ ಉತ್ತಮ ಅಡಿಪಾಯ ಅವರಲ್ಲಿ ಹಾಕಬೇಕು. ೩ ರಿಂದ ೬ ವರ್ಷದ ಮಕ್ಕಳನ್ನು ಸದೃಢವಾಗ ತಯಾರು ಮಾಡಬೇಕು. ಮಕ್ಕಳಲ್ಲಿ ಎಸ್‌ಕ್ಯು೩ಆರ್ ಸೂತ್ರವನ್ನು ಅಳವಡಿಸಬೇಕು. ಎಸ್ ಎಂದರೆ ಸ್ಕ್ರೀನಿಂಗ್ ಮಕ್ಕಳು ಎಲ್ಲವನ್ನು ಪರಿಶೀಲಿ ಸುವ, ಕ್ಯು ಎಂದರೆ ಕ್ವೆಷನಿಂಗ್ ಪ್ರಶ್ನಿಸುವ ಮತ್ತು ೩ ಆರ್ ಎಂದರೆ ರೀಡ್, ರಿಸೈಟ್, ರಿವೈಸ್ ಮಾಡುವುದನ್ನು ಕಲಿಸಬೇಕು. ಇದರಿಂದ ಅವರಲ್ಲಿ ಓದುವ, ಓದಿದ್ದನ್ನು ನೆನಪಿಟ್ಟುಕೊಳ್ಳುವ ಶಕ್ತಿ ಹೆಚ್ಚುತ್ತದೆ.


ಮಕ್ಕಳಲ್ಲಿ ನಾವು ಮುಖ್ಯವಾಗಿ ಆತ್ಮವಿಶ್ವಾಸವನ್ನು ಬೆಳೆಸಬೇಕು. ಎದ್ದು ನಿಂತು ಪ್ರಶ್ನಿಸುವುದನ್ನು ಉತ್ತೇಜಿಸಬೇಕು. ಯಾವುದೇ ಕಾರಣಕ್ಕೂ ಮಕ್ಕಳನ್ನು ಬೇರೆ ಮಕ್ಕಳೊಂದಿಗೆ ಹೋಲಿಕೆ ಮಾಡಬಾರದು. ಪ್ರತಿಯೊಬ್ಬರಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಬೇಕು. ಧನಾತ್ಮಕ ಸಲಹೆಗಳನ್ನು ನೀಡತ್ತಾ ಹೋಗಬೇಕು. ಅತಿ ಮುದ್ದಿನಿಂದ ಕೇಳಿದ್ದಕ್ಕೆಲ್ಲ ಯೆಸ್ ಎನ್ನಬಾರದು, ಹಣದ ಮತ್ತು ಹಸಿವಿನ ಮಹತ್ವ ತಿಳಿಸಬೇಕು, ಅವರು ಆಯ್ಕೆ ಮಾಡುವುದಕ್ಕೆ ಅವಕಾಶ ನೀಡಬೇಕು, ಸೇವಾ ಮನೋಭಾವ ಬೆಳೆಸಬೇಕು. ಟಿವಿ ಮೊಬೈಲ್‌ನಿಂದ ಅವರು ಹೊರಬೇಕೆಂದರೆ ಮೊದಲು ಪೋಷಕರು ಅದರಿಂದ ದೂರವಿರಬೇಕು.

Exit mobile version