ಅಕ್ರಮ ಗಣಿಗಾರಿಕೆ ವಿರುದ್ಧ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಲೋಕಾಯುಕ್ತ ಆದೇಶ..?
ಶಿವಮೊಗ್ಗ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ನಡೆದ ಸ್ಪೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಾಯುಕ್ತ ನ್ಯಾಯಮೂರ್ತಿಗಳು ಅಕ್ರಮ ಗಣಿಗಾರಿಕೆ ವಿರುದ್ಧ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದ್ದಾರೆ ಎಂದು ತಿಳಿದು ಬಂದಿದೆ.
ಲೋಕಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ್ ಶೆಟ್ಟಿಯವರು,, ಅಕ್ರಮ ಗಣಿಗಾರಿಕೆ ವಿರುದ್ಧ ಆಳವಾದ ತನಿಖೆ ನಡೆಸಿ ಮುಂದಿನ 6 ವಾರಗಳಲ್ಲಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಲೋಕಾಯುಕ್ತ ನ್ಯಾಯಮೂರ್ತಿಗಳು ಆದೇಶದಲ್ಲಿ ಜಿಲ್ಲಾ ಕಾರ್ಯಪಡೆ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳಿಗೆ ಅಕ್ರಮ ಕ್ವಾರಿ, ಅಕ್ರಮ ಗಣಿಗಾರಿಕೆ, ಪರವಾನಗಿಯಲ್ಲಾಗಿರುವ ದೋಷಗಳು, ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವುದು ಹಾಗೂ ಅಕ್ರಮ ಗಣಿಗಾರಿಕೆ ತಡೆಯುವಲ್ಲಿ ವಿಫಲರಾದ ಅಧಿಕಾರಿಗಳ ಕುರಿತಂತೆ ಆಳವಾದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.