Site icon TUNGATARANGA

ಲೈಂಗಿಕ ಕಿರುಕುಳ, ಅತ್ಯಾಚಾರ ಆರೋಪಿಗಳಿಗೆ ಜಾಮೀನು ನೀಡದೇ ಕಠಿಣ ಶಿಕ್ಷೆ ವಿಧಿಸುವಂತೆ ಪ್ರತಿಭಟನೆ

#SHUBADOYASHIVAMOGGA

ಶಿವಮೊಗ್ಗ: ಹೆಣ್ಣುಮಕ್ಕಳ ಮತ್ತು ಮಹಿಳೆಯರ ರಕ್ಷಣೆಗೆ ಆಗ್ರಹಿಸಿ, ಲೈಂಗಿಕ ಕಿರುಕುಳ, ಅತ್ಯಾಚಾರ ಆರೋಪಿಗಳಿಗೆ ಜಾಮೀನು ನೀಡದೇ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಸೌಹಾರ್ದ ಸ್ವ ಸಹಾಯ ಸಂಘಗಳ ತಾಲೂಕು ಒಕ್ಕೂಟದ ವತಿಯಿಂದ ಇಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.


ಕಳೆದ ೮ ವರ್ಷಗಳಿಂದ ಒಕ್ಕೂಟವು ಮಹಿಳೆಯರ ಮತ್ತು ಅವರ ಕುಟುಂಬದವರ ಹಾಗೂ ಸಮುದಾಯದ

ಅಭಿವೃದ್ಧಿಗಾಗಿ ಮತ್ತು ದೀನ ದಲಿತ ಮಹಿಳೆಯರ ಸಬಲೀಕರಣಕ್ಕಾಗಿ ಕಾರ್ಯಾಚರಿಸುತ್ತಾ ಬಂದಿದೆ. ಇತ್ತೀಚೆಗೆ ನಡೆಯುತ್ತಿರುವ ಮಕ್ಕಳ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ,

ಹಿಂಸೆ, ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳಗಳು ಹೆಚ್ಚಾಗಿವೆ. ಒಟ್ಟು ೩೮೬೩ ಪೋಕ್ಸೋ ಪ್ರಕರಣಗಳು ೨೦೨೩ರಲ್ಲಿ ದಾಖಲಾಗಿದ್ದು ೬೦೭೬ ಅತ್ಯಾಚಾರ ಪ್ರಕರಣ ದಾಖಲಾಗಿವೆ. ಇದು ಶಾಶ್ವತವಾಗಿ ನಿಲ್ಲಬೇಕಾದರೆ ಅಪರಾಧ ಕೃತ್ಯ ಎಸಗುವವರಿಗೆ ಭಯ ಹುಟ್ಟಿಸಬೇಕಿದ್ದು

ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಜಾಮೀನು ನಿರಾಕರಿಸಬೇಕು. ಜೀವಾವಧಿ ಅಥವಾ ಗಲ್ಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತಂದು

ಮಕ್ಕಳು ಮತ್ತು ಮಹಿಳೆಯರು ಸಮಾಜದಲ್ಲಿ ಮುಕ್ತವಾಗಿ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಡಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷೆ ಪುಷ್ಪಲತಾ ಆರ್., ವಿನಯರಾಜ್, ರೂಪಾ, ಸಂಧ್ಯಾ, ಅಂಬಿಕಾ, ಶೋಭಾ, ಉಮಾ, ಭಾನುಪ್ರಿಯಾ ಮೊದಲಾದವರಿದ್ದರು.

Exit mobile version