2024 – 25ನೇ ಸಾಲಿನ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆ ಆಯ್ಕೆಯ ಪ್ರಕ್ರಿಯೆಯನ್ನು ದಿನಾಂಕ :1/10
ಶಾಲಾ ಶಿಕ್ಷಣ ಇಲಾಖೆ,ಉಪ ನಿರ್ದೇಶಕರ ಕಚೇರಿ ಶಿವಮೊಗ್ಗ. ಹಾಗೂ ಶ್ರೀ
ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ ಗುರುಪುರದ ಬಿಜಿಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಗುರುಪುರ, ಶಿವಮೊಗ್ಗ.ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಯನ್ನು ನಡೆಸಲು ತೀರ್ಮಾನಿಸಲಾಗಿದ್ದು, ಶಿವಮೊಗ್ಗ ಜಿಲ್ಲೆಯ ಎಲ್ಲಾ
ತಾಲ್ಲೂಕುಗಳ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಬಾಲಕ ಮತ್ತು ಬಾಲಕಿಯರು ಅಂದು ಗುರುಪುರದ ಬಿಜಿಎಸ್ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9 :30 ಗಂಟೆಯೊಳಗಾಗಿ
ಇಲಾಖೆಯ ನಿಯಮಾನುಸಾರ ಅಗತ್ಯ ದಾಖಲೆಗಳೊಂದಿಗೆ ವರದಿ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ, ಶ್ರೀ ಪ್ರಕಾಶ್ ಎಂ. ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳು,9448964356 ಮತ್ತು
ರಾಮಚಂದ್ರಪ್ಪ ಹೆಚ್. ತಿಮ್ಮೇನಹಳ್ಳಿ , ಬಿಜಿಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಗುರುಪುರ,ಶಿವಮೊಗ್ಗ. ದೈಹಿಕ ಶಿಕ್ಷಣ ಶಿಕ್ಷಕರು, 9880839575 ಇವರನ್ನು ಸಂಪರ್ಕಿಸಬಹುದು.