Site icon TUNGATARANGA

ಸಾಮಾಜಿಕ ವ್ಯವಸ್ಥೆಯಲ್ಲಿ ಬದಲಾವಣೆ ತರುವಂತಹ ಸೃಜನಾತ್ಮಕ ಸಿನಿಮಾಗಳ ಅವಶ್ಯಕ :ಸುನೀಲ್ ಕುಮಾರ್ ದೇಸಾಯಿ ಅಭಿಪ್ರಾಯ

ಶಿವಮೊಗ್ಗ: ಸಾಮಾಜಿಕ ವ್ಯವಸ್ಥೆಯಲ್ಲಿ ಬದಲಾವಣೆ ತರುವಂತಹ ಸೃಜನಾತ್ಮಕ ಸಿನಿಮಾಗಳ ಅವಶ್ಯಕತೆ ಇದೆ ಎಂದು ಸಿನಿಮಾ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಅಭಿಪ್ರಾಯಪಟ್ಟರು.


ನಗರದಲ್ಲಿ ಸಮನ್ವಯ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿನಿಮಾ ವಿಷಯ ಕುರಿತು ಮಾತನಾಡಿ, ಸಿನಿಮಾ ಎನ್ನುವುದು ಒಂದು ಸಂಸ್ಕೃತಿ ಆಗಿದ್ದು, ದಶಕಗಳ ಹಿಂದೆ ಸಾಮಾಜಿಕ ಕಳಕಳಿಯುಳ್ಳ ಸಿನಿಮಾಗಳು ಬರುತ್ತಿದ್ದವು.

ಅನೇಕ ಸಿನಿಮಾಗಳನ್ನು ವೀಕ್ಷಿಸಿದ ಜನರು ಜೀವನದಲ್ಲಿ ಧನಾತ್ಮಕ ಬದಲಾವಣೆಗಳನ್ನು ಮಾಡಿಕೊಳ್ಳುತ್ತಿದ್ದರು ಎಂದು ತಿಳಿಸಿದರು.


ಇತ್ತೀಚಿನ ದಿನಗಳಲ್ಲಿ ಸಿನಿಮಾ ವೀಕ್ಷಿಸುವವರ ಸಂಖ್ಯೆ ಕಡಿಮೆ ಆಗುತ್ತಿದ್ದು, ಒಳ್ಳೆಯ ವಿಚಾರಗಳನ್ನು ಪ್ರಸ್ತುತಪಡಿಸುವ ಸಿನಿಮಾಗಳ ಸಂಖ್ಯೆ ಕಡಿಮೆ ಆಗುತ್ತಿದೆ. ಪ್ರೇಕ್ಷಕರಿಗೆ ಇಷ್ಟವಾಗಬಲ್ಲ,

ಅವರ ಆಸಕ್ತಿ ಹೆಚ್ಚಿಸುವ ಒಳ್ಳೆಯ ವಿಷಯಗಳನ್ನು ಸಿನಿಮಾ ಮಾಡಲು ಮುಂದಾಗುವುದು ಅವಶ್ಯ. ಮುಂದಿನ ಪೀಳಿಗೆಗೆ ಒಳ್ಳೆಯ ಚಿತ್ರಗಳನ್ನು ನಿರ್ಮಿಸಬೇಕು ಎಂದರು.


ಕ್ರೀಯಾಶೀಲ ಆಲೋಚನೆಗಳೊಂದಿಗೆ ಮಾಡುವ ಸಿನಿಮಾಗಳು ಯುವಜನರಿಗೆ ಹೊಸ ಚಿಂತನೆ ಬೆಳೆಸಲು ಸಾಧ್ಯವಾಗುತ್ತದೆ. ಸಿನಿಮಾ ಟಾಕೀಸ್‌ಗಳಿಗೆ ಜನರು ಬರುವಂತೆ ಮಾಡಬೇಕು. ಧನಾತ್ಮಕ ಅಂಶಗಳನ್ನು ಒಳಗೊಂಡಿರುವ ಚಿತ್ರಗಳನ್ನು ವೀಕ್ಷಿಸಬೇಕು ಎಂದು ತಿಳಿಸಿದರು.


ಸಮನ್ವಯ ಟ್ರಸ್ಟ್ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳೊಂದಿಗೆ ಸಿನಿಮಾ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಅವರು ಸಿನಿಮಾ

ನಿರ್ದೇಶನ ಮತ್ತು ವಿವಿಧ ಸಂಗತಿಗಳ ಬಗ್ಗೆ ಚರ್ಚಿಸಿದರು. ಹಳೇಯ ಸಿನಿಮಾಗಳಲ್ಲಿ ಬರುತ್ತಿರುವ ಪ್ರಮುಖ ಅಂಶಗಳ ಬಗ್ಗೆ ಮಾಹಿತಿ ನೀಡಿದರು.
ಸಮನ್ವಯ ಟ್ರಸ್ಟ್ ಅಧ್ಯಕ್ಷೆ ಗಿರಿಜಾದೇವಿ,

ಕಾರ್ಯನಿರ್ವಾಹಕ ನಿರ್ದೇಶಕ ಸಮನ್ವಯ ಕಾಶಿ, ಕೌಶಲ್ಯ ಅಭಿವೃದ್ಧಿ ಅಧಿಕಾರಿ ಸುರೇಶ್, ಟೀಕ್ಯಾನಾಯ್ಕ್, ವಿಜಯಕುಮಾರ್, ಸ್ಮಿತಾ, ಸಮನ್ವಯ ಟ್ರಸ್ಟ್ ಪದಾಧಿಕಾರಿಗಳು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದರು.

Exit mobile version