ಶಿವಮೊಗ್ಗ, ಅಕ್ಟೋಬರ್ 07: ಡಾ|| ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಚರ್ಮಕೈಗಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ವಿವಿಧ ಯೋಜನೆಗಳಾದ ತರಬೇತಿ, ಸ್ವಯಂ
ಉದ್ಯೋಗ, ಸ್ವಾವಲಂಭಿ ಮಾರಾಟ ಮಳಿಗೆ, ಸಂಚಾರಿ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಪಾದುಕೆ ಕುಟೀರ ಯೋಜನೆ, ವಸತಿ ಹಾಗೂ ಇನ್ನಿತರೆ ಯೋಜನೆಗಾಗಿ ಆಸಕ್ತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತರು https://sevasindhu.karnataka.gov.in ಪೋರ್ಟಲ್ ಮೂಲಕ ಅ. 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಲಿಡ್‌ಕರ್ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು, ಲಿಡ್‌ಕರ್, ನೆಹರು ರಸ್ತೆ, ಶಿವಮೊಗ್ಗ ಇವರನ್ನು ಸಂಪರ್ಕಿಸುವುದು.
———————-ಇ-ಆಸ್ತಿ ವ್ಯವಸ್ಥೆ ಜಾರಿ : ಸ್ವತ್ತಿನ ನಮೂನೆ 2/3 ಇ-ಆಸ್ತಿ ತಂತ್ರಾಂಶದಲ್ಲಿ ಮಾತ್ರ ಲಭ್ಯ
ಶಿವಮೊಗ್ಗ, ಅಕ್ಟೋಬರ್ 07 ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶವನ್ನು ಸಂಯೋಜಿಸಲಾಗಿದ್ದು ಅಕ್ಟೋಬರ್ 07 ರಿಂದ ಅನ್ವಯವಾಗುವಂತೆ ಅನುಷ್ಟಾನಗೊಳಿಸಲಾಗಿದೆ.
ಸರ್ಕಾರದ ಸುತ್ತೋಲೆಯ ಸೂಚನೆ ಮೇರೆಗೆ ಶಿವಮೊಗ್ಗ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಗೆ ಇ-ಆಸ್ತಿ ತಂತ್ರಾಂಶದಲ್ಲಿ ಮಾತ್ರ ಸ್ವತ್ತಿನ ನಮೂನೆ 2/3ನ್ನು ನೀಡಲು ಹಾಗೂ ಹಕ್ಕು ವರ್ಗಾವಣೆಗೆ ಕ್ರಮವಹಿಸಲು ಮತ್ತು ಇ-ಆಸ್ತಿ ತಂತ್ರಾಂಶವನ್ನು
ಹೊರತುಪಡಿಸಿ ಭೌತಿಕವಾಗಿ ಹಾಗೂ ಖಾಸಗಿ ತಂತ್ರಾಂಶವನ್ನು ಬಳಕೆ ಮಾಡಿ ನಮೂನೆ 2/3ನ್ನು ನೀಡಬಾರದಾಗಿ ಆದೇಶವಾಗಿರುತ್ತದೆ.
ಈ ಹಿನ್ನೆಲೆಯಲ್ಲಿ ಅ.07 ರಿಂದ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸ್ವತ್ತಿ ನಮೂನೆ 2/3ನ್ನು ಇ-ಆಸ್ತಿ ತಂತ್ರಾಂಶದಲ್ಲಿ ವಿತರಿಸಲಾಗುವುದು, ಸಾರ್ವಜನಿಕರು ಸಹಕರಿಸುವಂತೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.