ಸಾಗರ : ತಾಲ್ಲೂಕಿನ ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವೀಕ್ಷಣೆ ಮಾಡಿದರು. ಜೋಗ ಜಲಪಾತದ ಸುತ್ತಮುತ್ತಲಿನ ಪ್ರದೇಶದಲ್ಲಿ ನಡೆಯುತ್ತಿರುವ
ವಿವಿಧ ಕಾಮಗಾರಿ ವೀಕ್ಷಣೆ ಮಾಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಜೋಗ ಜಲಪಾತವನ್ನು ವಿಶ್ವದರ್ಜೆಯ ಪ್ರವಾಸಿತಾಣವಾಗಿಸುವ
ನಿಟ್ಟಿನಲ್ಲಿ ಪೂಜ್ಯ ತಂದೆಯವರು ೮೫ ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದರು. ಜೋಗ ಜಲಪಾತ ಜಿಲ್ಲೆಯ ಪ್ರವಾಸೋದ್ಯಮದ ಪ್ರಮುಖ
ಆಕರ್ಷಣೆಯಾಗಿದ್ದು, ಆರ್ಥಿಕ ಪ್ರಗತಿಗೆ ಹೆಚ್ಚಿನ ಬಲ ಸಿಗುತ್ತದೆ ಎನ್ನುವುದು ನಮ್ಮ ತಂದೆಯವರ ಬಯಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕಾಮಗಾರಿ ತ್ವರಿತವಾಗಿ ನಡೆಯುತ್ತಿದೆ ಎಂದು ತಿಳಿಸಿದರು.
ಇದಕ್ಕೂ ಮೊದಲು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ತುಮರಿ ಸೇತುವೆ ಕಾಮಗಾರಿ ವೀಕ್ಷಣೆ
ಮಾಡಿ ಸಿಗಂದೂರು ಚೌಡೇಶ್ವರಿ ದೇವಿಯ ದರ್ಶನ ಪಡೆದರು. ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಮುಖರಾದ ಬಸವರಾಜ್, ನವೀನ್ ಜೈನ್ ಇನ್ನಿತರರು ಹಾಜರಿದ್ದರು