ಬೆಂಗಳೂರು: ಹೆಚ್ಚುತ್ತಿರುವ ಕೊರೊನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಳೆಯಿಂದ ನೈಟ್ ಕರ್ಫ್ಯೂ ಮತ್ತು ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಕೆಲಸಕ್ಕೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಅದರಂತೆ ನಾಳೆಯಿಂದ ರಾತ್ರಿ 8 ರಿಂದ ಬೆಳಗ್ಗೆ 5 ಗಂಟೆಯವರೆಗೂ ನೈಟ್ ಕರ್ಫ್ಯೂ ಇರಲಿದೆ.
ಜುಲೈ 5ರಿಂದ ಪ್ರತಿ ಭಾನುವಾರ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ.
ಜುಲೈ 5ರಿಂದ ಭಾನುವಾರ ಲಾಕ್ ಡೌನ್ ವೇಳೆ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಬಸ್ಸು, ಟ್ಯಾಕ್ಸಿ ಸೇರಿದಂತೆ ಎಲ್ಲಾ ಸೇವೆಗಳು ಬಂದ್ ಆಗಲಿವೆ.
ಇನ್ನು ಸರ್ಕಾರಿ ನೌಕರರು ಕೊರೋನಾಗೆ ತುತ್ತಾಗುತ್ತಿರುವುದರಿಂದ ಮುಂದಿನ ವಾರದಿಂದ 5 ದಿನ ಮಾತ್ರ ಸರ್ಕಾರಿ ಕಚೇರಿಗಳು ಕೆಲಸ ನಿರ್ವಹಿಸಲಿವೆ.