Site icon TUNGATARANGA

ಅ.  26 ರಂದು ಜಿಲ್ಲಾ ಪೊಲೀಸ್‌ ಇಲಾಖೆ ವತಿಯಿಂದ ಪೊಲೀಸ್‌ ಭವನ  ಉದ್ಘಾಟನೆ

ಶಿವಮೊಗ್ಗ: ಜಿಲ್ಲಾ ಪೊಲೀಸ್‌ ಇಲಾಖೆ ವತಿಯಿಂದ ಇಲ್ಲಿನ ಸಾಗರ ರಸ್ತೆಯ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ ಅ.  26 ರಂದು ಬೆಳಿಗ್ಗೆ 11 ಗಂಟೆಗೆ ನೂತನವಾಗಿ ನಿರ್ಮಾಣಗೊಂಡ ಪೊಲೀಸ್‌ ಭವನ  ಉದ್ಘಾಟನಾ ಸಮಾರಂಭ ನಡೆಯಲಿದೆ.

ಗೃಹ ಸಚಿವ ಜಿ.ಪರಮೇಶ್ವರ ಭವನ ಉದ್ಘಾಟಿಸುವರು. ಶಿಕ್ಷಣ ಸಚಿವ ಎಸ್.ಮಧುಬಂಗಾರಪ್ಪ ಘನ ಉಪಸ್ಥಿತಿ ಇರುವರು. ಶಾಸಕರಾದ ಬಿ.ಕೆ.ಸಂಗಮೇಶ್ವರ, ಗೋಪಾಲಕೃಷ್ಣ ಬೇಳೂರು ಅವರು ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು. ಶಾಸಕ ಎಸ್. ಎನ್.‌ ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಬಿ.ವೈ.ವಿಜಯೇಂದ್ರ, ಶಾರದಾ ಪೂರ್ಯನಾಯ್ಕ್‌, ಭೋಜೇಗೌಡ, ಭಾರತಿ ಶೆಟ್ಟಿ, ಡಿ.ಎಸ್. ಅರುಣ್‌, ಬಲ್ಕೀಶ್‌ ಬಾನು, ಧನಂಜಯ ಸರ್ಜಿ ಸೇರಿ ಗಣ್ಯರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಬೆಂಗಳೂರಿನ ಪೊಲೀಸ್‌ ಮಹಾ ನಿರ್ದೇಶಕರು ಮತ್ತು ಮಹಾ ನಿರೀಕ್ಷಕರಾದ ಅಲೋಕ್‌ ಮೋಹನ್‌, ದಾವಣಗರೆ ಉಪ ಪೊಲೀಸ್‌ ಮಹಾ ನಿರೀಕ್ಷಕರಾದ ಬಿ.ರಮೇಶ್‌, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯಿತಿ ಸಿಇಒ ಎನ್.ಹೇಮಂತ್‌ ಕುಮಾರ್‌, ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಕವಿತಾ ಯೋಗಪ್ಪನವರ್‌ ವಿಶೇಷ  ಆಹ್ವಾನಿತರಾಗಿ ಪಾಲ್ಗೊಳ್ಳುವರು.

Exit mobile version