Site icon TUNGATARANGA

ಪಟಾಕಿ ಮಳಿಗೆಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಸೂಚನೆ |ಸೈನಿಕರು ಮತ್ತು ಮಾಜಿ ಸೈನಿಕರುಗಳಿಗೆ ಸರ್ಕಾರಿ ಉದ್ಯೋಗ ನೇಮಕಾತಿಗಾಗಿ ಆನ್‌ಲೈನ್ ತರಬೇತಿ|ನ 1 ರಂದು ಕನ್ನಡ ರಾಜ್ಯೋತ್ಸವ|ವಿವಿಧ ಯೋಜನೆಗಳಿಗಾಗಿ ಆನ್‌ಲೈನ್ ಅರ್ಜಿ ಆಹ್ವಾನ

ಸೈನಿಕರು ಮತ್ತು ಮಾಜಿ ಸೈನಿಕರುಗಳಿಗೆ ಸರ್ಕಾರಿ ಉದ್ಯೋಗ ನೇಮಕಾತಿಗಾಗಿ ಆನ್‌ಲೈನ್ ತರಬೇತಿ

ಶಿವಮೊಗ್ಗ. ಅಕ್ಟೋಬರ್ ೩೦  ;AWPO (Army Welfare Placement Organisation) ªÀÄvÀÄÛ The Maven Cohort ಎಂಬ ಸಂಸ್ಥೆಯ ಸಹಯೋಗದೊಂದಿಗೆ ಭಾರತೀಯ ಸೇನೆಯ ಜೆ.ಸಿ.ಓ (ಎಅಔ) ರ‍್ಯಾಂಕ್‌ವರೆಗಿನ ಕೊನೆಯ ವರ್ಷದ ನಿವೃತ್ತಿಯಂಚಿನಲ್ಲಿರುವ ಸೈನಿಕರು ಹಾಗೂ ನಿವೃತ್ತ ಮಾಜಿ ಸೈನಿಕರುಗಳ ಕೇಂದ್ರ ಸರ್ಕಾರಿ ಉದ್ಯೋಗ ಮತ್ತು ಬ್ಯಾಂಕ್ ಉದ್ಯೋಗ ನೇಮಕಾತಿಗಾಗಿ ಪಾವತಿಯ ಮೇರೆಗೆ ಪೂರ್ವ ತಯಾರಿ ಆನ್‌ಲೈನ್ ತರಬೇತಿಗಳನ್ನು ನ.೦೬ ರಿಂದ ಆಯೋಜಿಸುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಜಾಲತಾಣ ದಲ್ಲಿ ನೋಂದಾಯಿಸಿಕೊಳ್ಳುವುದರ ಮೂಲಕ ಈ ಸುವರ್ಣವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿAWPO (Army Welfare Placement Organisation)ನ ಜಾಲತಾಣ ವನ್ನು ಸಂಪರ್ಕಿಸಬಹುದಾಗಿದೆ.

ಪಟಾಕಿ ಮಳಿಗೆಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಸೂಚನೆ
ಶಿವಮೊಗ್ಗ. ಅಕ್ಟೋಬರ್ ೩೦ (ಕರ್ನಾಟಕ ವಾರ್ತೆ): ಜಿಲ್ಲೆ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಥಾಪಿಸಲಾಗುತ್ತಿರುವ ಪಟಾಕಿ ಮಾರಾಟ ಮಳಿಗೆಗಳಲ್ಲಿ ೧೮ ವ?ದೊಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳದಂತೆ ಕಾರ್ಮಿಕ ಇಲಾಖೆ ಸೂಚನೆ ನೀಡಿದೆ.

ಈ ಕಾಯ್ದೆಯನ್ವಯ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ(ನಿ?ಧ ಮತ್ತು ನಿಯಂತ್ರಣ) ಕಾಯ್ದೆ ೧೯೮೬ ಹಾಗೂ ತಿದ್ದುಪಡಿ ಕಾಯ್ದೆ ೨೦೧೬ರನ್ವಯ ೧೪ ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಹಾಗೂ ೧೮ ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಯಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಸಂಪೂರ್ಣವಾಗಿ ನಿ?ಧಿಸಲ್ಪಟ್ಟಿರುತ್ತದೆ. ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ (ನಿ?ಧ ಮತ್ತು ನಿಯಂತ್ರಣ) ಕಾಯ್ದೆಯನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ರಾಜ್ಯೋತ್ಸವ
ಶಿವಮೊಗ್ಗ ಅಕ್ಟೋಬರ್ ೩೦ ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನವೆಂಬರ್ ೧ ರಂದು ಬೆಳಿಗ್ಗೆ ೯.೦೦ ಗಂಟೆಗೆ ನಗರದ ಡಿ.ಎ.ಆರ್. ಪೊಲೀಸ್ ಪೆರೇಡ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಧ್ವಜಾರೋಹಣವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ಇವರು ನೆರವೇರಿಸುವರು. ವಿಶೇಷ ಆಹ್ವಾನಿತರಾಗಿ ಭದ್ರಾವತಿ ಕ್ಷೇತ್ರ ಶಾಸಕರು ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಕೆ. ಸಂಗಮೇಶ್ವರ ಹಾಗೂ ಸಾಗರ ಕ್ಷೇತ್ರದ ಶಾಸಕರು ಹಾಗೂ ಕನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಇವರುಗಳು ಉಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿ?ತ್ ಶಾಸಕರು, ವಿವಿಧ ನಿಗಮ/ ಮಂಡಳಿ/ ಪ್ರಾಧಿಕಾರಗಳ ಅಧ್ಯಕ್ಷರು, ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿ?ಧಿಕಾರಿಗಳು, ಜಿ.ಪಂ ಸಿಇಓ, ಪಾಲಿಕೆ ಆಯುಕ್ತರು, ವಿವಿಧ ಇಲಾಖೆಗಳ ಅಧಿಕಾರಿಗಳು, ಪಾಲ್ಗೊಳ್ಳುವರು.
ಅಂದು ಬೆಳಿಗ್ಗೆ ೮ ಗಂಟೆಗೆ ನಗರದ ಸೈನ್ಸ್ ಕಾಲೇಜು ಮೈದಾನದಿಂದ ಡಿ.ಎ.ಆರ್ ಪೊಲೀಸ್ ಪೆರೇಡ್ ಮೈದಾನದವರೆಗೆ ಶ್ರೀ ಭುವನೇಶ್ವರಿ ದೇವಿ ಮೆರವಣಿಗೆ ಬರಲಿದೆ. ಸಂಜೆ ೫ ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಶಿವಮೊಗ್ಗ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಸರ್ಕಾರಿ ಅಧಿಕಾರಿಗಳು/ನೌಕರರ, ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ಮತ್ತು ಕನ್ನಡ ಸಂಘಟನೆಗಳು ಹಾಗೂ ಸಾರ್ವಜನಿಕರು ಕನ್ನಡ ರಾಜ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸುವಂತೆ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ವತಿಯಿಂದ ವಿನಂತಿಸಲಾಗಿದೆ.

ವಿವಿಧ ಯೋಜನೆಗಳಿಗಾಗಿ ಆನ್‌ಲೈನ್ ಅರ್ಜಿ ಆಹ್ವಾನ
ಶಿವಮೊಗ್ಗ ಅಕ್ಟೋಬರ್ ೩೦ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ೨೦೨೪-೨೫ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ ಮತ್ತು ಗಂಗಾ ಕಲ್ಯಾಣ ಯೋಜನೆಗಳಡಿ ಸೌಲಭ್ಯ ಪಡೆಯಲು ಪರಿಶಿಷ್ಟ ಪಂಗಡಗಳ ಅರ್ಹ ಫಲಾಪೇಕ್ಷಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸೇವಾಸಿಂಧು https://sevasindhu.karnataka.gov.in ಮುಖಾಂತರ ನ.೨೩ ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂ.ಸಂ.: ೦೮೧೮೨-೨೭೬೭೭೬ ನ್ನು ಸಂಪರ್ಕಿಸುವುದು.

Exit mobile version