Site icon TUNGATARANGA

ನ.14 ರಂದು 14 ವರ್ಷ ವಯೋಮಿತಿಯೊಳಗಿನ ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ

ಶಿವಮೊಗ್ಗ : ನವೆಂಬರ್ ೧೨ : ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಂಗಳೂರು, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರುಗಳ ಸಂಯುಕ್ತಾಶ್ರಯದಲ್ಲಿ ನವೆಂಬರ್ ೧೪ರಿಂದ ೧೬ರವರೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ೧೪ವರ್ಷ ವಯೋಮಿತಿಯೊಳಗಿನ ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್ ಅವರು ಹೇಳಿದರು.


ಅವರು ಇಂದು ಡಂiiಟ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಈ ಕಾರ್ಯಕ್ರಮವನ್ನು ನವೆಂಬರ್ ೧೪ರಂದು ಸಂಜೆ ೫ಗಂಟೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಉದ್ಘಾಟಿಸುವರು.
ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಭದ್ರಾವತಿ ಕ್ಷೇತ್ರದ ಶಾಸಕ ಬಿ.ಕೆ.ಸಂಗಮೇಶ್ವರ, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಉಪಸ್ಥಿತರಿರುವರು. ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸುವರು.


ಮುಖ್ಯ ಅತಿಥಿಗಳಾಗಿ ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಎಲ್ಲಾ ವಿಧಾನ ಪರಿಷತ್ ಮತ್ತು ವಿಧಾನಸಭಾ ಸದಸ್ಯರು, ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಆಗಮಿಸಲಿರುವರು.


ಪತ್ರಿಕಾಗೋಷ್ಠಿಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಪ್ಪ ಎಸ್.ಗುಂಡಪಲ್ಲಿ, ಡಯಟ್ ಉಪನಿರ್ದೇಶಕಿ ಶ್ರೀಮತಿ ಬಿಂಬಾ ಕೆ.ಆರ್., ಆರ್ಯ ಪಿ.ಯು.ಕಾಲೇಜಿನ ನಿರ್ದೇಶಕ ರಮೇಶ್, ಕ್ಷೇತ್ರಶಿಕ್ಷಣಾಧಿಕಾರಿ ರಮೇಶ್, ಡಯಟ್ ಹಿರಿಯ ಉಪನ್ಯಾಸಕ ಹರಿಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

Exit mobile version