Site icon TUNGATARANGA

ವೈದ್ಯಾಧಿಕಾರಿಗಳ ತಾತ್ಕಾಲಿಕ ಹುದ್ದೆಗಳಿಗಾಗಿ ನೇರ ಸಂದರ್ಶನಕ್ಕೆ ಕರೆ |ಭತ್ತಕ್ಕೆ ಬೆಂಬಲ ಬೆಲೆ; ರೈತರ ನೊಂದಣಿ ಪ್ರಕ್ರಿಯೆ ಆರಂಭ

ವೈದ್ಯಾಧಿಕಾರಿಗಳ ತಾತ್ಕಾಲಿಕ ಹುದ್ದೆಗಳಿಗಾಗಿ ನೇರ ಸಂದರ್ಶನಕ್ಕೆ ಕರೆ ಶಿವಮೊಗ್ಗ, ನವೆಂಬರ್ 15 ):

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅಧೀನದ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ವಿಸ್ತರಣಾ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 7 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ

ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರರಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ..


 ಆಸಕ್ತ ಅಭ್ಯರ್ಥಿಗಳು ದಿನಾಂಕ : 21.11.2024 ರಂದು ಬೆಳಗ್ಗೆ 11.00 ರಿಂದ ಮಾಧ್ಯಾಹ್ನ 1.00 ರ ವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣ, ಬಿಹೆಚ್‌ರಸ್ತೆ, ಶಿವಮೊಗ್ಗ ಇಲ್ಲಿ ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ

ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳು ಹಾಗೂ ನಕಲು ಪ್ರತಿಗಳು ಮತ್ತು ಇತ್ತೀಚಿನ 2 ಭಾವಚಿತ್ರಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗೆ ದೂ.ಸಂ: 08182-222382 ನ್ನು ಸಂಪರ್ಕಿಸುವುದು.


——–
ಭತ್ತಕ್ಕೆ ಬೆಂಬಲ ಬೆಲೆ; ರೈತರ ನೊಂದಣಿ ಪ್ರಕ್ರಿಯೆ ಆರಂಭ
ಶಿವಮೊಗ್ಗ, ನವೆಂಬರ್ 15 ): 2024-25 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲ ಯೋಜನೆಯಡಿಯಲ್ಲಿ ರಾಜ್ಯದ ರೈತರಿಂದ ಕೇಂದ್ರ ಸರ್ಕಾರ 2.24 ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿದಲು ಆದೇಶಿಸಿದ್ದು, ಸಾಮಾನ್ಯ ಭತ್ತ ರೂ.2300/- ಎ  ಗ್ರೇಡ್  ಭತ್ತ ರೂ.2320/- ದರವನ್ನು ನಿಗಧಿ ಮಾಡಿದೆ. ರೈತರು ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಪ್ರೂಟ್ಸ್ ಐಡಿಯೊಂದಿಗೆ ಖರೀದಿ ಕೇಂದ್ರಗಳಲ್ಲಿ ನ.15 ರಿಂದ ಭತ್ತ ಮಾರಾಟ ಮಾಡಲು ನೊಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.


ಶಿವಮೊಗ್ಗ ಜಿಲ್ಲಾ ರೈತರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸಲು ರಾಜ್ಯ ಸಹಕಾರ ಮಾರಾಟ ಮಹಾಮಂಡಳ(ನಿ) ವನ್ನು ಸಂಗ್ರಹಣಾ ಏಜೆಸ್ಸಿಗಳಾಗಿ ನೇಮಿಸಲಾಗಿದೆ.


ಪ್ರತಿ ಎಕರೆಗೆ 25 ಕ್ವಿಂಟಾಲ್‌ನAತೆ ಗರಿಷ್ಠ 40 ಕ್ವಿಂಟಾಲ್ ಭತ್ತವನ್ನು ಖರೀದಿಸಲಾಗುವುದು. ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳ ಎ.ಪಿ.ಎಂ.ಸಿ ಆವರಣದಲ್ಲಿರುವ ಖರೀದಿ ಕೇಂದ್ರಗಳನ್ನು ತೆರೆದು ಭತ್ತ ಖರೀದಿಸಲಾಗುತ್ತಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ

ಮಾಡಿಕೊಂಡ ಸಂದರ್ಭದಲ್ಲಿ ಅಗತ್ಯವಿದ್ದ ತಾಲೂಕುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗುವುದು. ಭತ್ತವನ್ನು ದಿ: 01-01-2025 ರಿಂದ ದಿ:31-03-2025ರ ಅವಧಿಯಲ್ಲಿ ಖರೀದಿಸಲಾಗುತ್ತದೆ. ರೈತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version