Site icon TUNGATARANGA

ಕೆಪಿಟಿಸಿಎಲ್ ನೇಮಕಾತಿಯನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನಡೆಸಿ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ಮನವಿ

ಶಿವಮೊಗ್ಗ: ಕೆಪಿಟಿಸಿಎಲ್ ನೇಮಕಾತಿಯನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನಡೆಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಕಿರಿಯ ಸ್ಟೇಷನ್ ಪರಿಚಾರಕ ಹಾಗೂ ಪವರ್ ಮ್ಯಾನ್ ನೇಮಕಾತಿಗೆ ಸಂಬAಧಿಸಿದAತೆ 2975 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಮತ್ತು ದೈಹಿಕ ಪರೀಕ್ಷೆಯ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು

ಅಧಿಸೂಚನೆ ಹೊರಡಿಸಲಾಗಿದೆ. ಇದಕ್ಕಾಗಿ ಅ. 21ರಿಂದ ನ. 20ರವರೆಗೆ ದಿನಾಂಕ ನಿಗದಿಪಡಿಸಲಾಗಿದೆ ಎಂದು ಮನವಿದಾರರು ತಿಳಿಸಿದರು.

ಆದರೆ, ಎಸ್‌ಎಸ್‌ಎಲ್‌ಸಿ ಅಂಕಗಳ ಆಧಾರದ ಮೇಲೆ ನೇಮಕಾತಿ ಪ್ರಕ್ರಿಯೆಯನ್ನು ರದ್ದುಪಡಿಸಿದ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ನಡೆಸಿಕೊಡುವುದರಿಂದ ಹೆಚ್ಚು ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಮತ್ತು ಹುದ್ದೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ನ್ಯಾಯ ಕೂಡ

ಸಿಗುತ್ತದೆ. ಇತರೆ ರಾಜ್ಯಗಳಲ್ಲಿ ಈ ರೀತಿಯ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕವೇ ನೇಮಕ ಮಾಡಿಕೊಳ್ಳಲಾಗುತ್ತಿದೆ. ಆದ್ದರಿಂದ ನಮ್ಮ ರಾಜ್ಯದಲ್ಲಿಯೂ ಕೂಡ ಇದೇ ನಿಯಮ ಅಳವಡಿಸಿಕೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ವಿದ್ಯಾರ್ಥಿ ಒಕ್ಕೂಟದ ಪ್ರಮುಖರಾದ ಮಣಿಕಂಠ ನಾಯ್ಕ್, ಗೋಪಾಲ್, ಶ್ರೀನಾಥ್ ಸೇರಿದಂತೆ ಹಲವರಿದ್ದರು.

Exit mobile version