Site icon TUNGATARANGA

ಸಚಿವ ಜಮೀರ್‌ಖಾನ್‌ರನ್ನು ಸಚಿವ ಸಂಪುಟದಿಂದ ವಜಾ ಮಾಡಿ ಕ್ರಿಮಿನಲ್ ಕೇಸ್ ದಾಖಲಿಸಿ ಜಿಲ್ಲಾ ಜೆಡಿಎಸ್ ಪ್ರತಿಭಟನೆ

ಶಿವಮೊಗ್ಗ,ನ.16:ಸಚಿವ ಜಮೀರ್ ಅಹಮ್ಮದ್ ಖಾನ್‍ಅವರನ್ನು ಸಚಿವ ಸಂಪುಟದಿಂದ ವಜಾಮಾಡಿ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡುವಂತೆ ಆಗ್ರಹಿಸಿ ಜಿಲ್ಲಾ ಜೆಡಿಎಸ್ ಘಟಕದ ವತಿಯಿಂದ ಇಂದು ಜೆಡಿಎಸ್ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆದು ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಚನ್ನಪಟ್ಟಣ ವಿಧಾನಸಭ ಉಪಚುನಾವಣೆ ಸಂದರ್ಭದಲ್ಲಿ ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಅಸಭ್ಯ ಪದ ಬಳಸಿ ಮತ್ತು ವರ್ಣಬೇದ ನೀತಿ ಅನುಸರಿಸಿರುವ ಸಚಿವ ಜಮೀರ್ ಅಹಮ್ಮದ್

ಖಾನ್‍ರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು ಹಾಗೂ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಮೂಲಕ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಕರಿಯ ಎಂದು ಕರೆದಿರುವುದು ಅಕ್ಷಮ್ಯ ಅಪರಾಧ. ಈ ಘಟನೆಯಿಂದ ಇಡೀ ರಾಜ್ಯದ ಜನತೆ ತಲೆತಗ್ಗಿಸುವಂತಹ ವಾತಾವರಣ ಸೃಷ್ಠಿಯಾಗಿದೆ. ಈ ಅನಾಗರಿಕ, ಕೀಳು ಅಭಿರುಚಿಯ ಜಮೀರ್ ಅಹಮ್ಮದ್ ಖಾನ್ ಸಚಿವ ಸಂಪುಟದಲ್ಲಿ ಮುಂದುವರೆಯಲು ಶೋಭೆ ತರುವಂತಹದ್ದಲ್ಲ. ಆದ್ದರಿಂದ ರಾಜ್ಯಪಾಲರು ಅವರನ್ನು ತಕ್ಷಣವೇ ವಜಾಮಾಡಬೇಕು ಹಾಗೂ ಸದರಿಯವರ

ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಪ್ರತಿಭಟನೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಡಾ.ಕಡಿದಾಳ್ ಗೋಪಾಲ್, ಶಾಸಕಿ ಶಾರದಪೂರ್ಯನಾಯ್ಕ್, ರಾಜ್ಯ ಕಾರ್ಯದರ್ಶಿ ಶಾರದಮ್ಮ ಎಂ.ಜೆ.ಅಪ್ಪಾಜಿ, :ಮಾಜಿ ಪಾಲಿಕೆ ಸದಸ್ಯ ರಘುಬಾಲರಾಜ್ ಪ್ರಮುಖರಾದ ಕೆ.ಎನ್.ರಾಮಕೃಷ್ಣ, ನರಸಿಂಹ ಗಂಧದಮನೆ, ಹೆಚ್.ಎಂ.ಸಂಗಯ್ಯ, ಸಂಜಯ್ ಕಶ್ಯಪ್, ಎಸ್.ವಿ.ರಾಜಮ್ಮ, ದಯಾನಂದ್, ಎಸ್.ಎಲ್.ನಿಖಿಲ್, ಸಿದ್ದಪ್ಪ, ತ್ಯಾಗರಾಜ್, ಚಂದ್ರಶೇಖರ್, ಗೀತಾಸತೀಶ್, ಹೆಚ್.ಎನ್.ಧರ್ಮರಾಜ್, ಕೆ.ಎಂ.ನಾಗೇಶ್, ಡಿ.ಚಂದ್ರನಾಯ್ಕ್, ವಿನಯ್, ಇನ್ನಿತರರು ಭಾಗವಹಿಸಿದ್ದರು.

Exit mobile version