Site icon TUNGATARANGA

ಅರ್ಹ ಬಿಪಿಎಲ್ ಪಡಿತರ ಚೀಟಿದಾರರು ಆತಂಕ ಪಡುವ ಅಗತ್ಯವಿಲ್ಲ- ಸಿ.ಎಸ್.ಚಂದ್ರಭೂಪಾಲ |ನ.26 ರಿಂದ ಭದ್ರ ನಾಲೆಗಳಿಗೆ ಮುಂಗಾರು ಹಂಗಾಮಿನ ನೀರು ಸ್ಥಗಿತ|ನ.23 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ ನವೆಂಬರ್ ನವೆಂಬರ್21;; ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಅನು?ನಗೊಂಡಿರುವ “ಅನ್ನಭಾಗ್ಯ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಈ ಯೋಜನೆ ಫಲ ದಕ್ಕುವುದು ರಾಜ್ಯ ಸರ್ಕಾರದ ಮುಖ್ಯ ಧೈಯವಾಗಿರುತ್ತದೆ. ಈ ನಿಟ್ಟಿನಲ್ಲಿ ಬಿಪಿಎಲ್ ಪಡಿತರ ಚೀಟಿದಾರರ ಮೌಲ್ಯಮಾಪನದ ಪರಿ?ರಣೆ ಪ್ರಕ್ರಿಯೆ ಸರ್ಕಾರದ ಸೂಚನೆಯಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆರಂಭಿಸಿದೆ. ಆದರೆ ಅರ್ಹರ ಬಿಪಿಎಲ್ ಕಾರ್ಡ್‌ಗಳು ರದ್ದಾಗುವುದಿಲ್ಲ. ಅರ್ಹ ಬಿಪಿಎಲ್ ಕಾರ್ಡ್‌ದಾರರಿಗೆ ಅನ್ನಭಾಗ್ಯ ಯೋಜನೆಯ ಫಲ ತಪ್ಪುವುದಿಲ್ಲ. ಆದ್ದರಿಂದ ಅರ್ಹ ಬಿಪಿಎಲ್ ಪಡಿತರ ಚೀಟಿದಾರರು ಆತಂಕ ಪಡುವ ಅಗತ್ಯವಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನು?ನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಶ್ರೀ ಸಿ.ಎಸ್. ಚಂದ್ರಭೂಪಾಲ ರವರು ತಿಳಿಸಿದ್ದಾರೆ.


ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ವಾಪಾಸ್ ಪಡೆಯುವುದು ಸರ್ಕಾರದ ಆಲೋಚನೆಯಾಗಿದ್ದು, ಆರ್ಹರ ಬಿಪಿಎಲ್ ಕಾರ್ಡ್ ಯಾವುದೇ ಕಾರಣಕ್ಕೂ ರದ್ದು ಮಾಡಬಾರದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ ನೀಡಿದೆ. ಪರಿ?ರಣೆಯ ವೇಳೆ ಕೈತಪ್ಪಿನಿಂದ ಬಡವರಿಗೆ ಅನ್ಯಾಯವಾದರೆ ಅಂಥವರಿಗೆ ಬಿಪಿಎಲ್ ಕಾರ್ಡ್ ಪಡೆಯಲು ಮತ್ತೊಮ್ಮೆ ಅವಕಾಶವನ್ನು ನೀಡಲಾಗುತ್ತದೆ. ಅರ್ಹವಲ್ಲದವರು ಅಕ್ರಮವಾಗಿ ಬಿಪಿಎಲ್ ಪಡೆದಿದ್ದರೆ ಅಂಥವರನ್ನು ಪತ್ತೆ ಹಚ್ಚುವ ಕೆಲಸವನ್ನು ಪರಿ?ರಣೆ ವೇಳೆ ನಡೆಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.


ಸರ್ಕಾರದ ಮಾರ್ಗಸೂಚಿ ಅನುಸರಿಸದೇ ಅನರ್ಹರು ಬಿಪಿಎಲ್ ಪಡಿತರ ಚೀಟಿ ಪಡೆದಿದ್ದರೆ ಮಾತ್ರ ಅವರ ಬಿಪಿಎಲ್ ಕಾರ್ಡ್‌ನ್ನು ರದ್ದುಪಡಿಸಿ ಎಪಿಎಲ್ ಕಾರ್ಡ್‌ಗೆ ವರ್ಗಾಯಿಸುವ ಪ್ರಕ್ರಿಯೆಯನ್ನು ಆಹಾರ ಇಲಾಖೆ ಚುರುಕುಗೊಳಿಸಿದೆ. ಇದನ್ನೇ ಅಸ್ತ್ರವಾಗಿಟ್ಟುಕೊಂಡು ಜನರಿಗೆ ಗೊಂದಲ ಮಾಡಬಾರದು, ಆದ್ದರಿಂದ ನೈಜ್ಯ ಪಡಿತರ ಚೀಟಿದಾರರು ಈ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು. ಬಡವರ ಬಿಪಿಎಲ್ ಕಾರ್ಡ್‌ಗಳು ಖಂಡಿತ ರದ್ದಾಗುವುದಿಲ್ಲ ಎಂದು ಅವರು ಸ್ಪ?ಪಡಿಸಿದ್ದಾರೆ.

ಅರ್ಹ ಬಿಪಿಎಲ್ ಕಾರ್ಡ್‌ದಾರರು ಅನ್ನಭಾಗ್ಯ ಯೋಜನೆಯಿಂದ ವಂಚಿತರಾಗದಂತೆ ಮುನ್ನಚ್ಚರಿಕೆ ಕ್ರಮವಾಗಿ ಕಾರ್ಯನಿರ್ವಹಿಸಲು ಜಿಲ್ಲಾ ಮತ್ತು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನು?ನ ಪ್ರಾಧಿಕಾರದ ಸದಸ್ಯರಿಗೆ ರಾಜ್ಯ ಗ್ಯಾರಂಟಿ ಯೋಜನೆಗಳ ಅನು?ನ ಪ್ರಾಧಿಕಾರದ ರಾಜ್ಯ ಅಧ್ಯಕ್ಷರು ಸೂಚನೆ ನೀಡಿದ್ದಾರೆ. ಗ್ಯಾರಂಟಿ ಪ್ರಾಧಿಕಾರದ ಸದಸ್ಯರು ಸರ್ಕಾರಿ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಅರ್ಹರಿಗೆ ಅನ್ಯಾಯವಾಗದಂತೆ ತಮ್ಮ ತಮ್ಮ ವಾರ್ಡ್ ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾರ್ಯಚಟುವಟಿಕೆ ನಡೆಸುವಂತೆ ಗ್ಯಾರಂಟಿ ಯೋಜನೆಗಳ ಅನು?ನ ಪ್ರಾಧಿಕಾರದ ಪ್ರಜಾ ಪ್ರತಿನಿಧಿಗಳ ಕಾರ್ಯನಿರ್ವಹಿಸಬೇಕು. ಗ್ಯಾರಂಟಿ ಪ್ರಾಧಿಕಾರದ ಎಲ್ಲಾ ಸದಸ್ಯರು ಪೂರ್ಣ ಪ್ರಮಾಣದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಅವರು ಸೂಚನೆ ನೀಡಿದ್ದಾರೆ.

ನ.23 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ ನವೆಂಬರ್ 21: ಶಿವಮೊಗ್ಗ ನಗರ ಉಪವಿಭಾಗ-೨ರ ವ್ಯಾಪ್ತಿಯ ಮಂಡ್ಲಿ ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕಾ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ನ.೨೩ ರಂದು ಬೆಳಗ್ಗೆ ೯.೦೦ ರಿಂದ ಮ. ೨.೦೦ ವರೆಗೆ ಸೀಗೆಹಟ್ಟಿ, ರವಿವರ್ಮ ಬೀದಿ, ಕೆಂಚರಾಯನ ಬೀದಿ, ಟಿ.ಎಸ್.ಆರ್.ರಸ್ತೆ, ಆಜಾದ್‌ನಗರ ೧ ರಿಂದ ೪ ನೇ ತಿರುವು, ಬಿ.ಬಿ.ರಸ್ತೆ, ಓ.ಟಿ.ರಸ್ತೆ, ಕುಂಬಾರ ಬೀದಿ, ನಾಗಭೂಷಣ ಪ್ರೆಟ್ರೋಲ್ ಬಂಕ್, ನ್ಯೂಮಂಡ್ಲಿ, ಮಂಡ್ಲಿ ಬೈಪಾಸ್, ಶಿವಶಂಕರ ರೈಸ್‌ಮಿಲ್, ಮುರಾದ್ ನಗರ, ಇಮಾಮ್ ಬಾಡ, ಜಿ.ಎಸ್.ಕೆ.ಎಂ.ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ನ.೨೬ ರಿಂದ ಭದ್ರ ನಾಲೆಗಳಿಗೆ ಮುಂಗಾರು ಹಂಗಾಮಿನ ನೀರು ಸ್ಥಗಿತ
ಶಿವಮೊಗ್ಗ ನವೆಂಬರ್21; : ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ ೨೦೨೪-೨೫ನೇ ಸಾಲಿನ ಮುಂಗಾರು ಹಂಗಾಮಿಗೆ ನೀರಾವರಿ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ, ಕಛೇರಿ ಅಧಿಸೂಚನೆಯ ದಿನಾಂಕ:೨೯.೦೭.೨೦೨೪ ರಿಂದ ಭದ್ರಾ ಜಲಾಶಯದಿಂದ ನೀರನ್ನು ಹರಿಬಿಡಲಾಗಿದ್ದು, ನೀರನ್ನು ಹರಿಸುವ ಗರಿ? ಅವಧಿ ೧೨೦ ದಿನಗಳು ದಿ:೨೬.೧೧.೨೦೨೪ಕ್ಕೆ ಪೂರ್ಣಗೊಳ್ಳಲಿದೆ.


ಆದ್ದರಿಂದ ದಿ:೨೬.೧೧.೨೦೨೪ರ ರಾತ್ರಿಯಿಂದ ಬಲದಂಡೆ ಮತ್ತು ಎಡದಂಡೆ ನಾಲೆಗಳಲ್ಲಿ ನೀರು ಹರಿಸುವುದನ್ನು ನಿಲ್ಲಿಸಲಾಗುವುದು. ಭದ್ರಾ ಜಲಾಶಯದ ಅಚ್ಚುಕಟ್ಟುದಾರರು ನಿಗಮದೊಂದಿಗೆ ಸಹಕರಿಸುವಂತೆ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Exit mobile version