Site icon TUNGATARANGA

ಕಂಪ್ಯೂಟರ್ ಸೆಂಟರ್ ಮೂಲಕ ನಕಲಿ ಲೇಬರ್ ಕಾರ್ಡ್ ; ಮೋಸ ಹೋಗದಂತೆ ಎಚ್ಚರಿಕೆ |ಡಿ.03 ವಿಶ್ವ ವಿಕಲಚೇತನರ ದಿನಾಚರಣೆ-2024 | ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

ಕಂಪ್ಯೂಟರ್ ಸೆಂಟರ್ ಮೂಲಕ ನಕಲಿ ಲೇಬರ್ ಕಾರ್ಡ್ ; ಮೋಸ ಹೋಗದಂತೆ ಎಚ್ಚರಿಕೆ

 ಶಿವಮೊಗ್ಗ ನವೆಂಬರ್ 30
 ಜಿಲ್ಲೆಯಲ್ಲಿ ಕೆಲವು ಕಂಪ್ಯೂಟರ್ ಸೆಂಟರ್‌ಗಳಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ನೀಡುತ್ತಿರುವ ಗುರುತಿನ ಚೀಟಿಗಳನ್ನೇ ಎಡಿಟ್ ಮಾಡಿ ಕಾರ್ಮಿಕರಿಗೆ ಲೇಬರ್ ಕಾರ್ಡ್ಗಳನ್ನು ಮಾಡಿಕೊಡುತ್ತೇವೆಂದು ಹೇಳಿ ಕಾರ್ಮಿಕರನ್ನು ವಂಚಿಸಿ, ನಕಲಿ ಕಾರ್ಮಿಕರ ಗುರುತಿನ ಚೀಟಿ ನೀಡುತ್ತಿದ್ದು ಇದು ಅಪರಾಧವಾಗಿದೆ. ಕಾರ್ಮಿಕರು ಇಂತಹವರಿAದ ಮೋಸ ಹೋಗಬಾರದೆಂದು ಜಿಲ್ಲಾ ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.
 ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರನ್ನು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಫಲಾನುಭವಿಗಳನ್ನಾಗಿ ನೋಂದಾಯಿಸಲು ಕಾರ್ಮಿಕ ನಿರೀಕ್ಷಕರುಗಳನ್ನು ನೋಂದಣಿ ಅಧಿಕಾರಿಯಾಗಿ ನೇಮಕ ಮಾಡಲಾಗಿರುತ್ತದೆ.


 ಆ ಪ್ರಕಾರ ಶಿವಮೊಗ್ಗ ಜಿಲ್ಲೆಯಾದ್ಯಂತ ಪ್ರತಿ ತಾಲ್ಲೂಕಿನಲ್ಲಿಯು ಕಾರ್ಮಿಕ ನಿರೀಕ್ಷಕರುಗಳು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರನ್ನು ನೋಂದಣಿ ಮಾಡಿ ಗುರುತಿನ ಚೀಟಿ (ಲೇಬರ್ ಕಾರ್ಡ್) ಗಳನ್ನು ನೀಡುತ್ತಿದ್ದಾರೆ.


 ಆದರೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವು ಕಂಪ್ಯೂಟರ್ ಸೆಂಟರ್‌ಗಳಲ್ಲಿ ಶಿವಮೊಗ್ಗ ಜಿಲ್ಲೆಯ ಕಾರ್ಮಿಕ ನಿರೀಕ್ಷಕರುಗಳ ಕಛೇರಿಗಳಲ್ಲಿ ನೋಂದಣಿ ಮಾಡಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ನೀಡುತ್ತಿರುವ ಗುರುತಿನ ಚೀಟಿಗಳನ್ನೇ ಎಡಿಟ್ ಮಾಡಿ ಕಾರ್ಮಿಕರಿಗೆ ಲೇಬರ್ ಕಾರ್ಡ್ಗಳನ್ನು ಮಾಡಿಕೊಡುತ್ತೇವೆಂದು ಹೇಳಿ ಕಾರ್ಮಿಕರನ್ನು ವಂಚಿಸಿ ಅವರಿಂದ ಕಾನೂನುಬಾಹಿರವಾಗಿ ಹೆಚ್ಚಿನ ಹಣವನ್ನು ಸಂಗ್ರಹ ಮಾಡಿ ನಕಲಿ ಕಾರ್ಡ್ ಗಳನ್ನು ಲೇಬರ್ ಕಾರ್ಡ್ಗಳೆಂದು ತಯಾರಿಸಿ ನೀಡುತ್ತಿರುವುದು ಈ ಕಛೇರಿಯ ಗಮನಕ್ಕೆ ಬಂದಿರುತ್ತದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು, ಅಂತಹ ಕಾರ್ಡ್ಗಳಿಗೆ ಯಾವುದೇ ಮಾನ್ಯತೆ ಇರುವುದಿಲ್ಲ ಹಾಗೂ ಇಲಾಖೆಯಿಂದ ಯಾವುದೇ ಸೌಲಭ್ಯಗಳು ಸಹ ದೊರೆಯುವುದಿಲ್ಲ.
 ಆದ ಕಾರಣ ಅಂತಹವರ ಬಗ್ಗೆ ಮಾಹಿತಿ ತಿಳಿದುಬಂದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಛೇರಿಗೆ ಅಥವಾ ಆಯಾಯ ತಾಲ್ಲೂಕುಗಳ ಕಾರ್ಮಿಕ ನಿರೀಕ್ಷಕರುಗಳ ಕಛೇರಿಗೆ ಮಾಹಿತಿಯನ್ನು ನೀಡುವುದರ ಮೂಲಕ ನಿಜವಾದ ಕಾರ್ಮಿಕರು ವಂಚನೆಗೊಳಗಾಗುವುದನ್ನು ತಪ್ಪಿಸಲು ಸಹಕರಿಸಬೇಕು.
 ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರನ್ನು ನೋಂದಣಿ ಮಾಡಿ ಗುರುತಿನ ಚೀಟಿ (ಲೇಬರ್ ಕಾರ್ಡ್)ಗಳನ್ನು ನೀಡುವ ನೋಂದಣಿ ಅಧಿಕಾರಿಗಳು ಶಿವಮೊಗ್ಗ ಜಿಲ್ಲೆಯ ಆಯಾಯ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರುಗಳಾಗಿದ್ದು, ಹೊಸದಾಗಿ ಲೇಬರ್ ಕಾರ್ಡ್ ಮಾಡಿಸುವ ಫಲಾನುಭವಿಗಳು ಸಿಎಸ್ ಸೆಂಟರ್‌ಗಳಲ್ಲಿ ಅರ್ಜಿ ಸಲ್ಲಿಸಿದ್ದಲ್ಲಿ ‘ಸ್ವೀಕೃತಿ ಪತ್ರ’ ಲಭ್ಯವಾಗುತ್ತದೆ. ತದನಂತರ ಕಾರ್ಮಿಕ ನಿರೀಕ್ಷಕರು ಕಾಲಮಿತಿಯೊಳಗೆ ಸ್ಥಳ ಪರಿಶೀಲನೆ ನಡೆಸಿ ಕಾರ್ಮಿಕ ಕಾರ್ಡ್ ಅನ್ನು ಅನುಮೋದನೆ ಮಾಡುತ್ತಾರೆ. ಅದರ ಆಧಾರದ ಮೇಲೆ ಫಲಾನುಭವಿಗಳು ಸಿಎಸ್‌ಸಿ ಸೆಂಟರ್‌ಗಳಲ್ಲಿ ಕಾರ್ಮಿಕ ಕಾರ್ಡ್ಗಳನ್ನು ಪಡೆಯಬಹುದಾಗಿರುತ್ತದೆ. ಇದರ ಹೊರತು ಬೇರೆ ಯಾವುದೇ ಕಂಪ್ಯೂಟರ್ ಸೆಂಟರ್ ಮತ್ತು ಇನ್ನಿತರ ಕಛೇರಿಗಳಲ್ಲಿ ಕಾರ್ಡ್ಗಳನ್ನು ನೋಂದಣಿ ಮಾಡಿ ನೀಡಲಾಗುವದಿಲ್ಲವೆಂಬುದನ್ನು ಎಲ್ಲರೂ ಮನಗಾಣಬೇಕೆಂದು ಈ ವಿಷಯದಲ್ಲಿ ಯಾರು ಸಹ ಮೋಸಹೋಗಬಾರದೆಂದು ಶಿವಮೊಗ್ಗ ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಎಂ.ಪಿ ವೇಣುಗೋಪಾಲ್ ರವರು ತಿಳಿಸಿರುತ್ತಾರೆ.

==

ಡಿ.03 ವಿಶ್ವ ವಿಕಲಚೇತನರ ದಿನಾಚರಣೆ-2024
ಶಿವಮೊಗ್ಗ ನ.30
 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲೆಯಲ್ಲಿ ವಿಕಲಚೇತನರ ಶ್ರೇಯೋಭಿವೃದ್ದಿಗಾಗಿ ಶ್ರಮಿಸುತ್ತಿರುವ ವಿವಿಧ ಸ್ವಯಂ ಸೇವಾ ಸಂಸ್ಥೆಗಳು ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಡಿ.03 ರ ಬೆಳಿಗ್ಗೆ 10 ಕ್ಕೆ ಅಂಬೇಡ್ಕರ್ ಭವನದಲ್ಲಿ ವಿಶ್ವ ವಿಕಲಚೇತರ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
 ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವ ಉತ್ತೇಜನ ಎಂಬುದು ಈ ವರ್ಷದ ಘೊಷವಾಕ್ಯವಾಗಿದೆ.
 ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನೆರವೇರಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ

ಇಲಾಖೆ ಸಚಿವರಾದ ಶ್ರೀಮತಿ ಲಕ್ಷಿö್ಮÃ ಆರ್ ಹೆಬ್ಬಾಳ್ಕರ್, ಶಾಸಕರು ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಬಿ.ಕೆ.ಸಂಗಮೇಶ್ವರ, ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
 ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅಧ್ಯಕ್ಷತೆ ವಹಿಸುವರು. ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ, ಅಧಿಕಾರಿಗಳು, ಜನಪ್ರತಿನಿಧಿಗಳು, ಸ್ವಯಂ ಸೇವಾ ಸಂಘದವರು ಪಾಲ್ಗೊಳ್ಳುವರು.

==

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ
ಶಿವಮೊಗ್ಗ ನವೆಂಬರ್.30
ದೂರ ಶಿಕ್ಷಣ-ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಯ ಪ್ರವೇಶವು 2025 ರ ಜನವರಿ 1 ರಿಂದ ಪ್ರಾರಂಭವಾಗಲಿದ್ದು ಸಹಕಾರ ಸಂಘಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಮಾತ್ರ ಪ್ರವೇಶ ಪಡೆಯಬಹುದು.


 ಡಿ. 20 ರವರೆಗೆ ಪ್ರವೇಶವು ತೆರೆದಿರುತ್ತದೆ. ರಾಜ್ಯದ ಎಲ್ಲಾ ವಿಧದ ಸಹಕಾರ ಸಂಘಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಹುದ್ದೆಯಲ್ಲಿ ಪದೋನ್ನತಿಗೆ ತರಬೇತಿಯು ಕಡ್ಡಾಯವಾಗಿರುತ್ತದೆ. ತರಬೇತಿಯ ಅವಧಿಯು 6 ತಿಂಗಳಾಗಿದ್ದು, ಅರ್ಜಿಯನ್ನು ಕರ್ನಾಟಕ ಇನ್ಸಿ÷್ಟಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ವಿನೋಬನಗರ, 2ನೇ ಹಂತ, ಶಿವಮೊಗ್ಗ-577204 ಇಲ್ಲಿ ಪಡೆಯಬಹುದು ಅಥವಾ www.kscfdcm.co.in ಆನ್‌ಲೈನ್ ಮೂಲಕ ಪ್ರವೇಶಾತಿ ಪಡೆಯಬಹುದಾಗಿದೆ.
 ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂ. ಸಂಖ್ಯೆ 08182-248873, ಮೊ.ನಂ 7022429440/7022441115/9845120371/7026246493 ಸಂಪರ್ಕಿಸಬಹುದು ಎಂದು ಶಿವಮೊಗ್ಗ ಕೆ.ಐ.ಸಿ.ಎಂ ನ ಪ್ರಾಂಶುಪಾಲರು ತಿಳಿಸಿದ್ದಾರೆ

Exit mobile version