ಭದ್ರಾವತಿ: ಇಂದು ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಹೋಬಳಿಯ ಬಗರ್ ಹುಕುಂ ಸಕ್ರಮೀಕರಣ ಸಮಿತಿ ಸಭೆಯು ಭದ್ರಾವತಿ ತಾಲ್ಲೂಕು ಕಚೇರಿಯಲ್ಲಿ ಸಮಿತಿಯ ಅಧ್ಯಕ್ಷರು ಹಾಗೂ ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ. ಬಿ. ಅಶೋಕ್ ನಾಯ್ಕ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ತಹಶೀಲ್ದಾರ್, ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು, ಸಮಿತಿಯ ಸದಸ್ಯರು ಹಾಜರಿದ್ದರು. ಸಭೆಯ ಪ್ರಾರಂಭದಲ್ಲಿ ಮಾತನಾಡಿದ ಶಾಸಕರು ಭದ್ರಾವತಿ ತಾಲ್ಲೂಕು ಕಚೇರಿಯಲ್ಲಿ ಕಚೇರಿ ಸಿಬ್ಬಂದಿಗಳು, ಗ್ರಾಮ ಲೆಕ್ಕಿಗರು, ರಾಜಸ್ವ ನಿರೀಕ್ಷಕರು, ಉಪ ತಹಸೀಲ್ದಾರ್ ರವರು ಸರಿಯಾಗಿ ಕೆಲಸ ಮಾಡುತ್ತಿಲ್ಲ ಜನರನ್ನು ಓಡಾಡಿಸುವುದು, ಕೆಲಸ ಮಾಡಿಕೊಡದೇ ಇರುವುದು ನನ್ನ ಗಮನಕ್ಕೆ ಬಂದಿದೆ ಎಲ್ಲಾ ಕೆಲಸಕ್ಕೂ ಜನರಿಂದ ಲಂಚ ಕೇಳುತ್ತಿದ್ದಾರೆ ಎಂದು ಸಾರ್ವಜನಿಕರು ನನ್ನ ಬಳಿ ದೂರನ್ನು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಈ ರೀತಿ ದೂರುಗಳು ಬಂದರೆ ಸಹಿಸುವುದಿಲ್ಲ ಎಂದು ತಿಳಿಸಿದರು.