ಶಿವಮೊಗ್ಗ, ಫೆ.13:
ದೆಹಲಿಯಲ್ಲಿ ನಡೆಯುತ್ತಿರುವ ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧದ ರೈತರ ಐತಿಹಾಸಿಕ ಹೋರಾಟಕ್ಕೆ ಬೆಂಬಲ ಸೂಚಿಸಿ ಜೆಡಿಎಸ್ ನ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್ ಮತ್ತು ಅವರ ಬಹುದೊಡ್ಡ ತಂಡ ದೆಹಲಿಗೆ ಭೇಟಿ ನೀಡಿ ಪ್ರಧಾನಿಗಳು ಕೂಡಲೇ ರೈತರ ಬೇಡಿಕೆ ಈಡೇರಿಸಲು ಆಗ್ರಹಿಸಿದರು.
ಈ ಸಂದರ್ಭದಲ್ಲಿ ದೇಶಾದ್ಯಂತದ ರೈತ ಹೋರಾಟಗಾರರ ಜೊತೆ ಮಾತುಕತೆ ನಡೆಸಿದ ಶ್ರೀಕಾಂತ್ ರವರು ಈ ಹೋರಾಟಕ್ಕೆ ಜಯ ಸಿಗಲೇಬೇಕೆಂದು ಹೇಳಿದರು.
ಅ.2 ರ ಗಾಂಧಿ ಜಯಂತಿಯವರೆಗೆ ರೈತರು ಕೇಂದ್ರ ಸರ್ಕಾರಕ್ಕೆ ಗಡುವು ನೀಡಿದ್ದು, ಕೇಂದ್ರ ಸರ್ಕಾರ ಕೂಡಲೇ ಈ ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದರು.