ಬೆಂಗಳೂರು: ಎರಡು ರಾಜ್ಯಗಳ ರಾಜ್ಯಪಾಲರಾಗಿದ್ದ, ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾಗಿದ್ದ, ಆರ್‌ಎಸ್‌ಎಸ್‌ನ ಸ್ವಯಂ ಸೇವಕರಾಗಿದ್ದ ಶಿವಮೊಗ್ಗ ತಾಲೂಕಿನ ತೀರ್ಥಹಳ್ಳಿಯ ವಿಧಾನಸಭಾ ಕ್ಷೇತ್ರದ ಮತ್ತೂರಿನ ಎಂ. ರಾಮಾ ಜೋಯಿಸ್ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಂವಿಧಾನ ತಜ್ಞರೂ ಆಗಿದ್ದ ರಾಮಾ ಜೋಯಿಸ್ ಅವರಿಗೆ 89 ವರ್ಷ ವಯಸ್ಸಾಗಿತ್ತು. ಇಂದು ಬೆಳಗ್ಗೆ 7.30ರ ಸುಮಾರಿಗೆ ಇವರು ನಿಧನರಾಗಿದ್ದಾರೆ.
1931ರ ಜುಲೈ 27ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮತ್ತೂರಿನಲ್ಲಿ ಜನಿಸಿದ ರಾಮಾ ಜೋಯಿಸ್ ಅವರು ಬಾಲ್ಯದಿಂದಲೇ ಆರ್‌ಎಸ್‌ಎಸ್ ನಂಟು ಹೊಂದಿದವರು.
ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಜಾರ್ಖಂಡ್ ಮತ್ತು ಬಿಹಾರ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ, ಕರ್ನಾಟಕದಿಂದ ರಾಜ್ಯಸಭೆಯ ಸದಸ್ಯರೂ ಆಗಿದ್ದರು.