ಬೆಂಗಳೂರು: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಜುಲೈ 15ರಿಂದ ಆರಂಭವಾಗಲಿದೆ ಎಂದು ಪ್ರಾಥಮಿಕ ಮತ್ತುಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2021-22ನೇ ಸಾಲಿನ ಶೈಕ್ಷಣಿಕ ವರ್ಷ ಜುಲೈ 15ರಿಂದ ರಾಜ್ಯಾದ್ಯಂತ ಆರಂಭವಾಗಲಿದೆ. ಇದಕ್ಕಾಗಿ ಎಲ್ಲ ರೀತಿಯ ಸಿದ್ದತೆಗಳನ್ನುಕೈ ಗೊಂಡಿದ್ದೇವೆ ಎಂದರು.
1ರಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ತರಗತಿಗಳನ್ನು ಆರಂಭಿಸಬೇಕೋ ಅಥವಾ ವಿದ್ಯಾಗಮ ಆರಂಭಿಸಬೇಕೋ ಎಂಬುದರ ಕುರಿತು ಇದೇ 24 ಮತ್ತು 25ರಂದು ತಜ್ಞರ ಜೊತೆ ಸಭೆ ನಡೆಸಿ ಸೂಕ್ತವಾದ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಸ್ಪಷ್ಟಪಡಿಸಿದರು.