Site icon TUNGATARANGA

ಶಿವಮೊಗ್ಗದಲ್ಲಿ ಕೋವಿಡ್ ಸೋಂಕಿಗೆ ಶಿಕ್ಷಕ ಬಲಿ!

ಶಿವಮೊಗ್ಗ,ಜು.2: ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದ 50 ವರ್ಷದ ಶಿಕ್ಷಕರೊಬ್ಬರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೃತಪಟ್ಟ ಶಿಕ್ಷಕರು ಕಡೂರು ಮೂಲದವರು ಎನ್ನಲಾಗಿದೆ.
ಈ ಶಿಕ್ಷಕರಿಗೆ ಅನಾರೋಗ್ಯ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಈ ಸಂದರ್ಭ ಅವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು, ಆದರೆ ವರದಿಯಲ್ಲಿ ಕೋವಿಡ್ ಸೋಂಕು ಇರುವುದು ದೃಢಪಟ್ಟಿದ್ದು ಕೂಡಲೇ ಅವರನ್ನು ಜಿಲ್ಲೆಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಮಧ್ಯಾಹ್ನ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಅಧಿಕೃತ ಮಾಹಿತಿ ಹೊರಬರಬೇಕಿದೆ.

Exit mobile version