Site icon TUNGATARANGA

ಶಿವಮೊಗ್ಗದಲ್ಲಿ ಸಂಜೆ 6 ಗಂಟೆಗೆ ಎಲ್ಲಾ Close!

ಶಿವಮೊಗ್ಗದಲ್ಲಿ ಕರೋನಾ ನಿಯಂತ್ರಣದ ಕ್ರಮವಾಗಿ ಸಂಜೆ 6ಗಂಟೆ ಬಳಿಕ ಅವಶ್ಯಕ ಸೇವೆಗಳನ್ನು ಹೊರತುಪಡಿಸಿ ಇತರ ವ್ಯಾಪಾರ ವಹಿವಾಟುಗಳನ್ನು ಇಂದಿನಿಂದ ನಿರ್ಬಂಧಿಸಲಾಗಿದ್ದು, ಸಾರ್ವಜನಿಕರು 6ಗಂಟೆಯ ಬಳಿಕ ರಸ್ತೆಗೆ ಇಳಿಯಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.
ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೋನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಕರೋನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡಿರುವ ಎಲ್ಲಾ ಕ್ರಮಗಳಿಗೆ ಸಾರ್ವಜನಿಕರು ಇದುವರೆಗೆ ಸಹಕರಿಸಿದ್ದಾರೆ. ಆದರೆ ಕೆಲವು ದಿನಗಳಿಂದ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಕಳವಳಕಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಜನರು ಒಂದೆಡೆ ಸೇರುವುದನ್ನು ತಪ್ಪಿಸುವ ಉದ್ದೇಶದಿಂದ ಎಲ್ಲರ ಸಲಹೆಯ ಪ್ರಕಾರ ಶಿವಮೊಗ್ಗದಲ್ಲಿ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲೆಡೆ ರಾತ್ರಿ 8ರಿಂದ ಕಫ್ರ್ಯೂ ಜಾರಿಯಲ್ಲಿರಲಿದ್ದು, ಶಿವಮೊಗ್ಗದಲ್ಲಿ ಇದು ಸಂಜೆ 6ಗಂಟೆಯಿಂದ ಜಾರಿಯಾಗಲಿದೆ ಎಂದು ಹೇಳಿದರು.
ಯಾವುದೇ ಕಾರಣಕ್ಕೂ ಒತ್ತಾಯದ ಲಾಕ್‍ಡೌನ್ ಜಾರಿಗೊಳಿಸುವುದಿಲ್ಲ. ಆದರೆ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಸೇರಿದಂತೆ ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲು ಸೂಚಿಸಲಾಗಿದೆ ಎಂದರು.

ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ಪೆಟ್ರೋಲ್ ಬಂಕ್ ಸೇವೆ : ಡಿಎಸ್ ಅರುಣ್

ಜಿಲ್ಲೆಯ ಜನತೆ ಕರೋನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳಿಗೆ ಎಲ್ಲಾ ರೀತಿಯ ಸಹಕಾರ ನೀಡಿದ್ದಾರೆ. ಇದೀಗ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದರೂ, ಸಂಪೂರ್ಣ ಲಾಕ್‍ಡೌನ್ ಕಾರ್ಯಸಾಧುವಲ್ಲ. ಆದರೆ ಸಾರ್ವಜನಿಕರು ವೈಯಕ್ತಿಕ ಶಿಸ್ತನ್ನು ಪಾಲಿಸುವ ಮೂಲಕ ಕರೋನಾ ನಿಯಂತ್ರಣ ಮಾಡಲು ಸಾಧ್ಯವಿದೆ. -ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್


Exit mobile version