Site icon TUNGATARANGA

ಶಿವಮೊಗ್ಗದ ಸುದ್ದಿ ಜಗತ್ತಿನಲ್ಲೇನಿದೆ….? ಇಲ್ಲಿ ನೋಡಿ!

ನಾಳೆ ಕರೆಂಟ್ ಕಟ್
ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎ.ಎಫ್-8 ಫೀಡರ್‍ಗೆ ಸಂಬಂಧಿಸಿದಂತೆ ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವಿವಿ ವ್ಯಾಪ್ತಿಯಲ್ಲಿ ಬರುವ ಕಾಶೀಪುರ, ಹುಚ್ಚರಾಯ ಕಾಲೋನಿ, ವೀರಣ್ಣ ಲೇಔಟ್, ಲಕ್ಷ್ಮೀಪುರ, ಕುವೆಂಪು ಬಡಾವಣೆ, ರೇಣುಕಾಂಬ ಬಡಾವಣೆ, ಸೂಡಾ ಕಾಂಪ್ಲೆಕ್ಸ್, ವಿನೋಬನಗರ ಪೊಲೀಸ್ ಠಾಣೆ, ಕೆಂಚಪ್ಪ ಲೇಔಟ್, ಚೇತನಾ ಪಾರ್ಕ್, ಜಯದೇವ ಬಡಾವಣೆ, ಶಿವಪ್ಪ ನಾಯಕ ಬಡಾವಣೆ, ಕಟ್ಟೆ ಸುಬ್ಬಣ್ಣ ಕಾಂಪ್ಲೇಕ್ಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾರ್ಚ್-20 ರಂದು ಬೆಳಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ನ.ಉ.ವಿ.3ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾ.23 ರಂದು ಟೆಲಿಕಾಂ ಗೂಗಲ್ ಮೀಟ್
ಶಿವಮೊಗ್ಗ ಬಿಎಸ್‍ಎನ್‍ಎಲ್ ಸಂಸ್ಥೆಯು ಎಲೆಕ್ಟ್ರಾನಿಕ್ ಮಾಧ್ಯಮದ ಮೂಲಕ ಮಾರ್ಚ್ -23 ರಂದು ಬೆಳಗ್ಗೆ 10.30 ರಿಂದ 11.30ರವರೆಗೆ ಗೂಗಲ್ ಮೀಟ್ https://meet.google.com/hkw-puqk-ttf ನಲ್ಲಿ ಸಾರ್ವಜನಿಕರಿಗೆ ಟೆಲಿಕಾಂ ಸೇವೆಗಳ ಬಗ್ಗೆ ಜಾಗೃತಿ ಮೂಡಿಸಲು ಗ್ರಾಹಕ ಶಿಕ್ಷಣ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಸಾರ್ವಜನಿಕರು ಯಾವುದೇ ಪ್ರಶ್ನೆಗಳನ್ನು ಮಾ. 22 ರೊಳಗಾಗಿ ಇಮೇಲ್ agmebsmo@gmail.com ಮೂಲಕ ಕಳುಹಿಸಿ, ಮಾ.23 ರಂದು ಭಾಗವಹಿಸುವಂತೆ ಸಂಸ್ಥೆಯ ಮಹಾಪ್ರಬಂದಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ನೀರಿನ ಬಿಲ್ ಪಾವತಿಸಿ, ನಳ ಸಂಪರ್ಕ ಕಡಿತ ತಪ್ಪಿಸಿ


ಶಿವಮೊಗ್ಗ ಜಲಮಂಡಳಿಯು ನಗರ ಗ್ರಾಹಕರಿಗೆ ನೀರಿನ ಬಾಕಿ ಕಂದಾಯ ಹಾಗೂ ಪ್ರಸಕ್ತ ಸಾಲಿನ ಕಂದಾಯವನ್ನು ಮಾ.25ರೊಳಗಾಗಿ ಪಾವತಿಸುವಂತೆ ಸೂಚಿಸಿದೆ.
ನೀರಿನ ಕಂದಾಯ ಪಾವತಿಸಲು ಬಾಕಿದಾರರು ಶಿವಮೊಗ್ಗ -1 ಕೇಂದ್ರ, ಜಲಮಂಡಳಿ ಕಚೇರಿ ಹಾಗೂ ಮಹಾನಗರ ಪಾಲಿಕೆ ಆವರಣದಲ್ಲಿರುವ ಕ್ಯಾಷ್ ಕೌಂಟರ್ ಮತ್ತು ಕರ ವಸೂಲಿಗಾರರ ಮುಖಾಂತರ ಪಾವತಿಸುವುದು. ತಪ್ಪಿದಲ್ಲಿ ಕಾನೂನು ಪ್ರಕಾರ ಮಾ.26 ರಿಂದ ನೀರು ಸರಬರಾಜು ನಳದ /ಒಳಚರಂಡಿ ಸಂಪರ್ಕವನ್ನು ಕಡಿತಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕ.ನ.ನೀ.ಸ ಮತ್ತು ಒ.ಚ.ಮಂ. ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇಂದಿನಿಂದ ಮೈಸೂರ್ ಸಿಲ್ಕ್ ಸೀರೆಗಳ ಪ್ರದರ್ಶನ ಮತ್ತು ಮಾರಾಟ
ಶಿವಮೊಗ್ಗದ ಹಳೇ ತಾಲೂಕು ಕಚೇರಿ ರಸ್ತೆಯ ಶ್ರೀ ವೀರಶೈವ ಕಲ್ಯಾಣ ಮಂದಿರದಲ್ಲಿ ಮಾ.19 ರಿಂದ 23 ರವರೆಗೆ ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಆಯೋಜಿಸಲಾಗಿದೆ.
ಕೆ.ಎಸ್.ಐ.ಸಿ.ಯ ನಿರ್ದೇಶಕ ವಿಜಯಕುಮಾರ್ ಇಂದು ವೆಳಿಗ್ಗೆ ಪ್ರದರ್ಶನ ಮತ್ತು ಮಾರಾಟವನ್ನು ಉದ್ಘಾಟಿಸುವರು. ಪ್ರದರ್ಶನ ಮತ್ತು ಮಾರಾಟ ಬೆಳಿಗ್ಗೆ 10 ರಿಂದ ರಾತ್ರಿ 8ರವರೆಗೆ ನಡೆಯಲಿದೆ. ಸಾಂಪ್ರದಾಯಿಕ ಮೈಸೂರು ಸಿಲ್ಕ್

ಪಾಲಿಕೆಯಿಂದ ಶಾಲೆ ಬಿಟ್ಡ ಮಕ್ಕಳ ಸರ್ಚ್
ಶಿವಮೊಗ್ಗ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಂದ 2020-21ನೇ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ಶಾಲೆಗೆ ಹಾಜರಾಗಲು ಮತ್ತು ಮುಖ್ಯವಾಹಿನಿಗೆ ತರಲು ಮನೆಮನೆ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ಸಮೀಕ್ಷಾದಾರರು ಮನೆ ಮನೆಗೆ ಭೇಟಿ ನೀಡಿದಾಗ ಮಗುವಿನ ಆಧಾರ್ ಕಾರ್ಡ್, ಜನನ ದಾಖಲೆ, ಪಾಸ್‍ಪೋರ್ಟ್ ಸೈಜಿನ ಫೋಟೋ, ರೇಷನ್ ಕಾರ್ಡ್, ತಂದೆ-ತಾಯಿಂದಿರ ಆಧಾರ್ ಕಾರ್ಡ್‍ಗಳೊಂದಿಗೆ ಮಾಹಿತಿ ನೀಡಲು ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರಲ್ಲಿ ಮಹಾನಗರ ಪಾಲಿಕೆ ಆಯುಕ್ತರು ಮನವಿ ಮಾಡಿರುತ್ತಾರೆ.

ನೀರಿನ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್ ಆರಂಭ
ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ದಿ: 21/03/2021 ರ ಭಾನುವಾರದಂದು 2020-21ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ಸೋಮಿನಕೊಪ್ಪ ದೇವರಾಜ ಅರಸ್ ಬಡಾವಣೆ ಪೆಟ್ರೊಲ್ ಬಂಕ್ ಎದುರು, ಜಯನಗರ ಸರ್ವೋದಯ ಶಾಲೆ ಆವರಣದ ಹತ್ತಿರ, ವಿನೋಬನಗರ ಪೊಲೀಸ್ ಚೌಕಿ ಹತ್ತಿರ, ಗುರುಪುರ ಹೊಳೆಹೊನ್ನೂರು ರಸ್ತೆ ಸರ್ಕಾರಿ ಶಾಲೆ ಹತ್ತಿರ ಹಾಗೂ ಕಾಮಾಕ್ಷಿ ಬೀದಿ ಎಲ್‍ಐಸಿ ಆಫೀಸ್ ಎದುರು ಗಣಪತಿ ದೇವಸ್ಥಾನದ ಹತ್ತಿರ ವಿಶೇಷ ನೀರಿನ ಕಂದಾಯ ವಸೂಲಾತಿ ಕೌಂಟರ್ ಗಳನ್ನು ತೆರೆಯಲಾಗಿದೆ.
ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸುವುದು ಅನಿವಾರ್ಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರುಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು ಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ
ಭದ್ರಾ ಜಲಾಶಯದಿಂದ ತುಂಗಾಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತ ಬೆಳೆಗಳನ್ನು ಸಂರಕ್ಷಿಸಲು ಮಾರ್ಚ್ 18 ರಿಂದ ಏಪ್ರಿಲ್ 01 ರವರೆಗೆ ತುಂಗಾಭದ್ರಾ ನದಿಗೆ ಸುಮಾರು 1.60 ಟಿ.ಎಂ.ಸಿ. ನೀರನ್ನು ಬಿಡಲಾಗುತ್ತಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಲು ಕೋರಲಾಗಿದೆ.
ಆದ್ದರಿಂದ ನದಿಯ ದಂಡೆಯ ಕೆಳಮಟ್ಟದಲ್ಲಿ ಸಾರ್ವಜನಿಕರು ತಿರುಗಾಡುವುದು, ದನಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಮಾಡುವುದನ್ನು ನಿರ್ಬಂಧಿಸಲಾಗಿದೆ. ಈ ಅವಧಿಯಲ್ಲಿ ರೈತರು ನದಿ ದಂಡೆಯಲ್ಲಿ ಅಳವಡಿಸಿದ ಪಂಪ್‍ಸೆಟ್‍ಗಳಿಂದ ನೀರೆತ್ತುವುದನ್ನು ಸಹ ನಿಷೇಧಿಸಲಾಗಿದೆ ಎಂದು ಭದ್ರಾ ಯೋಜನಾ ವೃತ್ತದ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಸಮೀಕ್ಷೆ
ಶಿವಮೊಗ್ಗ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಕಾರ್ಯ ನಿರ್ವಹಿಸುತ್ತಿರುವ ವ್ಯಕ್ತಿಗಳ ಗಣತಿ ಕಾರ್ಯವನ್ನು ಏಪ್ರಿಲ್-1 ರಿಂದ 3 ರವರೆಗೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಏಕಕಾಲದಲ್ಲಿ ನಡೆಸಲಾಗುತ್ತಿದ್ದು, ಮಹಾನಗರ ಪಾಲಿಕೆ/ನಗರಸಭೆ/ಪುರಸಭೆ/ಪಟ್ಟಣ ಪಂಚಾಯತಿ/ಗ್ರಾಮ ಪಂಚಾಯತಿಗಳ ಸಮೀಕ್ಷಾ ತಂಡದ ಅಧಿಕಾರಿಗಳು ನಗರ/ ಗ್ರಾಮಗಳಲ್ಲಿ ಸಂಚರಿಸಿ ಸಮೀಕ್ಷೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಸಹಕರಿಸಿ ಕಾರ್ಯನಿರ್ವಹಿಸಲು ಅನುವು ಮಾಹಿಕೊಡುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿರುತ್ತಾರೆ.
ಮ್ಯಾನ್ಯುವಲ್ ಸ್ಕ್ಯಾವೆಂಜರ್‍ಗಳು ತಾವಾಗಿಯೇ ಖುದ್ದು ಕಚೇರಿಯಲ್ಲಿ ನಿಗಧಿತ ನಮೂನೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ದಿ:01/04/21 ರಿಂದ 03/04/21 ರವರೆಗೆ ಸಮೀಕ್ಷೆ ಕ್ಯಾಂಪ್‍ಗಳನ್ನು ಆಯೋಜಿಸುವುದು, ದಿ:04/04/21 ರಿಂದ 03/05/21ರ ವರೆಗೆ ಮಹಾನಗರ ಪಾಲಿಕೆಯಲ್ಲಿ ಹಾಗೂ ದಿ: 04/04/21 ರಿಂದ 18/04/21ರವರೆಗೆ ನಗರಸಭೆ/ಪುರಸಭೆ/ಪಟ್ಟಣ ಪಂಚಾಯತಿ/ಗ್ರಾಮ ಪಂಚಾಯತಿಗಳಲ್ಲಿ ಅರ್ಜಿಗಳ ಪರಿಶೀಲನೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮಹಾನಗರ ಪಾಲಿಕೆ/ನಗರಸಭೆ/ಪುರಸಭೆ/ಪಟ್ಟಣ ಪಂಚಾಯತಿ/ಗ್ರಾಮ ಪಂಚಾಯತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲೆ ಮತ್ತು ತಾಲೂಕು ಕಚೇರಿಗಳನ್ನು ಸಂಪರ್ಕಿಸುವುದು.

Exit mobile version